Government Employee: ಹಳೆ ಪಿಂಚಣಿ ಯೋಜನೆ ಅಧಿಕೃತ ಆದೇಶ, ಷರತ್ತು
ಬೆಂಗಳೂರು, ಫೆಬ್ರವರಿ 05: ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಕುರಿತು ಆದೇಶಿಸಿತ್ತು. ಈಗ ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಅಲ್ಲದೇ ಇದಕ್ಕೆ ಇರುವ ಷರತ್ತುಗಳನ್ನು ಸಹ ತಿಳಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅರುಳ್ ಕುಮಾರ್, ಸರ್ಕಾರದ ಉಪ ಕಾರ್ಯದರ್ಶಿ (ಆಡಳಿತ ಮತ್ತುಸಮನ್ವಯ) ಆರ್ಥಿಕ ಇಲಾಖೆ ಆದೇಶ ಹೊರಡಿಸಿದ್ದಾರೆ. ಈ ಆದೇಶ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಆದೇಶದಲ್ಲಿ ಸರ್ಕಾರಿ ಆದೇಶದನ್ವಯ ದಿನಾಂಕ 01/04/2006ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ 11/12/2023ರ ಮೊದಲು ನೇಮಕಾತಿ/ ನೇಮಕಾತಿಗಾಗಿ ಜಾಹೀರಾತು/ ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ ದಿನಾಂಕ 01/01/2004ರಂದು ಅಥವಾ ತದನಂತರ ಸೇವೆಗೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ದಿನಾಂಕ 31/08/202 ರೊಳಗೆ ಆಯ್ಕೆ ಮಾಡಿಕೊಳ್ಳಲು ಅಧಿಕೃತ ಜ್ಞಾಪನದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರಿ ಆದೇಶದನ್ವಯ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶಿಸಿದೆ ಎಂದು ತಿಳಿಸಿದೆ.
ಕೇಂದ್ರ ಸರ್ಕಾರದ ದಿನಾಂಕ 03/03/2023ರ ಅಧಿಕೃತ ಜ್ಞಾಪನದಲ್ಲಿ ಸಂಬಂಧಿತ ಕೇಂದ್ರ ಸರ್ಕಾರಿ ನೌಕರರಿಗೆ ಕಲ್ಪಿಸಲಾದ ಸೌಲಭ್ಯವನ್ನು ಅದೇ ಸನ್ನಿವೇಶದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಲು ತೀರ್ಮಾನಿಸಿದ ಸರ್ಕಾರವು ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತವನ್ನು ಪಡೆದು ಕ್ರಮಕೈಗೊಳ್ಳುವುದು ಸೂಕ್ತವೆಂದು ಪರಿಗಣಿಸಿ ಆದೇಶಿಸಿದೆ.
ದಿನಾಂಕ 01/04/2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ 01/04/2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ.
ಷರತ್ತುಗಳು
* ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ 30/06/2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
* ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
* ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
* ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31/07/2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
* ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31/08/2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
* ದಿನಾಂಕ 01/04/2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30/06/2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications