ಹಾವೇರಿ: ವೈದ್ಯನ ಕೊಠಡಿಯಲ್ಲೇ ನರ್ಸ್ ನೇಣಿಗೆ ಶರಣು

Posted By:
Subscribe to Oneindia Kannada

ಹಾವೇರಿ, ಡಿಸೆಂಬರ್ 17: ಹಾವೇರಿಯ ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸರಿತ್ತಿ ಗ್ರಾಮದ ಸರಕಾರಿ ಆಸ್ಪತ್ರೆಯ ವೈದ್ಯನ ಕೊಠಡಿಯಲ್ಲಿ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾಕ್ಟರ್ ಲೋಹಿತ್ ಅವರ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಜೀಮಾ ಬಾನು(26) ಶಿರಹಟ್ಟಿ ತಾಲೂಕಿನ ಸಂತೆ ಶಿಗ್ಲಿ ಗ್ರಾಮದ ನಿವಾಸಿ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ.[ಭಾರತೀಯ ಸೇನೆಯ ಮಹಿಳಾ ಅಧಿಕಾರಿ ಆತ್ಮಹತ್ಯೆ]

suicide

ಇನ್ನು ಗುತ್ತಲಾ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಪೂರ್ವ ನಿಯೋಜಿತ ಕೋಲೆಯೋ ಎಂಬ ಶಂಕೆ ವ್ಯಕ್ತವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Nurse Suicide at the doctor's room in haveri taluk hosaritti village. Why nurse suicide Cause don't no.
Please Wait while comments are loading...