ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್‌ಕ್ಲಾಸ್‌ ರೂಂ ಅಭಿವೃದ್ಧಿ!

|
Google Oneindia Kannada News

ಬೆಂಗಳೂರು, ಜು. 10: "ಕೊರೊನಾ ವೈರಸ್ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರ್ಕಾರ ಡಿಜಿಟಲ್‌ ಕಲಿಕೆಗೆ ಹೆಚ್ಚು ಒತ್ತು ನೀಡಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ ಅಶ್ವಥ್ ನಾರಾಯಣ ಹೇಳಿದರು. ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ವಿತರಣೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು.

"ಕೆಲ ದಿನಗಳಲ್ಲೇ ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಕಾಲೇಜ್‌ನಲ್ಲೂ ಎಲ್ಲ ತರಗತಿ ಕೊಠಡಿಗಳನ್ನೂ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ" ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು.

"ಇದಕ್ಕೆ ಪೂರಕವಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್‌ಟಾಪ್‌ಗಳನ್ನು ಎಲ್ಲ ಪದವಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿತ್ತು. ಅದಕ್ಕಾಗಿ 330 ಕೋಟಿ ರೂ. ಖರ್ಚು ಮಾಡಲಾಗಿತ್ತು. ಅದೇ ರೀತಿ ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡಲಾಗಿದೆ" ಎಂದರು.

Number of Smart Classrooms will be increased to 8500 in the current year

"ಅತ್ಯುತ್ತಮ ಕಂಟೆಂಟ್‌ ಜತೆಗೆ, ಪರಿಣಾಮಕಾರಿ ಕಲಿಕೆ ಎಲ್ಲ ಆಯಾಮಗಳಲ್ಲೂ ಸಹಕಾರಿಯಾದ ವ್ಯವಸ್ಥೆ ಇದು. 3.5 ಲಕ್ಷ ತರಗತಿಗಳನ್ನು ನಮ್ಮದೇ ಬೋಧಕರು ಅಪ್‌ಲೋಡ್‌ ಮಾಡಿದ್ದಾರೆ. ಇಂಥ ಅದ್ಭುತ ಯೋಜನೆಗೆ ಸರಕಾರ ಖರ್ಚು ಮಾಡಿದ್ದು ಕೇವಲ 4 ಕೋಟಿ ರೂ. ಮಾತ್ರ. ಇಂಥ ಉತ್ತಮ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಜನೆ ಮಾಡಬೇಕು. ಯಾವುದೇ ಕಾರಣಕ್ಕೂ ಮೈಮರೆಯಬಾರದು" ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Recommended Video

ಸಂಪುಟದಲ್ಲಿ ಕ್ರಿಮಿನಲ್ ಹಾಗೂ ಕೋಟ್ಯಾಧಿಪತಿ ಗಳಿಗೆ ಅಧಿಕಾರ ಕೊಟ್ರಾ ಮೋದಿ? | Oneindia Kannada

English summary
DyCM, Dr.C.N.Ashwatha Narayana told that, The government has set the target of converting 8500 classrooms of higher education into Smart Classes. Out of this 2500 smart classrooms have been already launched.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X