Old Pension Scheme: ಹಳೇ ಪಿಂಚಣಿ ಜಾರಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಹಳೆಯ ಪಿಂಚಣಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದ್ದಾರೆ.
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ತೊಡಕುಗಳಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅವರ ಮನವಿ ಸ್ವೀಕರಿಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಒಪಿಎಸ್ ಜಾರಿಗೆ ಅಗತ್ಯ ಪ್ರಯತ್ನಗಳನ್ನು ಮುಂದುವರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಕಲಬುರಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಕಲಬುರಗಿ ಮಹಾನಗರದಲ್ಲಿ ಶಿಕ್ಷಕರ ಸಮುದಾಯದ ಬೇಡಿಕೆಯಂತೆ ಸುಮಾರು 23 ಸಾವಿರ ಚದರ ಅಡಿ ವಿಸ್ತೀರ್ಣದ, ₹2.34 ಕೋಟಿ ಮೌಲ್ಯದ ಜಾಗವನ್ನು ಸಿಎ ನಿವೇಶನವಾಗಿ ಒದಗಿಸಲಾಗಿದೆ. ಈ ಜಾಗದಲ್ಲಿ ಶಿಕ್ಷಕರ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಆಸ್ತಿಗಳು ಸಾರ್ವಜನಿಕರ ಆಸ್ತಿಯಾಗಿದ್ದು, ಅಧಿಕಾರದಲ್ಲಿರುವ ವ್ಯಕ್ತಿಗಳು ಬದಲಾಗಬಹುದು. ಆದರೆ, ಸಾರ್ವಜನಿಕ ಆಸ್ತಿಯನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸುವುದು ಮುಖ್ಯ. ಶಿಕ್ಷಕರ ಆಶೀರ್ವಾದ ಮತ್ತು ಬೆಂಬಲವಿದ್ದರೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದೆ ಎಂದಿದ್ದಾರೆ.
ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮನೋಭಾವನೆ, ಪ್ರಗತಿಪರ ಚಿಂತನೆ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುತ್ತಾರೆ. ಶಿಕ್ಷಕರಲ್ಲಿ ಪ್ರಬುದ್ಧತೆ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಹೀಗಾಗಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಆದ್ಯತೆಯಾಗಿದೆ.
ಶಿಕ್ಷಕರು ಉತ್ತಮ ಹಾಗೂ ಪ್ರಬುದ್ಧ ಸಮಾಜ ನಿರ್ಮಾಣ ಮಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ನಮ್ಮದು ಆಳುವ ಸರ್ಕಾರವಲ್ಲ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸರ್ಕಾರ.
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಶಿಕ್ಷಕರ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ. ಮುಂದಿನ ಆರು ವರ್ಷಗಳ ಕಾಲ ಈ ಭಾಗದ ಜಿಲ್ಲೆಗಳ ಶಿಕ್ಷಕರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಯಾರು ಇರಬೇಕು ಎಂಬುದನ್ನು ಶಿಕ್ಷಕರೇ ನಿರ್ಧರಿಸಬೇಕು. ಆದ್ದರಿಂದ ಶಿಕ್ಷಕರ ಸಮಸ್ಯೆಗಳನ್ನು ಆಲಿಸಲು ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರನ್ನು ಬೆಂಬಲಿಸಬೇಕು ಎಂದು ಮನವಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದ್ದಾರೆ.


Click it and Unblock the Notifications
