ಕರ್ನಾಟಕ ಕಾಂಗ್ರೆಸ್ ಸೋನಿಯಾ ಗಾಂಧಿ ಕಿವಿಮಾತು
Recommended Video

ಮುಂಬೈ, ಮಾರ್ಚ್ 10: 'ಆತ್ಮವಿಶ್ವಾಸದಿಂದಿರಿ, ಆದರೆ ಅತಿಯಾದ ಆತ್ಮವಿಶ್ವಾಸ ಬೇಡ..' ಹೀಗೊಂದು ಕಿವಿಮಾತನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.
"ಕರ್ನಾಟಕ ರಾಜ್ಯ ನಮ್ಮ ಪಾಲಿಗೆ ಅತೀ ಮುಖ್ಯ. ಇಲ್ಲಿ ಮತ್ತೆ ಅಧಿಕಾರಕ್ಕೆ ಮರಳಲು ನಾವು ನಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕಾಗಿದೆ," ಎಂದು ಇಂಡಿಯಾ ಟುಡೇ ಕಾನ್ಕ್ಲೇವ್ ನಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕರ್ನಾಟಕದಲ್ಲಿ ಕಾಂಗ್ರೆಸ್ ನವರು ಈ ವಿಚಾರದಲ್ಲಿ ಆತ್ಮವಿಶ್ವಾಸದಲ್ಲಿದ್ದಾರೆ. ಅತಿಯಾದ ಆತ್ಮವಿಶ್ವಾದಲ್ಲಿರುವುದಕ್ಕಿಂತ ಕೊನೆಯ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವುದು ಉತ್ತಮ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಇತ್ತೀಚಿಗಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಫಲಿತಾಂಶ ದಾಖಲಿಸಿದೆ. ರಾಜಸ್ಥಾನದ ಎರಡು ವಿಧಾನಸಭಾ ಸ್ಥಾನಗಳಿಗೆ ಮತ್ತು ಲೋಕಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯನ್ನು ನಾವು ಗೆದ್ದಿದ್ದೇವೆ. ಮಧ್ಯಪ್ರದೇಶದಲ್ಲೂ ನಾವು ಎರಡು ಸ್ಥಾನಗಳನ್ನು ಗೆದಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಇತ್ತೀಚಿನ ಫಲಿತಾಂಶಗಳನ್ನು ಅವರು ವಿಶ್ಲೇಷಿಸಿದ್ದಾರೆ.












Click it and Unblock the Notifications