Government Employees: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಹಳೆ ಪಿಂಚಣಿ ಯೋಜನೆ ಕುರಿತು ಬಿಗ್ ಅಪ್‌ಡೇಟ್‌

ಬೆಂಗಳೂರು, ಆಗಸ್ಟ್‌ 19: ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ. ಆದಷ್ಟು ಬೇಗ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದ್ದರು. ಇದೀಗ ರಾಜ್ಯದ ಸರಕಾರಿ ನೌಕರರ ಕೊನೆಗೂ ಸಿದ್ದರಾಮಯ್ಯ ಅವರ ಸರ್ಕಾರ ಗುಡ್‌ ನ್ಯೂಸ್‌ ನೀಡುವ ನೀರಿಕ್ಷೆ ಹೆಚ್ಚಾಗಿದೆ.

ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾತನಾಡಿ, 2006ರ ಬಳಿಕ ನೇಮಕಗೊಂಡ ಸರಕಾರಿ ನೌಕರರಿಗೆ ಎನ್‌ಪಿಎಸ್ ಬದಲು ಒಪಿಎಸ್ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಆ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಒಪಿಎಸ್ ಜಾರಿಗೆ ಉತ್ಸುಕರಾಗಿದ್ದು, ಸದ್ಯದಲ್ಲೇ ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Old Pension Scheme Big Update On The Old Pension Scheme

ಕರ್ನಾಟಕ ಸರ್ಕಾರಿ ನೌಕರರು ಸರಕಾರವೇ ಆಗಿದ್ದಾರೆ. ಅವರ ಕುಟುಂಬದವರು ನೆಮ್ಮದಿಯಿಂದ ಇರಬೇಕು ಎಂಬುದು ಸರಕಾರದ ಅಭಿಲಾಷೆ. ಆ ನಿಟ್ಟಿನಲ್ಲಿ ಎನ್‌ ಪಿ ಎಸ್‌ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನ ಜಾರಿ ಖಚಿತ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6ನೇ ಮತ್ತು 7ನೇ ವೇತನ ಆಯೋಗ ಜಾರಿ ಮಾಡಿದ್ದಾರೆ. ಹೀಗಾಗಿ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಡನಾಟ ಬಹಳ ಚೆನ್ನಾಗಿದೆ. ಆದಷ್ಟು ಬೇಗ ಹಳೆ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಸಚಿವರಾದ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ ಶುರುವಾಗಿದ್ದು, ಸರ್ಕಾರ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರಿ ನೌಕರರು ಹಲವು ಸಭೆ, ಪ್ರತಿಭಟನೆಯನ್ನ ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿದ್ದರು. ಇದೀಗ ಕಳೆದ ಎರಡು ವರ್ಷಗಳಿಂದ ಕಾದು ಕುಳಿತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ.

ಈಗಾಗಲೇ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು (ಆಗಸ್ಟ್.12) ಚರ್ಚಿಸಲು ಮಹತ್ವದ ಸಭೆ ನಡೆಸಲಾಗಿದೆ. ಕೆಲ ದಿನದಲ್ಲೇ ಈ ಸಭೆಗೆ ಸಂಬಂಧಿಸಿದಂತೆ ಚರ್ಚೆ ಕುರಿತು ಮಾಹಿತಿ ಸಿಗಲಿದೆ. ಇನ್ನೂ ಸರ್ಕಾರಿ ನೌಕರರ ಮಹತ್ವದ ಬೇಡಿಕೆಗಳಲ್ಲಿ ಒಂದಾಗಿರುವ NPS ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಎಂದು ರಾಜ್ಯ ಸರ್ಕಾರ ಮಾತು ಕೊಟ್ಟಿದೆ. ದಿನಾಂಕ: 12.08.2025 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+