ಬಾಗಲಕೋಟೆ: ನರ್ಸಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು

Posted By:
Subscribe to Oneindia Kannada

ಬಾಗಲಕೋಟೆ, ಜುಲೈ 11 : ಜಿಲ್ಲೆಯ ಗದ್ದನಕೇರಿ ಗ್ರಾಮದ ಬಾಡಿಗೆ ಮನೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಗಲಕೋಟೆ,: ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಗದಗ ಜಿಲ್ಲೆಯ ಕುರ್ತಕೋಟೆ ಮೂಲದ ವಿಜಯಲಕ್ಷ್ಮಿ ಬಾಪುಳೆ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಜ್ಜಲಶ್ರೀ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಗದ್ದನಕೇರಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಳು.

Nursing Student Commits suicide in Bagalkot

ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Shri B.V.V. Sangha Sajjalashri Institute of Nursing Science College Bagalkot , 20 year old nursing student Vijayalakshmi Bapule committed suicide by hanging in Gaddankeri rented house on Monday night. The reason is yet to be known.
Please Wait while comments are loading...