ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 5 ಕೋಟಿ ದಾಟಿದ ಮತದಾರರ ಸಂಖ್ಯೆ

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 25: ರಾಜ್ಯದ ಮತದಾರರ ಸಂಖ್ಯೆ ಪ್ರಸ್ತುತ 5,10,39,107ಕ್ಕೆ ಹೆಚ್ಚಳವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ನಿರಂತರ ನೋಂದಣಿ ಪ್ರಕ್ರಿಯೆಯಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು 13,46,330 ಮಂದಿ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 12,12,283 ಅರ್ಜಿಗಳನ್ನು ಅನುಮೋದಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾರರೇ, ಮತದಾನಕ್ಕೂ ಮುನ್ನ EVM, VVPAT ಬಗ್ಗೆ ತಿಳಿದುಕೊಳ್ಳಿಮತದಾರರೇ, ಮತದಾನಕ್ಕೂ ಮುನ್ನ EVM, VVPAT ಬಗ್ಗೆ ತಿಳಿದುಕೊಳ್ಳಿ

ಹೀಗಾಗಿ ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5 ಕೋಟಿಯ ಗಡಿ ದಾಟಿದೆ.

Number of voters crosses 5 crore in Karnataka

ಜಾಹೀರಾತು ಫಲಕಗಳ ಗೊಂದಲ ನಿವಾರಣೆ

ಬೆಂಗಳೂರು ನಗರದಲ್ಲಿ ಇರುವ 7,000 ಕ್ಕೂ ಹೆಚ್ಚು ಜಾಹೀರಾತು ಫಲಕಗಳ (Hoarding) ಬಳಕೆ ಬಗ್ಗೆ ಇರುವ ಗೊಂದಲ ನಿವಾರಿಸಲಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳಿಗೂ ಸಮಾನವಾಗಿ ಹೋರ್ಡಿಂಗ್ ಬಳಕೆಗೆ ಅವಕಾಶ ನೀಡುವ ಉದ್ದೇಶದಿಂದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಇದಕ್ಕೆ ತಗಲುವ ವೆಚ್ಚವನ್ನು ಪಕ್ಷ ಅಥವಾ ಅಭ್ಯರ್ಥಿಯ ವೆಚ್ಚದ ಖಾತೆಗೆ ನಿಗದಿಪಡಿಸಲಾದ ದರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ವಿವರಿಸಿದರು.

ಪ್ರಚಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಮತಿಗೆ ಸುವಿಧ ತಂತ್ರಾಂಶದ ಮೂಲಕ ಈವರೆಗೆ ಸ್ವೀಕರಿಸಿದ 5,483 ಅರ್ಜಿಗಳಲ್ಲಿ 5,249 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಮತದಾರರಿಗೆ ವೋಟರ್ಸ್ ಗೈಡ್ ಹಂಚಿಕೆ: ರಾಜ್ಯದಲ್ಲಿ ಮೊದಲ ಪ್ರಯೋಗಮತದಾರರಿಗೆ ವೋಟರ್ಸ್ ಗೈಡ್ ಹಂಚಿಕೆ: ರಾಜ್ಯದಲ್ಲಿ ಮೊದಲ ಪ್ರಯೋಗ

ಇನ್ನು ಹೆಲಿಕಾಪ್ಟರ್ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಜೊತೆಗೆ ಕಾನೂನುಬದ್ಧವಾಗಿ ಮದ್ಯ ಮಾರಾಟಕ್ಕೆ ಚುನಾವಣಾ ಆಯೋಗವು ಅಡ್ಡಿಪಡಿಸುವುದಿಲ್ಲ. ಆದರೆ ಮತದಾರರಿಗೆ ಆಮಿಷ ಒಡ್ಡಿದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಸ್ವಷ್ಟಪಡಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ಡಾ.ಬಿ.ಆರ್.ಮಮತಾ ಹಾಗೂ ಜಂಟಿ ಮುಖ್ಯ ಚುನಾವಣಾಧಿಕಾರಿ ಸೂರ್ಯಸೇನ್ ಅವರು ಉಪಸ್ಥಿತರಿದ್ದರು.

English summary
Karnataka assembly elections 2018: State voters number has risen to 5,10,39,107 said state Chief Electoral Officer Sanjeev Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X