• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

BREAKING: ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕ!

|

ಬೆಂಗಳೂರು, ಮೇ 30: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ನೇಮಕವಾಗಿದ್ದಾರೆ. ಈಗಾಗಲೇ 3 ಜನರು ಸಿಎಂ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಅವರೊಂದಿಗೆ ಇದೀಗ ಯಡಿಯೂರಪ್ಪ ಅವರಿಗೆ 4ನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಅವರು ನೇಮಕವಾಗಿದ್ದಾರೆ.

ಈ ಕುರಿತು ಅಧಿಕೃತವಾಗಿ ಸರ್ಕಾರದ ಆದೇಶ ಹೊರಬಿದ್ದಿದೆ. ಈಗಾಗಲೇ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕರಾದ ಎಸ್. ಆರ್. ವಿಶ್ವನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತು ಶಂಕರ ಗೌಡ ಪಾಟೀಲ್ ಅವರು ನೇಮಕವಾಗಿದ್ದಾರೆ. ಅವರೊಂದಿಗೆ ಇದೀಗ ಎನ್. ಆರ್. ಸಂತೋಷ್ ಕೂಡ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಸಣ್ಣ ವಯಸ್ಸಿನಲ್ಲಿಯೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ದಾಖಲೆಗೂ ಅವರು ಪಾತ್ರರಾಗಿದ್ದಾರೆ. ಸಾಮಾನ್ಯವಾಗಿ ನಾಲ್ಕೈದ ಬಾರಿ ಶಾಸಕರಾದವರನ್ನು, ರಾಜಕೀಯ ಅನುಭವ ಹೊಂದಿದವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ವಾಡಿಕೆಯಾಗಿತ್ತು.

English summary
Chief minister BS Yediyurappa's personal assistant N.R. Santosh is being appointed as cm political secretary
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X