Property Survey: ಈ ಸಾರಿಗೆ ನಿಗಮದ ಆಸ್ತಿ ರಕ್ಷಣೆಗೆ ಹೊಸ ಪ್ಲಾನ್: ರಾಮಲಿಂಗಾ ರೆಡ್ಡಿ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (NWKRTC) ಸಂಸ್ಥೆಯು ಡಿಜಟಲೀಕರಣ ಮೂಲಕ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳ ರಕ್ಷಣೆಗೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ಸೇರಿದಂತೆ ವಿವಿಧ ಸಮಸ್ಯೆಗಳ ನಿವಾರಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಹತ್ವದ ಸೂಚನೆ ನೀಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನಿರ್ದೇಶನ ಮೇರೆಗೆ ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ತಡೆಯುವುದು, ಒತ್ತುವರಿ ಆಗಿರುವುದನ್ನು ಗುರುತಿಸುವುದು. ಆಸ್ತಿಗಳ ವಾಸ್ತವತೆ ತಿಳಿದುಕೊಳ್ಳುವುದು, ಕೆಲವಡೆ ಸಮರ್ಪಕ ದಾಖಲೆ ನಿರ್ವಹಣೆ ಕೊರತೆ, ಅಧಿಕಾರಿಗಳ ವರ್ಗಾವಣೆಯಿಂದಾಗಿ ಆಸ್ತಿಗಳ ಮಾಹಿತಿ ಇಲ್ಲದಿರುವುದು. ಇತರೆ ಕಾರಣಗಳಿಂದಾಗಿ ಆಸ್ತಿಗಳು ಖಾಸಗಿಯವರ ಪಾಲಾಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಅದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

NWKRTC Begins Property Digitization 683 Acres Surveyed Ramalinga Reddy

6 ಜಿಲ್ಲೆಗಳಲ್ಲಿ ₹2500 ಕೋಟಿ ಮೌಲ್ಯದ ಆಸ್ತಿ

ಕಂದಾಯ ಇಲಾಖೆಯ ಲ್ಯಾಂಡ್ ಬೀಟ್ ಆ್ಯಪ್ ಬಳಸಿ ಆಸ್ತಿಗಳ ನಕಾಶೆ, ದಾಖಲೆ ಜತೆ ಸರ್ವೆ ಮಾಡಲಾಗುತ್ತಿದೆ. ಸಂಸ್ಥೆಯ ಆರು ಜಿಲ್ಲೆಗಳಲ್ಲಿ 255 ಆಸ್ತಿಗಳ ಒಟ್ಟು 683.20 ಎಕರೆ ಭೂಮಿ ಹೊಂದಿದ್ದು ಮೌಲ್ಯ ರೂ. 2500 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಕೆಲವೆಡೆ ಒತ್ತುವರಿಯಾಗಿದೆ. ಇನ್ನು ಹಲವೆಡೆ ಒತ್ತುವರಿ ಹಂತದಲ್ಲಿವೆ. ಇದಕ್ಕೆ ಕಡಿವಾಣ ಹಾಕಲು ನಿವೃತ್ತ ತಹಸೀಲ್ದಾರರ ನೆರವು ಪಡೆದು, ಸಂಸ್ಥೆಯ ಕಾಮಗಾರಿ ಇಲಾಖೆಯ ಎಂಜಿನಿಯರ್ ಗಳಿಗೆ ತರಬೇತಿ ನೀಡಿ ಸರ್ವೆ ಮಾಡಿಸಲಾಗುತ್ತಿದೆ.

143 ಆಸ್ತಿಗಳ ಸರ್ವೇ

ಮೊದಲ ಹಂತದಲ್ಲಿ 143 ಆಸ್ತಿಗಳಲ್ಲಿ 109 ಸೇವೆ (ಶೇಕಡಾ 76.22 ಆಸ್ತಿಗಳ ಸರ್ವೆ) ಮುಗಿದಿದೆ. ಎರಡನೇ ಸರ್ವೆ ಕಾರ್ಯ ಶೀಘ್ರದಲ್ಲಿ ನಡೆಯಲಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಂತೆ ಆಸ್ತಿಗಳ ಸರ್ವೆ ಮತ್ತು ದಾಖಲೆಗಳ ಪರಿಶೀಲನೆ ಕೈಗೆತ್ತಿಕೊಳ್ಳಲು‌ ಎಲ್ಲಾ ಸಾರಿಗೆ ನಿಗಮಗಳಿಗೆ ಸೂಚನೆ‌ ನೀಡಲಾಗಿದೆ. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳ ಸಂರಕ್ಷಣೆ ಮಾಡಿಕೊಳ್ಳದಿದ್ದರೆ ಆಸ್ತಿ ಅತಿಕ್ರಮಣವಾಗುತ್ತದೆ. ಸಂಸ್ಥೆಯ ಒಡೆತನದ ಆಸ್ತಿಯ ಸಂರಕ್ಷಣೆ ನಮ್ಮ ಜವಾಬ್ದಾರಿ ಆಗಿರಬೇಕು ಎಂದು ಪ್ರಕಟಣೆಯಲ್ಲಿ ಸಂಸ್ಥೆ ಮಾಹಿತಿ ನೀಡಿದೆ.

NWKRTC ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ...

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟು ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳ 141 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಸಿಕ್ಕ ನಂತರ ಅವರ ಸಂಖ್ಯೆ ಹೆಚ್ಚಾಗಿದ್ದು, ಕೆಲ ಬಸ್ ನಿಲ್ದಾಣಗಳಲ್ಲಿ ಕಳ್ಳತನ ಹಾಗೂ ಸರಕು ನಾಪತ್ತೆ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+