ದೀಪಾವಳಿ ಊರಿಗೆ ಹೋಗುವವರಿಗೆ ಶುಭಸುದ್ದಿ: NWKRTC 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ!

ಹುಬ್ಬಳ್ಳಿ: ಪ್ರಸ್ತಕ 2026ನೇ ಸಾಲಿನ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಬೇರೆ ಬೇರೆ ಊರುಗಳಿಂದ ಪ್ರಯಾಣಿಕರ ಓಡಾಟ, ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಈ ಕಾರಣಕ್ಕೆ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವತಿಯಿಂದ ನೂರಾರು ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ದಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು ಸುಮಾರು 340 ಹೆಚ್ಚುವರಿ ಪ್ರತಿಷ್ಟಿತ ಮತ್ತು ಕರ್ನಾಟಕ ಸಾರಿಗೆ ವಿಶೇಷ ಸಾರಿಗೆ ಬಸ್‌ಗಳನ್ನು ಬಿಡಲಾಗಿದೆ.

NWKRTC Announces 340 Special Buses

ಈ ಬಸ್‌ಗಳು 2026 ನವೆಂಬರ್ 09 ರಂದು ಸೋಮವಾರ, ಅಮವಾಸ್ಯೆ ಮತ್ತು ನವೆಂಬರ್ 10 ರಂದು ಮಂಗಳವಾರ ಬಲಿಪಾಂಡ್ಯಮಿ ಹಬ್ಬದಂದು ಸಂಚಾರ ಸೇವೆ ಒದಗಿಸಲಿವೆ. ಅಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸದರಿ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆಯುವಂತೆ ಅವರು ಕೋರಿದ್ದಾರೆ.

ಬೆಂಗಳೂರಲ್ಲಿ ಎಲ್ಲಿಂದ ಬಸ್ ಸಂಚಾರ

ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಬೆಂಳೂರಿನ ಬೇರೆ ಬೇರೆ ಭಾಗಗಳಲ್ಲಿ ನೆಲೆಸಿರುವ ಉತ್ತರ ಕರ್ನಾಟಕ NWKRTC ವ್ಯಾಪ್ತಿಯ ಪ್ರಯಾಣಿಕರು ಬೆಂಗಳೂರಿನಿಂದ ಪ್ರಯಾಣಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ವಿವಿಧ ಸ್ಥಳಗಳಾದ ಕೆಂಪೇಗೌಡ ಬಸ್ ನಿಲ್ದಾಣ, ವಿಜಯ ನಗರ (TTMC), ಮಲ್ಲೇಶ್ವರಂ, ಶಾರದಾ ಕಾಲೋನಿ, ಯಶವಂತಪುರ (TTMC), ಹಾಗೂ ಬಸವೇಶ್ವರ ನಗರ (TTMC) ಬಸ್ ನಿಲ್ದಾಣಗಳಿಂದ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯಾಪ್ತಿಯ ಚಿಕ್ಕೋಡಿ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ, ಗದಗ, ಶಿರಸಿ, ಸೇರಿದಂತೆ ಮೊದಲಾದ ಸ್ಥಳಗಳಿಗೆ ತಲುಪಬಹುದು. ಈ ಬಸ್‌ಗಳು ನವೆಂಬರ್ 06 ಶುಕ್ರವಾರ ದಿಂದ ನವೆಂಬರ್ 08ರ ಸೋಮವಾರ ದವರಿಗೆ ಬೆಂಗಳೂರಿನಿಂದ ಸಂಚರಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್ ದರದಲ್ಲಿ ಶೇ.5ರಷ್ಟು ರಿಯಾಯಿತಿ

ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಆಸನಗಳನ್ನು ಒಂದೇ ಬಾರಿಗೆ ನೀವು ಕಾಯ್ದಿರಿಸಿದರೆ ನಿಮಗೆ ಟಿಕೆಟ್ ದರದಲ್ಲಿ ಶೇ.5ರಷ್ಟು ರಿಯಾಯಿತಿ ಸಿಗಲಿದೆ. ಹೆಚ್ಚಿನ ಮಾಹಿತಿಗೆ ನೀವು 63649 40880ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

KSRTC 2,600 ವಿಶೇಷ ಬಸ್‌ ವ್ಯವಸ್ಥೆ

ದೀಪಾವಳಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನವೆಂಬರ್ 06ರಿಂದ 8ರವರೆಗೆ ಬೆಂಗಳೂರಿನಿಂದ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 10 ಮತ್ತು 11ರಂದು 2,600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ಗಳು ಕರ್ನಾಟಕದ ವಿವಿಧ ಜಿಲ್ಲೆಗಳಿಗೆ, ನೆರೆ ರಾಜ್ಯಗಳಿಗೆ ಸಂಚಾರ ಮಾಡಲಿವೆ.

ಈ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಟಿಟಿಎಂಸಿ ನಿಲ್ದಾಣಗಳಿಂದ ಕಾರ್ಯಾಚರಣೆ ಮಾಡಲಿವೆ. ಮುಂಗಡ ಕಾಯ್ದಿರಿಸಿದ ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಶಾಂತಿನಗರ ಟಿಟಿಎಂಸಿ, ವಿಜಯನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಜಯನಗರ ಟಿಟಿಎಂಸಿ, ಮಲ್ಲೇಶ್ವರಂ 18 ನೇ ಕ್ರಾಸ್ ಬಸ್ ನಿಲ್ದಾಣ, ಬಸವೇಶ್ವರ ನಗರ ಬಸ್ ನಿಲ್ದಾಣ (ಶಾರದಾ ಕಾಲೋನಿ), ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಹಾಗೂ ಇನ್ನಿತರೆ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+