ಬೆಂಗಳೂರು-ಉತ್ತರ ಕರ್ನಾಟಕದ ಈ ಪ್ರವಾಸಿ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ: NWKRTC
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET Exam 2025) ಏಪ್ರಿಲ್ 17ರಂದು ಪೂರ್ಣಗೊಂಡಿದೆ. ಅಲ್ಲದೇ ಎಲ್ಲ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿರುವ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಹೆಚ್ಚು ಬಸ್‌ಗಳನ್ನು 'ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ' (NWKRTC) ಕಾರ್ಯಾಚರಣೆ ಮಾಡುತ್ತಿದೆ. ರಾಜಧಾನಿಯಿಂದ ವಿವಿಧ ಜಿಲ್ಲೆಗಳಿಗೆ ಬಸ್ ಸಂಚರಿಸಲಿವೆ. ವೇಳಾಪಟ್ಟಿ, ದಿನಾಂಕ, ಟಿಕೆಟ್ ಬುಕ್ಕಿಂಗ್ ಮಾಹಿತಿ ಇಲ್ಲಿದೆ.
ಈ ಹಿಂದೆ ಹುಣ್ಣಿಮೆ, ಜಾತ್ರೆಗಳ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಶ್ರೀ ಸೌವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ಬಸ್ ಬಿಡುಗಡೆ ಮಾಡಿತ್ತು. ಅಲ್ಲದೇ ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಅಪಾಯ ಭಕ್ತಾಧಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಬೇಸಿಗೆ ರಜೆಗೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ 02 ದಿನ ವಿಶೇಷ ಹೆಚ್ಚುವರಿ ಬಸ್‌ಗಳ ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ. ರಾಜಧಾನಿ ಬೆಂಗಳೂರಿನಿಂದಲೇ ವಿಶೇಷ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳ ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 18 ಮತ್ತು 19 ರಂದು ಎರಡು ದಿನಗಳು ದಕ್ಷಿಣ ಕರ್ನಾಟಕದ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕಕ್ಕೆ ಸಂಚರಿಸಲಿವೆ. ಇದರ ಸುದುಪಯೋಗ ಪಡೆದುಕೊಳ್ಳುವಂತೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಮಾಹಿತಿ ನೀಡಿದೆ.
ಯಾವೆಲ್ಲ ಜಿಲ್ಲಾ ತಾಣಗಳಿಗೆ ಬಸ್ ಸಂಚಾರ ಇರುತ್ತೆ?
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾನ ಮೆಜೆಸ್ಟಿಕ್‌ನಿಂದ ಹುಬ್ಬಳ್ಳಿ-ಧಾರವಾಡ, ಗದಗ-ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಹಾಗೂ ಇನ್ನಿತರ ಸ್ಥಳಗಳಿಗೆ ಈ ವಿಶೇಷ ಹೆಚ್ಚುವರಿ ಸಾರಿಗೆ ಬಸ್‌ಗಳು ಸೇವೆ ನೀಡಲಿವೆ. ಟಿಕೆಟ್ ದರ ಎಂದಿನಂತೆ ಸಾಮಾನ್ಯವಾಗಿರಲಿದೆ. ಅಲ್ಲದೇ ಈ ಬಸ್‌ಗಳು ರಾಜ್ಯದಲ್ಲಿ ಸಂಚರಿಸುವ ಕಾರಣ ಮಹಿಳೆಯರು ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ಏಪ್ರಿಲ್ 18 ಮತ್ತು 19 ಈ ಎರಡು ದಿನಗಳು ವಾರಾಂತ್ಯದ್ದಾಗಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸಬಹುದು. ಅಲ್ಲದೇ ಮಕ್ಕಳ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರವಾಸಿ ಸ್ಥಳಗಳಿಗೆ, ಬೇರೆ ಬೇರೆ ಊರುಗಳಿಗೆ ಸುತ್ತಾಡುವ ಆಸೆ ಹೊಂದಿರುತ್ತಾರೆ. ಮಕ್ಕಳ ರಜಾ ದಿನಗಳನ್ನು ಮಜಾವಾಗಿಸಲು ಪೋಷಕರಿಗೆ ಸಾರಿಗೆ ನಿಗಮ ಉತ್ತಮ ಸೌಲಭ್ಯ ನೀಡುತ್ತಿದೆ.

ಹೆಚ್ಚಿನ ಮಾಹಿತಿ, ಟಿಕೆಟ್ ಬುಕ್ಕಿಂಗ್‌ಗೆ ಗಮನಿಸಿ
ಉತ್ತರ ಕರ್ನಾಟಕದ ಪ್ರವಾಸಿ ಸ್ಥಳಗಳಿಗೆ ಹೋಗುವ ಆಸಕ್ತರು www.ksrtc.in ಗೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಬೇಕು. ಹೆಚ್ಚಿನ ಮಾಹಿತಿಗೆ www.nwkrts.gov.inಗೆ ಸಂಪರ್ಕಿಸಬೇಕು ಅಥವಾ ವಾಟ್ಸಾಪ್ ಸಂಖ್ಯೆ 77609 91555 ಗೆ ಸಂಪರ್ಕಿಸಬೇಕು, ಹಾಯ್ ಎಂದು ಸಂದೇಶ ಕಳುಹಿಸುವ ಮೂಲಕ ಅಗತ್ಯ ಮಾಹಿತಿ ಪಡೆಯುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮಾಹಿತಿ ನೀಡಿದೆ.












Click it and Unblock the Notifications