ಸಿದ್ದರಾಮಯ್ಯ ವಿರುದ್ಧ 200 ಕೋಟಿ ರೂ. ಲೂಟಿ ಆರೋಪ ಮಾಡಿದ ಎನ್‌.ಆರ್ ರಮೇಶ್!

200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವ ಈ ಹಗರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗೆ ಆಗ್ರಹ.

ಬೆಂಗಳೂರು, ಮಾರ್ಚ್ 06: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.​ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿರುವ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಈ ಹಗರಣ ನಡೆದಿದೆ ಎಂದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿರುವ ಮತ್ತೊಂದು ಬೃಹತ್ ಹಗರಣ ಒದು ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫಿ, ತಿಂಡಿ, ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಿದ್ದಾರೆ ಎಂದಿದ್ದಾರೆ.

NR Ramesh Rs 200 Crore Allegation on Congress Leader Siddaramaiah

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ. 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿಯಾಗಿದೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಈ 5 ವರ್ಷಗಳ ಅವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಚೇರಿಯ ಕಾರ್ಯಗಳಿಗೆ ಕಾಫಿ, ಟೀ, ತಿಂಡಿ, ಉಪಹಾರ ಪೂರೈಕೆ ಕಾರ್ಯಗಳಿಗೆಂದು ವೆಚ್ಚ ಮಾಡಿರುವ ಒಟ್ಟು ಮೊತ್ತ 200,62,93,027 ರೂಪಾಯಿಗಳು. 5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ಪ್ರತಿಯೊಂದು ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚವಾಗಿದೆ. 410 ರಜಾ ದಿನಗಳನ್ನು ಹೊರತುಪಡಿಸಿದರೆ ಪ್ರತಿಯೊಂದು ದಿನಕ್ಕೆ ಸರಾಸರಿ 14 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ಆರ್‌ಟಿಐ ಕಾಯ್ದೆಯಡಿ ಉತ್ತರ ಪಡೆದು ದಾಖಲೆಗಳನ್ನು ನೀಡಿದ್ದಾರೆ.

ಅಧಿಕೃತ ದಾಖಲೆಗಳು ಹೇಳುವಂತೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಅಂದಿನ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಅತಿಥಿ - ಗಣ್ಯರ ಉಪಚಾರಗಳಿಗೆಂದು ವೆಚ್ಚ ಮಾಡಿರುವ ವರ್ಷಾವಾರು ವಿವರ ಈ ಕೆಳಕಂಡಂತಿದೆ.

NR Ramesh Rs 200 Crore Allegation on Congress Leader Siddaramaiah

2013-14 : 36,03,03,078 ರೂಪಾಯಿ

2014-15 : 38,26,68,575 ರೂಪಾಯಿ

2015-16 :36,66,19,743 ರೂಪಾಯಿ

2016-17 : 44,73,92,077 ರೂಪಾಯಿ

2017-18 : 44,93,09,554 ರೂಪಾಯಿ

ಒಟ್ಟು : 200,62,93,027 ರೂಪಾಯಿ

ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ, ಬೇರೆ ಇನ್ಯಾವ ಮುಖ್ಯಮಂತ್ರಿಗಳ ಅವಧಿಯಲ್ಲೂ ಸಹ ನಡೆಯದ "ಅತಿಥಿ ಉಪಚಾರ"ದ ಹೆಸರಿನ ಇಂತಹ ಭ್ರಷ್ಟಾಚಾರ ಸಿದ್ದರಾಮಯ್ಯನವರ ಅವಧಿಯಲ್ಲಿ ನಡೆದಿದೆ. ಸರ್ಕಾರದ ಯಾವೊಂದು ಯೋಜನೆಗಳನ್ನೂ ಬಿಡದೆ, ಎಲ್ಲದರಲ್ಲೂ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆಸಿದ್ದ ಸಿದ್ದರಾಮಯ್ಯನವರ ಸರ್ಕಾರವು ಕೊನೆಗೆ ಕಾಫಿ, ತಿಂಡಿ, ಉಪಹಾರದ ಹೆಸರಿನಲ್ಲೂ ಬೃಹತ್ ಮೊತ್ತದ ವಂಚನೆ ಎಸಗಿದೆ ಎಂದು ಎನ್‌ಆರ್‌ ರಮೇಶ್ ಕಿಡಿಕಾರಿದ್ದಾರೆ.

200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವ ಈ ಬೃಹತ್ ಹಗರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಲಾಗಿದೆ. ಜೊತೆಗೆ ಈ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಅವಧಿಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಎನ್‌ಆರ್ ರಮೇಶ್ ದೂರು ದಾಖಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+