Government Employee: ಬಹುದಿನಗಳಿಂದ ಕಾಯುತ್ತಿದ್ದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ
ಬೆಂಗಳೂರು, ಮಾರ್ಚ್ 15: ರಾಜ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದುಮಂಡಿಸುವ 2025-26ನೇ ಸಾಲಿನ ಬಜೆಟ್‌ನಲ್ಲಿ ಹಳೆ ಪಿಂಚಣಿ ಯೋಜನೆ ಅಂತಿಮವಾಗಿ ಘೋಷಣೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಸರ್ಕಾರ ಸ್ವಲ್ಪ ತಡವಾಗಲಿದೆ ಎಂದು ಹೇಳಿತ್ತು. ಇದೀಗ ಸರ್ಕಾರಿ ನೌಕರರ ಬೇಡಿಮೆ ಈಡೇರಿಸಬೇಕು ಎಂದು ಸದನದಲ್ಲಿ ಈ ಕುರಿತು ಆಗ್ರಹಗಳು ಕೇಳಿಬಂದಿವೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ವಿಧಾನ ಪರಿಷತ್‌ನಲ್ಲಿ ಸಭಾ ನಾಯಕ ಬೋಸರಾಜು ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಇರುವ ಸರ್ಕಾರಿ ನೌಕರಿಗೆ ಓಪಿಎಸ್ ಜಾರಿ ಮಾಡುತ್ತೇವೆ. ಯಾವಾಗ ಮಾಡುತ್ತೇವೆ ಎಂದು ಸಮಯ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡೇ ಪ್ರಶ್ನೆ ಕೇಳಿದರು. ಸರ್ಕಾರಿ ಎನ್‌ಪಿಎಸ್ ನೌಕರರಿಗೆ ಓಪಿಎಸ್ ಯೋಜನೆ ಜಾರಿ ಮಾಡಬೇಕು. ಓಪಿಎಸ್ ಕೊಡೋದಾಗಿ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲೂ ಸೇರಿಸಲಾಗಿತ್ತು. ನಮ್ಮ ಸರ್ಕಾರ ಬಂದಾಗ ಓಪಿಎಸ್ ಜಾರಿ ಮಾಡೋದಾಗಿ ಹೇಳಿದ್ದೆವು. ಸರ್ಕಾರ ಬಂದು 1.5 ವರ್ಷ ಆದರೂ ಯಾವುದೇ ನಿರ್ಧಾರ ಆಗಿಲ್ಲ. ಇದು ಸರಿಯಲ್ಲ. ಸರ್ಕಾರ ಸಮಿತಿ ಮಾಡಿದೆ. ಸಮಿತಿಯಿಂದ ನಮಗೇನು ಲಾಭವಿಲ್ಲ. ಓಪಿಎಸ್‌ಗಾಗಿ ಹೋರಾಟ ನಡೆಯುತ್ತಿದೆ. ಕೂಡಲೇ ಓಪಿಎಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸಚಿವ ಬೋಸರಾಜು ಉತ್ತರ ನೀಡಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿ 2,86,445. ಸರ್ಕಾರಿ ನೌಕರರು ಒಳಪಟ್ಟಿದ್ದಾರೆ. ಓಪಿಎಸ್ ಜಾರಿ ಮಾಡುವ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಎರಡು ಸಭೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಬಳಿಕ ಪರಿಶೀಲನೆ ಮಾಡಿ ಓಪಿಎಸ್ ಜಾರಿ ಮಾಡೋ ಬಗ್ಗೆ ನಿರ್ಧಾರ ಮಾಡುತ್ತೇವೆ. ಓಪಿಎಸ್ ಕಾಲಮಿತಿ ನೀಡಲು ಆಗಲ್ಲ. ಇಷ್ಟೇ ಸಮಯ ಒಳಗೆ ಕೊಡುತ್ತೇವೆ ಎಂದು ಹೇಳಲು ಆಗಲ್ಲ. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಗೃಹ ಸಚಿವ ಸಚಿವ ಪರಮೇಶ್ವರ್ ಮಾತಾಡಿ, ಪ್ರಣಾಳಿಕೆ ಬರೆಯೋವಾಗ ಚರ್ಚೆ ಮಾಡಿ ಇದನ್ನ ಸೇರಿಸಿದ್ದೇವೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಲ್ಲ.ನಾವು ಕಮಿಟ್ ಆಗಿದ್ದೇವೆ. ನಾವು ಕೊಟ್ಟ ಭರವಸೆ ಈಡೇರಿಸುತ್ತೇವೆ. ಇಂದು ಆಗಬಹುದು, ನಾಳೆ ಆಗಬಹುದು. ಇದಕ್ಕೆ ಕೋಟ್ಯಂತರ ರುಪಾಯಿ ಖರ್ಚು ಆಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.
1 ಕೋಟಿ ರೂ.ಗಳ ಅಪಘಾತ ವಿಮೆ ಕುರಿತು ಸಿಎಂ ಉತ್ತರ
ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತೆಯು ಸರ್ಕಾರದ ಪ್ರಮುಖ ವಿಷಯವಾಗಿರುವುದರಿಂದ ಸಾಮಾಜಿಕ ಭದ್ರತೆ ಇದ್ದಲ್ಲಿ, ನೌಕರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ, ಕಾರ್ಯನಿರ್ವಹಿಸುತ್ತಾರೆ. ಈಗಾಗಲೇ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸುಗಮಗೊಳಿಸಲು ಆದೇಶಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications