ರಾಜ್ಯದ ಜನತೆಗೆ ಗುಡ್ ನ್ಯೂಸ್ : 1,200 ಚ.ಅಡಿ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ
ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನಲ್ಲಿ 1200 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸಲಾದ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿಯನ್ನು ನೀಡಲಾಗಿದ್ದು, ಈ ಕುರಿತು ರಾಜ್ಯ ಸರಕಾರವು ಈ ಕುರಿತು ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಅನುಕೂಲ ಆಗಲಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ-2024ರ ಅಡಿಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7), ಕರ್ನಾಟಕ ಮುನಿಸಿಪಲ್ ಕಾಯ್ದೆ, 1976 ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಉಪಬಂಧಗಳನ್ವಯ, ಕೆಲವು ಕಟ್ಟಡಗಳಿಗೆ ಸ್ವಾಧೀನ ಪ್ರಮಾಣ ಪತ್ರ (Occupancy Certificate) ಗಳಿಂದ ವಿನಾಯಿತಿ ನೀಡುವ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ, ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೆಲವು ಕ್ರಮಗಳನ್ನು ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದೊಂದಿಗೆ ಮೇಲ್ಕಂಡ ಸಭಾ ನಡವಳಿಯನ್ನು, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇವರಿಗೆ ಕಳುಹಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ ಕಲಂ 241(7)ರಡಿಯಲ್ಲಿ 1200 ಚ.ಅಡಿ ವೀಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ+2 ಅಂತಸ್ತು ಅಥವಾ ಸ್ಟೀಲ್ಸ್+3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (occupancy certificate) ಪಡೆಯುವುದರಿಂದ ವಿನಾಯಿತಿ ನೀಡಲು ನಿಯಮಗಳನ್ನು ರಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿತ್ತು.
2025ರ ಜುಲೈ 3ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ-2024ರ ಸೆಕ್ಷನ್ 241(7)ರಲ್ಲಿನ ಅವಕಾಶದಡಿ 1200 ಚ.ಅಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್ ಮತ್ತು 3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲು ತೀರ್ಮಾನಿಸಲಾಗಿತ್ತು.
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಸಂಬಂಧ ಬಿಬಿಎಂಪಿಯ ನಗರ ಯೋಜನೆ ವಿಭಾಗವು ಈ ಹಿಂದೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರದನ್ವಯ, 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ, ನಕ್ಷೆ ಮಂಜೂರಾತಿ ಪಡೆದು ನಿರ್ಮಿಸುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (occupancy certificate) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications