ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನರ್ಸರಿ ಶಾಲೆಗಳ ಕಡ್ಡಾಯ ನೋಂದಣಿಗೆ ಸರಕಾರದ ಸುತ್ತೋಲೆ

ಎಲ್ಲಾ ಪೂರ್ವ ಪ್ರಾಥಮಿಕ (ನರ್ಸರಿ) ಶಾಲೆಗಳನ್ನು ಕಡ್ಡಾಯ ನೋಂದಾವಣೆ ಮಾಡುವಂತೆ ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ.

By Sachhidananda Acharya
|
Google Oneindia Kannada News

ಬೆಂಗಳೂರು, ಮಾರ್ಚ್ 1: ಎಲ್ಲಾ ಪೂರ್ವ ಪ್ರಾಥಮಿಕ (ನರ್ಸರಿ) ಶಾಲೆಗಳನ್ನು ಕಡ್ಡಾಯ ನೋಂದಾವಣೆ ಮಾಡುವಂತೆ ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ.

ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ಶಾಲೆಗಳಲ್ಲಿ ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಇಂಥಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಮೂಲಕ ಮೂಲಸೌಕರ್ಯ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಭದ್ರತಾ ಕ್ರಮ ತೆಗೆದುಕೊಳ್ಳದೆ ತಲೆ ಎತ್ತುತ್ತಿದ್ದ ನರ್ಸರಿ ಶಾಲೆಗಳ ಮೇಲೆ ಸರಕಾರ ನಿಯಂತ್ರಣ ಸಾಧಿಸಲು ಹೊರಟಿದೆ.[ಬೀಗ ಹಾಕಬೇಕಿದ್ದ ಕನ್ನಡ ಶಾಲೆ ಉಳಿದು, ಬೆಳೆದ ಕಥೆ!]

Nursery schools must be registered - Karnataka Govt

ನರ್ಸರಿ ವಿದ್ಯಾರ್ಥಿಗಳ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಶಾಲೆಗಳ ಆರಂಭಕ್ಕೆ ಮಾನ್ಯತೆ ಪಡೆಯುವ ನಿಯಮವನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ.

ಈ ಸಂಬಂಧ ಇದಕ್ಕಾಗಿ ಕರ್ನಾಟಕ ಶಿಕ್ಷಣ ಅಧಿನಿಯಮ1983ರ ಸೆಕ್ಷನ್ 30 ಮತ್ತು 31 ಹಾಗೂ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ವರ್ಗೀಕರಣ ಮತ್ತು ನೋಂದಣಿ) ನಿಯಮ 1997 ರ ಸೆಕ್ಷನ್ 3ರಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿಗೆ ಇರಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸಿ ಆದೇಶಿಸಲಾಗಿದೆ. ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ (ಪ್ರಾಥಮಿಕ) ರೇವಯ್ಯ ಸುತ್ತೋಲೆ ಹೊರಡಿಸಿದ್ದಾರೆ.[ಆಲತ್ತೂರಿನಲ್ಲಿ ನಾಮ್ ಕೇ ವಾಸ್ತೆ ಕನ್ನಡ ಶಾಲೆ, ನೀನೇ ಅಂತ ಕೇಳೋರಿಲ್ವೆ]

Nursery schools must be registered - Karnataka Govt

ಈ ಮೊದಲಿನ ಅಧಿಸೂಚನೆಯಲ್ಲಿ ಕೇವಲ ಮಾನ್ಯತೆ ಪಡೆಯಲು ಇರಬೇಕಾದ ಮಾರ್ಗಸೂಚಿಗಳ ಸೂಚನೆ ನೀಡಲಾಗಿತ್ತೇ ಹೊರತು ಮಾನ್ಯತೆ ಕಡ್ಡಾಯಗೊಳಿಸಿರಲಿಲ್ಲ. ಹೀಗಾಗಿ 05-10-2015ರ ಸುತ್ತೋಲೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಉಳಿದಂತೆ ಹಳೆಯ ನಿಯಮ ಮತ್ತು ಮಾನದಂಡಗಳು ಮುಂದುವರಿಯಲಿವೆ.

ಈ ಹಿಂದೆ ಸರ್ಕಾರ 2016-17ನೇ ಸಾಲಿನಿಂದ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸೂಚಿಸಿತ್ತು. ಆನ್ಲೈನಿನಲ್ಲಿ ಸಲ್ಲಿಸಿದ ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲನೆ ನಡೆಸಿ ಮಾನ್ಯತೆ ನೀಡುತ್ತಿದ್ದರು. ಇದು ಕಡ್ಡಾಯವಾಗಿರದಿದ್ದರಿಂದ ಕೆಲವರಷ್ಟೇ ಅರ್ಜಿ ಸಲ್ಲಿಸುತ್ತಿದ್ದರು. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ 2 ಸಾವಿರ, ತಾಲೂಕು ಮಟ್ಟದಲ್ಲಿ 5 ಸಾವಿರ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿರುವ 10 ಸಾವಿರ ರೂಪಾಯಿ ನೋಂದಣಿ ಶುಲ್ಕ ಪಾವತಿಸಬೇಕಾಗಿತ್ತು. ಇದರೊಟ್ಟಿಗೆ ಕೆಲವು ಮಾರ್ಗಸೂಚಿಗಳನ್ನೂ ಅನುಸರಿಸಬೇಕಾಗಿತ್ತು.

English summary
Karnataka state government sends new notification that all nursery schools must be registered with government after the serious of harassment cases occurred in schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X