ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೇವಾ ನಿಯಮಗಳ ತಿದ್ದುಪಡಿಗೆ ಸರ್ಕಾರಿ ನೌಕರರ ಸಂಘ ಆಕ್ಷೇಪ ಸಲ್ಲಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 12: ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಕುಟುಂಬಸ್ಥರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತಿಲ್ಲ ಎಂಬ ನಿಯಮವನ್ನು ಕೈ ಬಿಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದು, ಸರ್ಕಾರಿ ನೌಕರರ ಪತಿ, ಪತ್ನಿ ರಾಜಕೀಯ ಪಕ್ಷದ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಂವಿಧಾನದ 19ನೇ ಅನುಚ್ಚೇದದ ಮೂಲಭೂತ ಹಕ್ಕಾಗಿದೆ. ಆದ್ದರಿಂದ ಈ ನಿಯಮ ಕೈ ಬಿಡಬೇಕೆಂದು ಮನವಿ ಮಾಡಿದ್ದಾರೆ.

ದಿನಗೂಲಿ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಸಿಎಂಗೆ ಪತ್ರದಿನಗೂಲಿ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಸಿಎಂಗೆ ಪತ್ರ

ಅಲ್ಲದೇ ಸರ್ಕಾರಿ ನೌಕರನು ತನ್ನ ಹತ್ತಿರದ ಸಂಬಂಧಿಗೆ ಸರ್ಕಾರ ಪೋಷಿಸಿಕೊಂಡು ಬರುತ್ತಿರುವ ಕಂಪನಿಯಲ್ಲಿ ಉದ್ಯೋಗ ಕೊಡಿಸುವಂತಿಲ್ಲ ಎಂಬ ನಿಯಮವೂ ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ಷೇಪಿಸಲಾಗಿದೆ.

Objection Submission Of Government Employees Union To Amendment The Terms Of Service

ಸರ್ಕಾರಿ ನೌಕರರು ಕ್ರೀಡಾ ಸಂಸ್ಥೆಗಳಲ್ಲಿ ಅಧಿಕಾರ ಹೊಂದದಂತೆ, ಸಂಘ ಸಂಸ್ಥೆಗಳನ್ನು ಸ್ಥಾಪಿಸದಂತೆ ಹಾಕಿರುವ ನಿಯಮ ಕೈ ಬಿಡುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರನು ಖಾಸಗಿ ಕೆಲಸಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳಲು ಸಕ್ಷಮ ಪ್ರಾಧಿಕಾರ 21 ದಿನಗಳೊಳಗೆ ಅನುಮತಿ ನೀಡದಿದ್ದರೆ, ಅದನ್ನು ಅನುಮತಿ ದೊರೆತಿದೆ ಎಂದು ಪರಿಗಣಿಸಬೇಕು. ಅಲ್ಲದೇ ಮುಷ್ಕರದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮವನ್ನು ಅನುಮತಿ ಪಡೆದ ಮುಷ್ಕರದಲ್ಲಿ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ನೌಕರರು ತಮ್ಮ ಆಪ್ತರಿಂದ ಪಡೆಯುವ ಉಡುಗೊರೆಯ ಮೌಲ್ಯ ಒಂದು ತಿಂಗಳ ಸಂಬಳಕ್ಕಿಂತ ಹೆಚ್ಚಿರಬಾರದು ಎನ್ನುವುದನ್ನು ಕನಿಷ್ಠ ಎರಡು ತಿಂಗಳ ಸಂಬಳಕ್ಕಿಂತ ಹೆಚ್ಚಿರಬಾರದು ಎಂದು ಪರಿಷ್ಕರಿಸಬೇಕು.

ಸರ್ಕಾರಿ ನೌಕರನು ಕುಟುಂಬದ ಆದಾಯದ ಮೂಲಕ ಜಮೀನು ಹಾಗೂ ಆಸ್ತಿ ಖರೀದಿಸುವಾಗ ಸರ್ಕಾರದ ಅನುಮತಿ ಕಡ್ಡಾಯ ಮಾಡಿರುವುದು ಹಾಗೂ ಸರ್ಕಾರಿ ನೌಕರ ಉನ್ನತ ಶಿಕ್ಷಣ ಪಡೆಯಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿರುವುದನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ.

English summary
The State Government Employees' Union has objected to the government the rule that family members of government employees should not engage in political activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X