ದಕ್ಷಿಣ ಕರ್ನಾಟಕದಲ್ಲಿ ಬಳಸಿದ ಹಳೆಯ ತಗಡಿನ ಬಸ್ ಉತ್ತರ ಕರ್ನಾಟಕಕ್ಕೆ, ಇಲ್ಲಿದೆ ವೈರಲ್ ವಿಡಿಯೋ!
ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವೆ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸರ್ಕಾರ ಬಂದರೂ ಅನ್ಯಾಯವಾಗುತ್ತಿದೆ ಎನ್ನುವ ಕೂಗು ಮೊದಲಿನಿಂದಲೂ ಇದೆ. ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕರ್ನಾಟಕದ ಭಾಗದಲ್ಲಿ ಬಳಕೆ ಮಾಡಿ ಹಳೆಯದಾಗಿರುವ ಬಸ್‌ಗಳನ್ನು ಉತ್ತರ ಕರ್ನಾಟಕಕ್ಕೆ ಕೊಡಲಾಗುತ್ತಿದೆ ಎನ್ನುವ ಆರೋಪವು ಮೊದಲಿನಿಂದಲೂ ಕೇಳಿ ಬರುತ್ತಿದೆ. ಇದೀಗ ಬೆಂಗಳೂರು ಕೇಂದ್ರಿತ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಕಡೆಗಣನೆಗೆ ಉತ್ತರ ಕರ್ನಾಟಕದ ಜನರಿಂದ ಮಾತ್ರವಲ್ಲ ದಕ್ಷಿಣ ಕರ್ನಾಟಕದ ಜನರೂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಬೇಸರ ಮೂಡಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ಮೆಟ್ರೋ ಅಭಿವೃದ್ಧಿ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಪ ನಗರಗಳ ನಿರ್ಮಾಣ ಹಾಗೂ ಜಿಲ್ಲೆಗಳ ಹೆಸರು ಬದಲಾವಣೆ ಸೇರಿದಂತೆ ಹಲವು ಕಾರಣಗಳಿಗೆ ಬೆಂಗಳೂರು - ಬೆಂಗಳೂರು ಕೇಂದ್ರಿತವಾದ ಅಭಿವೃದ್ಧಿ ವಿಚಾರವಾಗಿ ಪದೇ ಪದೇ ಚರ್ಚೆಗಳು ನಡೆದಿವೆ. ಇದರ ನಡುವೆ ಬೆಂಗಳೂರು ಮಾತ್ರವಲ್ಲ ಬಿಯಾಂಡ್ ಬೆಂಗಳೂರು - ಬೆಂಗಳೂರು ಹೊರತುಪಡಿಸಿ ಎರಡನೇ ಮತ್ತು ಮೂರನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆಯಾದರೂ.

ಇದು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರುವುದಕ್ಕೆ ಹಲವು ವರ್ಷಗಳೇ ಬೇಕಾಗಲಿವೆ ಎಂದು ಹೇಳಲಾಗಿದೆ. ಇದರ ನಡುವೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವೆ ಅಂತರ ದಿನೇ ದಿನೆ ಹೆಚ್ಚಾಗುತ್ತಿದೆ. ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಪ್ರದೇಶಗಳು ಮಾತ್ರ ಅಭಿವೃದ್ಧಿ ಆಗುತ್ತಿವೆ. ಇಂದಿಗೂ ಉತ್ತರ ಕರ್ನಾಟಕದ ಯುವಕ ಮತ್ತು ಯುವತಿಯರು ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಿಗೇ ಬರಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಇದರ ನಡುವೆ ದಕ್ಷಿಣ ಕರ್ನಾಟಕದ ಭಾಗದಲ್ಲಿ ಹಲವು ವರ್ಷಗಳ ಕಾಲ ಬಳಕೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಉತ್ತರ ಕರ್ನಾಟಕಕ್ಕೆ ಕೊಡಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದ್ದು. ಜನ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
17 ಲಕ್ಷ KM ಓಡಿರುವ KA 41 ನೋಂದಣಿಯ ಐರಾವತ ಬಸ್ ವಿಜಯಪುರ ಮತ್ತು ಹುಬ್ಬಳ್ಳಿ ನಡುವೆ ಸಂಚಾರ ಮಾಡುತ್ತದೆ.
— SIDDU R S (@__meo0ww__) September 7, 2025
ದಕ್ಷಿಣ ಕರ್ನಾಟಕದಲ್ಲಿ ಬಳಸಿ ಬಿಟ್ಟ ಹಳೆಯ ತಗಡಿನ ಡಬ್ಬಿಯಲ್ಲಿ ಉತ್ತರ ಕರ್ನಾಟಕದ ಜನರು ಜೀವ ಪಣಕಿಟ್ಟು ಸಂಚಾರ ಮಾಡಬೇಕೆ?
ಎಲ್ಲಿದೆ ನ್ಯಾಯ? ಎಲ್ಲಿದೆ ಸಮಾನತೆ?@KSRTC_Journeys @osd_cmkarnataka @BasanagoudaBJP https://t.co/p5dCUuDAvh pic.twitter.com/ZnC5z2c06g
ಯಾವುದೇ ಕಾರಣಕ್ಕೂ ಉತ್ತರ ಕರ್ನಾಟಕದ ಜನರನ್ನು ಎರಡನೇ ದರ್ಜಿಯ ಜನರನ್ನಾಗಿ ನೋಡಬಾರದು. ಸರ್ಕಾರ ಈ ಅಸಹ್ಯ ನೀತಿಯನ್ನು ಕೈಬಿಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದಕ್ಕೆ ಕಾರಣವಾಗಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ. 17 ಲಕ್ಷ KM ಓಡಿರುವ KA 41 ನೋಂದಣಿಯ ಐರಾವತ ಬಸ್ ವಿಜಯಪುರ ಮತ್ತು ಹುಬ್ಬಳ್ಳಿ ನಡುವೆ ಸಂಚಾರ ಮಾಡುತ್ತಿದೆ. ದಕ್ಷಿಣ ಕರ್ನಾಟಕದಲ್ಲಿ ಬಳಸಿ ಬಿಟ್ಟ ಹಳೆಯ ತಗಡಿನ ಡಬ್ಬಿಯಲ್ಲಿ ಉತ್ತರ ಕರ್ನಾಟಕದ ಜನರು ಜೀವ ಪಣಕಿಟ್ಟು ಸಂಚಾರ ಮಾಡಬೇಕೆ ? ಎಲ್ಲಿದೆ ನ್ಯಾಯ? ಎಲ್ಲಿದೆ ಸಮಾನತೆ ಎಂದು ಪ್ರಶ್ನೆ ಮಾಡಲಾಗಿದೆ. ಸಿದ್ದು ಆರ್.ಎಸ್ ಎನ್ನುವವರು ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.












Click it and Unblock the Notifications