Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು, ಡಿಸೆಂಬರ್ 11: ಕರ್ನಾಟಕ ಸರಕಾರಿ ನೌಕರರ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ನೀಡದ ಭರವಸೆಯಂತೆ ಹೊಸ ಪಿಂಚಣಿ ಯೋಜನೆಯನ್ನ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
2006ರ ಎಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಈ ಹಿಂದೆ ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ. ಇದೀಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ದು ಮಾಡಿ, ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ವೇದವ್ಯಾಸ್ ಕಾಮತ್ ಅವರು ನೂತನ ಪಿಂಚಣಿಗೆ ಒಳಪಡುವ ಇಲಾಖಾವಾರು ನೌಕರರ ಮಾಹಿತಿಯನ್ನ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎನ್ ಪಿ ಎಸ್ ನೌಕರರ ಸಂಖ್ಯೆ:2,88,054 ಇಲಾಖಾವಾರು ನೌಕರರ ವಿವರವನ್ನು ಅನುಬಂಧದಲ್ಲಿ ನೀಡಲಾಗಿದೆ.
ಇನ್ನೂ ದಿನಾಂಕ 01.04.2026 ರಿಂದ ನೇಮಕಾತಿ ಹೊಂದಿದ ಸರ್ಕಾರಿ ಸಿಬ್ಬಂದಿಗಳಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಸರ್ಕಾರಿ ನೌಕರರನ್ನು ಹಿಂದಿನ ಹಳೆ ಪಿಂಚಣೀ ಯೋಜನೆಗೆ ಒಳಪಡಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು ಎಂದು ವೇದವ್ಯಾಸ್ ಕಾಮತ್ ಅವರು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಯೋಜನೆಗೆ ಸೂಕ್ತ ಬದಲಾವಣೆ / ಮಾರ್ಪಾಡು ಮಾಡಲು ಸಮಗ್ರವಾಗಿ ಪರಿಶೀಲಿಸಲು ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.20180 : 01.03.2023 ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ: 16.08.2024ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿರುತ್ತದೆ. ಸಮಿತಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ಧು ಮಾಡಿ ಹಳೆ ಪಿಂಚಣಿ (Old pension scheme) ಜಾರಿ ಮಾಡಲು ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು.
ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು. ಕಳೆದ ಡಿ. 03 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗವು ಎನ್‍ಪಿಎಸ್ ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಎಂ.ಟಿ. ರೇಜು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಸಮಿತಿಯು ಸಭೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿರುತ್ತಾರೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications