Get Updates
Get notified of breaking news, exclusive insights, and must-see stories!

OPS: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ: ಮಿಸ್‌ ಮಾಡದೇ ವಿವರ ತಿಳಿಯಿರಿ

ಬೆಂಗಳೂರು, ಫೆಬ್ರವರಿ 19: ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಕುರಿತು ಆದೇಶ ಹೊರಡಿಸಿದೆ. ಆದರೆ ಇದಕ್ಕೆ ಷರತ್ತುಗಳು ಅನ್ವಯವಾಗಲಿದೆ.

ರಾಜ್ಯ ಸರ್ಕಾರದ ಆದೇಶದ ಅನ್ವಯ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲಾಗುತ್ತದೆ.

Old Pension Scheme Restoration Good News For Government School Primary Teachers

ಈ ಹಳೆಯ ಪಿಂಚಣಿ ಯೋಜನೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೇಗೆ ಅನ್ವಯವಾಗಲಿದೆ?. ಈ ಕುರಿತು ಹಲವು ಗೊಂದಲವಿತ್ತು. ಈಗ ಜ್ಞಾಪನಾ ಪತ್ರದ ಮೂಲಕ ಈ ಕುರಿತು ಮಾಹಿತಿ ನೀಡಲಾಗಿದೆ.

ರಾಷ್ಟ್ರೀಯ ಪಿಂಚಣಿ ಯೋಜನೆ ಅಥವಾ ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡುವ ನೌಕರರು ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಒಂದು ಬಾರಿ ಮಾತ್ರ ಬದಲಾವಣೆ ಮಾಡಲು ಅವಕಾಶವಿದೆ. ಅರ್ಜಿ ಸಲ್ಲಿಕೆ ಮಾಡದೇ ಹೋದಲ್ಲಿ ಹೊಸ ಪಿಂಚಣಿ ಯೋಜನೆಯಲ್ಲಿಯೇ ಮುಂದುವರೆಯುತ್ತಾರೆ.

ಶಿಕ್ಷಕರಿಗೆ ಹೇಗೆ ಅನ್ವಯ?

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರುಗಳು ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಪೈನ್ಸ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಕಾಲಮಿತಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಉಲ್ಲೇಖ-02 ರ ಸರ್ಕಾರದ ಆದೇಶದಂತೆ ಕ್ರಮವಹಿಸಲು ಸಕ್ಷಮ ಪ್ರಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಉಲ್ಲೇಖ-01 ರಲ್ಲಿ ಮನವಿ ಸ್ವೀಕೃತಿಯಾಗಿರುತ್ತದೆ.

ತತ್ಸಂಬಂಧ ಉಲ್ಲೇಖಿತ ಮನವಿಯನುಸಾರ ಉಲ್ಲೇಖ-02 ರ ಸರ್ಕಾರದ ಆದೇಶದಲ್ಲಿನ ಅಂಶಗಳನ್ನು ಪರಿಶೀಲಿಸಿಕೊಂಡು ಅರ್ಹವಾಗುವ ಶಿಕ್ಷಕರುಗಳ ಪಟ್ಟಿಯನ್ನು ಸರ್ಕಾರದ ಆದೇಶದಲ್ಲಿ ನಮೂದಿಸಿರುವ ನಮೂನೆಯಲ್ಲಿನ ಮಾಹಿತಿಗಳನ್ನು ದೃಢೀಕರಿಸಿಕೊಂಡು ತಮ್ಮ ದೃಡೀಕರಣದೊಂದಿಗೆ ತಮ್ಮ ಜಿಲ್ಲಾ ವ್ಯಾಪ್ತಿಯ ಶಿಕ್ಷಕರುಗಳ ಕ್ರೋಢೀಕರಣ ಮಾಹಿತಿಯನ್ನು ನಿಗಧಿತ ಕಾಲಮಿತಿಯೊಳಗೆ ಸಲ್ಲಿಸಲು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಡಿಫೈನ್ಡ್‌ ಪಿಂಚಣಿ ಯೋಜನೆಗೆ ಮುಖ್ಯವಾದ ಮಾಹಿತಿ

ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವ ಶಿಕ್ಷಕರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಈ ಕೆಳಕಂಡ ಮಾಹಿತಿ/ ದಾಖಲೆಗಳೊಂದಿಗೆ ಸಲ್ಲಿಸಬೇಕಾಗುತ್ತದೆ.

* ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ......... (ಪ್ರತಿ ಲಗತ್ತಿಸಿ)

* ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ........ (ಪ್ರತಿಯನ್ನು ಲಗತ್ತಿಸಿ)

* ನೇಮಕಾತಿ ಆದೇಶ ದಿನಾಂಕ............... (ಪ್ರತಿ ಲಗತ್ತಿಸಿ)

* ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರ ನೀಡುವುದು

* ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿ/ ಇಲಾಖೆಯ ವಿಳಾಸ

* ಕೆಜಿಐಡಿ ಸಂಖ್ಯೆ

* NPS ಪ್ರಾನ್ ಸಂಖ್ಯೆ

* ಪ್ರಸ್ತುತ ವೇತನ ಚೀಟಿ: ಅರ್ಜಿಯ ಕೊನೆಯಲ್ಲಿ ದಿನಾಂಕ ಮತ್ತು ಹೆಸರು & ಸಹಿ ಅಗತ್ಯ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+