Government Employees: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌, ಹಳೆ ಪಿಂಚಣಿ ಯೋಜನೆ ಕುರಿತು ಸರ್ಕಾರ ಮಹತ್ವದ ಹೆಜ್ಜೆ

Government Employees Old pension scheme: ರಾಜ್ಯದ ಸರ್ಕಾರಿ ನೌಕಕರಿಗೆ ಅನುಕೂಲ ಆಗುವಂತೆ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ದಶಕದ ಕನಸಾಗಿರುವ ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಮುಂದಾಗಿದೆ ಎನ್ನುವ ಅಪ್ಡೇಟ್‌ ಮಾಹಿತಿ ಲಭ್ಯವಾಗಿದೆ. ಈ ಕುರಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದ ಸರ್ಕಾರಿ ನೌಕರರ ತುಂಬಾ ವರ್ಷಗಳ ಕನಸಾಗಿಯೇ ಉಳಿದಿದ್ದ ಹಳೆಯ ಪಿಂಚಣಿ ಯೋಜನೆ (Old pension scheme) ಮರುಜಾರಿ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹೊಸ ಪಿಂಚಣಿ (NPS-New pension scheme) ಯೋಜನೆ ರದ್ದುಪಡಿಸಿ ಮತ್ತೆ ಒಪಿಎಸ್‌ ಜಾರಿ ಮಾಡಿಸುವಂತೆ ಸಲ್ಲಿಕೆ ಆಗಿದ್ದ ಸುದೀರ್ಘ ಮನವಿಯನ್ನು ಪರಿಶೀಲನೆ ನಡೆಸುವಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Old Pension Scheme Govt Reviews OPS Restoration for NPS Employees Big Relief Expected in State

ಯಾವೆಲ್ಲಾ ರಾಜ್ಯಗಳಲ್ಲಿ ಒಪಿಎಸ್‌ ಜಾರಿ?

ರಾಜ್ಯದಲ್ಲಿ ಪ್ರಸ್ತುತ ಸುಮಾರು 5.7 ಲಕ್ಷ ಸರ್ಕಾರಿ ನೌಕರರು ಇದ್ದು, 2006ರ ನಂತರ ಸೇವೆಗೆ ಸೇರಿದ 2.8 ಲಕ್ಷಕ್ಕೂ ಹೆಚ್ಚು ನೌಕರರು ಎನ್‌ಪಿಎಸ್ ಯೋಜನೆ ವ್ಯಾಪ್ತಿಯಲ್ಲಿ ಇದ್ದಾರೆ. ಮತ್ತೊಂದೆಡೆ ಈಗಾಗಲೇ ರಾಜಸ್ಥಾನ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ರಾಜ್ಯಗಳಲ್ಲಿ ಸಚಿವ ಸಂಪುಟ ಮತ್ತು ಬಜೆಟ್ ಮೂಲಕ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡಲಾಗಿದೆ.

ಇನ್ನೂ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಎನ್‌ಪಿಎಸ್‌ಗೆ ಪರ್ಯಾಯವಾಗಿ ಕೊಡುಗೆ ಆಧಾರಿತ ಪಿಂಚಣಿ ವ್ಯವಸ್ಥೆ ಜಾರಿಗೆ ತಂದಿವೆ. ಪಶ್ಚಿಮ ಬಂಗಾಳ ಮೊದಲಿನಿಂದಲೂ ಎನ್‌ಪಿಎಸ್‌ (ಹೊಸ ಪಿಂಚಣಿ) ಯೋಜನೆಯನ್ನೇ ಜಾರಿ ಮಾಡಲಾಗಿಲ್ಲ. ಆದರೆ ಕರ್ನಾಟಕದಲ್ಲಿ ಈಗ ಪ್ರಸ್ತುತ ಇದು ಜಾರಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇಂತಹ ನೌಕರರನ್ನು ಒಪಿಎಸ್‌ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಎಲ್ಲರ ಕಣ್ಣು ಅಂತಿಮ ವರದಿ ವೇಲೆ

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸುವುದೂ ಒಂದಾಗಿತ್ತು. ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಪರ್ಯಾಯ ಪಿಂಚಣಿ ಮಾದರಿ ಅಳವಡಿಕೆ ಮಾಡಿಕೊಂಡಿರುವ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳ ಸಮಿತಿ ಭೇಟಿ ನೀಡಿ ಅಧ್ಯಯನ ನಡೆಸಿದ್ದು, ಅಂತಿಮ ವರದಿ ಸಲ್ಲಿಕೆ ಆಗಬೇಕಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಪ್ರಸ್ತುತ ಸಕಾರಾತ್ಮಕ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ನೌಕರರ ಪರವಾಗಿ ಬಲವಾದ ನಿರ್ಧಾರ ಹೊರಬೀಳಲಿದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದ್ದಾರೆ.

ಹಣಕಾಸು ತಜ್ಞರ ಆತಂಕ ಏನು?

ಪ್ರಸ್ತುತ ರಾಜ್ಯ ಸರ್ಕಾರವು ವೇತನ ಮತ್ತು ಪಿಂಚಣಿಗಾಗಿ ವರ್ಷಕ್ಕೆ ಸುಮಾರು 1.2 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಒಪಿಎಸ್‌ ಜಾರಿ ಮಾಡಿದ ತಕ್ಷಣವೇ ಆರ್ಥಿಕ ಪರಿಣಾಮ ಬೀರದಿದ್ದರೂ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ನೌಕರರು ನಿವೃತ್ತರಾದಾಗ ಬೊಕ್ಕಸಕ್ಕೆ ಭಾರಿ ಹೊರೆ ಆಗುವ ಆತಂಕ ಹಣಕಾಸು ತಜ್ಞರಲ್ಲಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರದ ನೌಕರರಿಗೆ ಸಮಾನವಾಗಿ ವೇತನ ಮತ್ತು ಭತ್ಯೆಗಳನ್ನು ನೀಡಬೇಕೆಂಬ ಬೇಡಿಕೆಯನ್ನೂ ನೌಕರರ ಸಂಘ ಮುಂದಿಟ್ಟಿದ್ದು, ಇದಕ್ಕೆ 7ನೇ ವೇತನ ಆಯೋಗವೂ ಶಿಫಾರಸು ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣಾ ಕಾವೇರಲಿದೆ. ಈ ಹಿನ್ನೆಲೆ ನೌಕರರ ಈ ಪ್ರಮುಖ ಬೇಡಿಕೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಶೀಘ್ರದಲ್ಲೇ ಐಎಎಸ್ ಸಮಿತಿಯ ವರದಿ ಬಂದ ಬಳಿಕ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಇದರಿಂದ ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಗಾಗಿ ಕಾಯುತ್ತಿದ್ದವರಿಗೆ ಕೊನೆಗೂ ದೊಡ್ಡ ಭರವಸೆ ಸಿಕ್ಕಂತಾಗಿದೆ. ವರದಿ ಬಂದ ಬಳಿಕ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+