Cooking Oil Price Hike: ಕೊಬ್ಬರಿ, ಅಡುಗೆ ಎಣ್ಣೆ ಬೆಲೆ ಭರ್ಜರಿ ಹೆಚ್ಚಳ!
Cooking Oil Price Hike: ಕರ್ನಾಟಕದಲ್ಲಿ ವಿವಿಧ ಕಾರಣಕ್ಕೆ ವಿವಿಧ ವಸ್ತುಗಳ ಹಾಗೂ ಸೇವೆಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಸ್ ಹಾಗೂ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿತ್ತು. ಇದರ ಬೆನ್ನಲ್ಲೇ ಹಾಲಿನ ದರವನ್ನು ಸಹ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು ನಿರಂತರ ಬೆಲೆ ಏರಿಕೆಗೆ ಜನ ಹೈರಾಣಾಗಿದ್ದಾರೆ. ಇದರ ನಡುವೆ ಇದೀಗ ಅಡುಗೆ ಎಣ್ಣೆಯ ಬೆಲೆ ಸಹ ಹೆಚ್ಚಳವಾಗಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ವಿವಿಧ ವಸ್ತುಗಳ ಬೆಲೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಲ್ಲೇ ಇದೆ. ಆದರೆ, ಇದೀಗ ಅಡುಗೆ ಹಾಗೂ ಕೊಬ್ಬರಿಯ ಬೆಲೆ ಸಹ ಹೆಚ್ಚಳವಾಗಿದೆ.
ರಾಜ್ಯದಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು. ಜನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರ ಸಹ ಬಜೆಟ್ ಮಂಡನೆ ಮಾಡಲಿದ್ದು. ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡುವ ಸಾಧ್ಯತೆ ಇದೆ. ಈ ರೀತಿ ಬೆಲೆ ಏರಿಕೆ ಜನರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ. ರಾಜ್ಯದಲ್ಲಿ ತೆಂಗಿನ ಎಣ್ಣೆಯ ಬೆಲೆಯು ಪ್ರತಿ ಲೀಟರ್‌ಗೆ ಬರೋಬ್ಬರಿ 300 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಅಲ್ಲದೆ ವಿವಿಧ ಅಡುಗೆ ಎಣ್ಣೆಗಳ ಬೆಲೆಯೂ ಒಂದೇ ತಿಂಗಳಿನಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿದೆ.

ಹೌದು ರಾಜ್ಯದಲ್ಲಿ ಇದೀಗ ಅಡುಗೆ ಎಣ್ಣೆಗಳ ಬೆಲೆ ಏರಿಕೆಯ ಸರದಿ. ಹವಾಮಾನದಲ್ಲಿ ದಿಢೀರ್ ಬದಲಾವಣೆ ಸೇರಿದಂತೆ ವಿವಿಧ ಕಾರಣಗಳಿಗೆ ಖಾದ್ಯ ತೈಲದ ಬೆಲೆ ಹೆಚ್ಚಾಗಿದೆ. ಯಾವೆಲ್ಲ ಎಣ್ಣೆಯ ಬೆಲೆ ಎಷ್ಟು ಹೆಚ್ಚಳವಾಗಿದೆ ಅಂತ ನೋಡೋಣ.
ಯಾವೆಲ್ಲ ಅಡುಗೆ ಎಣ್ಣೆ ಬೆಲೆ ಹೆಚ್ಚಳ
ಜನವರಿ ಕೊನೆಯ ತಿಂಗಳಿನಿಂದ ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ಶುರುವಾಗಿದೆ. ಅಡುಗೆ ಎಣ್ಣೆ, ಕೊಬ್ಬರಿ ಹಾಗೂ ತೆಂಗಿನ ಕಾಯಿಯ ಬೆಲೆ ಹೆಚ್ಚಳವಾಗುತ್ತಲ್ಲೇ ಇದೆ. ತೆಂಗಿನ ಎಣ್ಣೆ, ಸೂರ್ಯಕಾಂತಿ, ತಾಳೆ, ನೆಲಗಡಲೆ ಹಾಗೂ ಎಳ್ಳೆಣ್ಣೆ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಈ ಎಣ್ಣೆಗಳ ಬೆಲೆ ಪ್ರತಿ ಲೀಟರ್‌ಗೆ 10ರಿಂದ 20 ರೂಪಾಯಿಗೂ ಹೆಚ್ಚು ಏರಿಕೆ ಆಗಿದೆ ಎಂದು ವರದಿಯಾಗಿದೆ.

ಹವಾಮಾನ ಬದಲಾವಣೆಯೇ ಕಾರಣ: ರಾಜ್ಯದಲ್ಲಿ ವಿವಿಧ ಅಡುಗೆ ಎಣ್ಣೆಯ ಬೆಲೆ ಹೆಚ್ಚಳವಾಗುವುದಕ್ಕೆ ಮುಖ್ಯವಾಗಿ ಹವಾಮಾನದಲ್ಲಿ ಬದಲಾವಣೆ ಆಗುತ್ತಿರುವುದೇ ಕಾರಣ ಅಂತ ಹೇಳಲಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ಕೊನೆಯ ವಾರ ಇಲ್ಲವೇ ಏಪ್ರಿಲ್‌ನಲ್ಲಿ ಬಿಸಿಲು ಹೆಚ್ಚಾಗುತ್ತಿತ್ತು. ಆದರೆ ಇದೀಗ ಫೆಬ್ರವರಿ ಎರಡನೇ ವಾರದಿಂದಲೇ ಬಿಸಿಲು ಹೆಚ್ಚಾಗಿದೆ. ಇದರಿಂದ ಕೂಲರ್‌ಗಳನ್ನು ಬಳಸುವುದು ಅನಿವಾರ್ಯವಾಗಿದೆ. ಬಿಸಿಲು ಹಾಗೂ ಕೂಲರ್‌ಗಳ ಬಳಕೆಯ ಕಾರಣದಿಂದ ತೆಂಗಿನ ಎಣ್ಣೆಯ ಬೆಲೆ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.
ಕೊಬ್ಬರಿ ಬೆಲೆಯೂ ಹೆಚ್ಚಳ: ಮಾರುಕಟ್ಟೆಯಲ್ಲಿ ಕೊಬ್ಬರಿಯ ಬೆಲೆ ಸಹ ಇದೀಗ ಹೆಚ್ಚಳವಾಗಿದೆ. ಕೊಬ್ಬರಿಯ ಬೆಲೆಯು ಇದೀಗ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್‌ಗೆ 14,500ರೂಪಾಯಿಯಿಂದ 15,000ಕ್ಕೆ ಏರಿಕೆ ಕಂಡಿದೆ.












Click it and Unblock the Notifications