ಎನ್‌.ವೈ.ಗೋಪಾಲಕೃಷ್ಣ 'ಕೈ' ತಪ್ಪಲಿದೆ ಬಳ್ಳಾರಿ ಟಿಕೆಟ್!

ಬಳ್ಳಾರಿ, ಏಪ್ರಿಲ್ 05 : ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಉಪಸಭಾಪತಿ ಎನ್‌.ವೈ.ಗೋಪಾಲಕೃಷ್ಣ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ?. ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಆತಂಕವೂ ಎದುರಾಗಿದೆ.

ಎನ್.ವೈ. ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ಅಥವ ಬಳ್ಳಾರಿ ಗ್ರಾಮೀಣ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸಿದ್ದಾರೆ. ಬಳ್ಳಾರಿಯನ್ನು ಕಡೆಗಣಿಸಿದ್ದಾರೆ ಎಂಬ ಆರೋಪವೂ ಇದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಿದ್ದ ಎನ್.ವೈ. ಗೋಪಾಲಕೃಷ್ಣ ಅವರು ಒಮ್ಮೆ ಉಪಸಭಾಪತಿಯಾಗಿದ್ದರು. ಆ ನಂತರ ಕ್ಷೇತ್ರದ ಜನರು ರಾಜಕೀಯದ ಬೀಜಾಕ್ಷರಗಳೇ ತಿಳಿಯದ ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿ ತಿಪ್ಪೇಸ್ವಾಮಿ ಅವರನ್ನು ಗೆಲ್ಲಿಸಿದರು.

2013ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಜಯಗಳಿಸಿದ್ದರು. 2014ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆಗ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎನ್.ವೈ.ಗೋಪಾಲಕೃಷ್ಣ ಅವರು ಆಯ್ಕೆಯಾಗಿದ್ದಾರೆ.

ಭಾರೀ ಅಂತರದ ಗೆಲುವು

ಭಾರೀ ಅಂತರದ ಗೆಲುವು

ಬಿ. ಶ್ರೀರಾಮುಲು ರಾಜೀನಾಮೆಯಿಂದ ತೆರವಾದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ 2014ರ ಆಗಸ್ಟ್‌ನಲ್ಲಿ ಉಪ ಚುನಾವಣೆ ನಡೆಯಿತು. 83,906 ಮತಗಳನ್ನು ಪಡೆದ ಎನ್‌.ವೈ.ಗೋಪಾಲಕೃಷ್ಣ ಅವರು 33,104 ಮತಗಳ ಅಂತರದಲ್ಲಿ ಬಿಜೆಪಿಯ ಓಬಳೇಶ್ ಅವರನ್ನು ಸೋಲಿಸಿದರು.

ಉಪ ಚುನಾವಣೆಯಲ್ಲಿ ಕೆಲಸ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ವರ್ಚಸ್ಸು. ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡಿದ್ದ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಗೆಲುವು ದಾಖಲು ಮಾಡುವಂತೆ ನೋಡಿಕೊಂಡರು.

ಕ್ಷೇತ್ರದಿಂದ ದೂರವಾದ ಎನ್‌.ವೈ.ಗೋಪಾಲಕೃಷ್ಣ

ಕ್ಷೇತ್ರದಿಂದ ದೂರವಾದ ಎನ್‌.ವೈ.ಗೋಪಾಲಕೃಷ್ಣ

ಎನ್‌.ವೈ.ಗೋಪಾಲಕೃಷ್ಣ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದಾರೆ. ಆದರೆ, ಕ್ಷೇತ್ರದ ಜನರಿಂದ ಬಹುದೂರವೇ ಉಳಿದು, ಸದಾಕಾಲ ಮೊಳಕಾಲ್ಮೂರಿನಲ್ಲಿರುತ್ತಾರೆ. ಅಲ್ಲಿನ ಸರ್ಕಾರಿ ಕಾರ್ಯಕ್ರಮ, ಖಾಸಗಿ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಹೋಗುವ ಅವರು, ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಮತ್ತು ಮತದಾರರನ್ನು ಭೇಟಿ ಮಾಡಿದ್ದೇ ಅಪರೂಪ.

ಕೂಡ್ಲಗಿ ಕ್ಷೇತ್ರದ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಕಾಂಗ್ರೆಸ್ ಸೇರಿದ್ದಾರೆ. ಈಗ ಅವರು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಸದ್ಯದ ಸುದ್ದಿ. ಆದ್ದರಿಂದ, ಎನ್.ವೈ.ಗೋಪಾಲಕೃಷ್ಣ ಅವರಿಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ.

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಲು ಎನ್.ವೈ.ಗೋಪಾಲಕೃಷ್ಣ ಪ್ರಯತ್ನ ನಡೆಸಿದ್ದರು.
ಆಪ್ತರೊಂದಿಗೆ ಮಾತನಾಡುವಾಗ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ಆರೋಪಗಳಿವೆ.

ಇದರಿಂದಾಗಿ ಸಿದ್ದರಾಮಯ್ಯ ಅವರ ಜೊತೆಗಿನ ಸ್ನೇಹಕ್ಕೆ, ಆಪ್ತತೆಗೆ ಕಡಿವಾಣ ಬಿದ್ದಿತು. ಇದೇ ಕಾರಣಕ್ಕಾಗಿ ಅವರಿಗೆ ಪ್ರಸ್ತುತ ಬಳ್ಳಾರಿ ಗ್ರಾಮೀಣ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಮೊಳಕಾಲ್ಮೂರು ಕ್ಷೇತ್ರಕ್ಕೆ ಉಗ್ರಪ್ಪ

ಮೊಳಕಾಲ್ಮೂರು ಕ್ಷೇತ್ರಕ್ಕೆ ಉಗ್ರಪ್ಪ

ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ. ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ. ಮುಖ್ಯಮಂತ್ರಿಗಳ ಪರಮಾಪ್ತರಾಗಿರುವ ಕಾರಣಕ್ಕೆ ಟಿಕೆಟ್ ಸಿಗುವ ಸಾಧ್ಯತೆಯೂ ಇದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿರುವ ಬಿ. ನಾಗೇಂದ್ರ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಆದ್ದರಿಂದ, ಎನ್‌.ವೈ.ಗೋಪಾಲಕೃಷ್ಣ ಅವರಿಗೆ ಎರಡೂ ಕ್ಷೇತ್ರದಲ್ಲಿಯೂ ಟಿಕೆಟ್ ಸಿಗು ಸಾಧ್ಯತೆ ಕಡಿಮೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+