Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಹಳೆ ಪಿಂಚಣಿ ಜಾರಿ ಮಾಡಿ ಗೆಜೆಟ್ ಪ್ರಕಟ
ಬೆಂಗಳೂರು, ಫೆಬ್ರವರಿ 14: ರಾಜ್ಯದ ಸರಕಾರಿ ನೌಕರರ ಕೊನೆಗೂ ಸಿದ್ದರಾಮಯ್ಯ ಅವರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 2006ರ ಎಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ
2006ರ ಏಪ್ರಿಲ್ 1ರಂದು ಹಾಗೂ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.

ಕೇಂದ್ರ ಸರ್ಕಾರವು ತನ್ನ ನೌಕರರಿಗೆ 2023ರ ಡಿಸೆಂಬರ್ 22ರ ಮೊದಲು ನೇಮಕಾತಿ / ನೇಮಕಾತಿಗಾಗಿ ಜಾಹೀರಾತು / ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ 2004ರ ಜನವರಿ 1ರಂದು ಅಥವಾ ತದನಂತರ ಕರ್ತವ್ಯಕ್ಕೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ಕೇಂದ್ರ ಸರ್ಕಾರ 2023ರ ಮಾರ್ಚ್ 3 ರಂದು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ.

ಷರತ್ತುಗಳೇನು?
1. ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
2. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
3. ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
4. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
5. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
6. ದಿನಾಂಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30.06.2024ರೊಳಗಾಗಿ ಸಲ್ಲಿಸತಕ್ಕದ್ದು ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications