ಲೋಕಸಭೆ ಚುನಾವಣೆಗೆ ಪೂರಕವಾಗಿ ರಾಜ್ಯದಲ್ಲಿ ಬಿಜೆಪಿಗೆ ಜನಾದೇಶ ಕೊಡಿ: ಡಾ. ಕೆ.ಸುಧಾಕರ್
ಬೆಂಗಳೂರು,ಏಪ್ರಿಲ್8: ಲೋಕಸಭೆ ಚುನಾವಣೆ ಗೆಲುವಿಗೆ ಪೂರಕವಾಗಿ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಇರಲಿ ಎಂದು ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಕೆ ಸುಧಾಕರ್ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿ ಅವಾವಾರು, ಮತ್ತೊಮೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಕೊಡಿ. ನಾವು ರಾಮರಾಜ್ಯದ ಪರಿಕಲ್ಪನೆಯನ್ನು ಈಡೇರಿಸುತ್ತೇವೆ ಎಂದರಲ್ಲದೆ, ಜನಪರ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಪ್ರಜ್ಞಾವಂತ ಜನತೆ ಸಹಕರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ 2,141 ಕೋಟಿ ಮೌಲ್ಯದ ಕೋವಿಡ್ ಉಚಿತ ಲಸಿಕೆಯನ್ನು ಕೇಂದ್ರದ ಬಿಜೆಪಿ ಸರಕಾರ ನೀಡಿದೆ. ದೇಶಾದ್ಯಂತ 220 ಕೋಟಿ ಲಸಿಕೆ ಕೊಡಲಾಗಿದೆ. ರಾಜ್ಯದಲ್ಲಿ 12.21 ಕೋಟಿಗೂ ಹೆಚ್ಚು ಲಸಿಕೆ ನೀಡಿದ್ದೇವೆ. ವಿಶ್ವದಲ್ಲೇ ದಾಖಲೆ ಮಟ್ಟದಲ್ಲಿ ಇದು ನಡೆದಿದೆ. 1.15 ಕೋಟಿ ಬೂಸ್ಟರ್ ಡೋಸ್ ಕೊಡಲಾಗಿದೆ.
ಲಸಿಕೆ ವಿಚಾರದಲ್ಲಿ ವಿಳಂಬಕ್ಕೆ ಕಾಂಗ್ರೆಸ್ ಟೀಕೆ ವ್ಯಕ್ತವಾಗಿತ್ತು. ತುರ್ತು ಮಾತ್ರವಲ್ಲದೆ ವಿಶೇóಷ ಸಂದರ್ಭ ಎಂದು ಮರೆತು ಇಲ್ಲಿವರೆಗೆ ಕಾಂಗ್ರೆಸ್ ರಾಜಕಾರಣ ಬೆರೆಸಿದೆ. ಎಳ್ಳಷ್ಟೂ ಸಹಕಾರ ಕೊಡದೆ ಇರುವುದು ರಾಜ್ಯ ಮತ್ತು ದೇಶದ ಜನತೆಗೆ ಮಾಡಿದ ಘೋರ ಅಪರಾಧ ಎಂದು ಡಾ. ಕೆ ಸುಧಾಕರ್ ಅವರು ಟೀಕಿಸಿದರು.
ಲಸಿಕೆ ವಿಷಯದಲ್ಲಿ ಅಪಹಾಸ್ಯ ಮಾಡಿ ಮೋದಿ ಲಸಿಕೆ ಎಂದು ಕರೆದರು. ಕಾಂಗ್ರೆಸ್‍ನವರು ಕೆಲವು ಧರ್ಮಗಳ ನಂಬಿಕೆಗೆ ವಿರುದ್ಧ, ವ್ಯತಿರಿಕ್ತವಾಗಿ ವಿಶ್ವಾಸ ಕೆಡಿಸುವ ಕೆಲಸ ಮಾಡಿ ಸಂತಾನಶಕ್ತಿ ಕಳಕೊಳ್ಳುವ ಭೀತಿ ಹುಟ್ಟಿಸಿದ್ದಾರೆ. ಅದನ್ನು ಖಂಡಿಸುತ್ತೇವೆ. ಆರಂಭದಲ್ಲಿ ಅವರು ಲಸಿಕೆ ಪಡೆಯಲಿಲ್ಲ. ಬಳಿಕ ವಿಳಂಬವಾಗಿ ಕ್ಯೂ ನಿಂತು ಲಸಿಕೆ ಪಡೆದರು ಎಂದು ತಿಳಿಸಿದರು. ಲಸಿಕೆಯನ್ನೇ ಪ್ರಶ್ನೆ ಮಾಡಿ ಸಂಶೋಧಕರಿಗೆ ಅಪಮಾನ ಮಾಡುವಂತೆ ರಾಹುಲ್ ಗಾಂಧಿ ನಡೆದುಕೊಂಡರು ಎಂದು ಆಕ್ಷೇಪಿಸಿದರು.

3 ವರ್ಷಗಳ ಹಿಂದೆ ಶತಮಾನದ ಅತ್ಯಂತ ಭೀಕರ ಸಾಂಕ್ರಾಮಿಕ ಕೋವಿಡ್ ದೇಶವನ್ನು ಮತ್ತು ವಿಶ್ವವನ್ನು ಬಾಧಿಸಿತ್ತು. ನಿರ್ದಿಷ್ಟ ಚಿಕಿತ್ಸೆ- ಔಷಧಿ ಇಲ್ಲ ಎಂಬ ಅಂಶ ಎಲ್ಲರನ್ನೂ ಭಯಭೀತರನ್ನಾಗಿ ಮಾಡಿತ್ತು. ಅನೇಕ ವರ್ಷ, ದಶಕಗಳು ತೆಗೆದುಕೊಂಡ ಅನೇಕ ಸಾಂಕ್ರಾಮಿಕಗಳಿದ್ದವು. ಇಂಥ ಆತಂಕಕಾರಿ ಪರಿಸ್ಥಿತಿ, ಲಾಕ್ ಡೌನ್, ಆರ್ಥಿಕ ದುಸ್ಥಿತಿ ಕಾಡುವಂತಾಗಿತ್ತು. ಬಡಜನರು, ಶ್ರಮಿಕರು ತೊಂದರೆಗೆ ಒಳಗಾಗದಂತೆ ಬಿಜೆಪಿ ಸರಕಾರ ನೋಡಿಕೊಂಡಿದೆ ಎಂದು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಾಯಕತ್ವ ನಮ್ಮನ್ನು ಕಾಪಾಡಿದೆ. ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಸರಕಾರ ಇರಲಿಲ್ಲ. ಅನೇಕ ರಾಜ್ಯಗಳಲ್ಲಿ ಬೇರೆ ಪಕ್ಷಗಳ ಆಡಳಿತ ಇದ್ದರೂ ಮೋದಿಜಿ ದಿಟ್ಟವಾಗಿ ಕೋವಿಡ್ ಎದುರಿಸಿದ್ದಾರೆ ಎಂದು ತಿಳಿಸಿದರು.
ಜೀವ ಉಳಿಸುವ ಪ್ರಯತ್ನ, ಜನಜೀವನ ಅಸ್ತವ್ಯಸ್ಥ ಆಗದಂತೆ ನೋಡಿಕೊಳ್ಳುವ ಸವಾಲನ್ನು ವಿಶ್ವಕ್ಕೆ ಮಾದರಿಯಾಗಿ ನಿರ್ವಹಣೆ ಮಾಡಿದ್ದಾಗಿ ಡಾ. ಕೆ ಸುಧಾಕರ್ ಅವರು ಮಾಹಿತಿ ನೀಡಿದರು.
ವಸುಧೈವ ಕುಟುಂಬಕಂ ನಾಣ್ಣುಡಿಯಂತೆ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇಟ್ಟ ಪ್ರಧಾನಿಯವರು ಹತ್ತಾರು ಹೊರದೇಶಗಳಿಗೆ ಲಸಿಕೆ ನೀಡಿದ್ದಾರೆ. ಇದು ನಮ್ಮ ಹೃದಯ ಶ್ರೀಮಂತಿಕೆ, ದೇಶದ ಹಿರಿಮೆ, ಗರಿಮೆ ಅನಾವರಣ ಮಾಡಿದೆ ಎಂದು ತಿಳಿಸಿದರು.
ನಮ್ಮ ಜನಸಂಖ್ಯೆ ಸಾಂದ್ರತೆ ಗಮನಿಸಿ, ಮೂಲಸೌಕರ್ಯ ಸಾಕಾಗದು ಎಂದು ಅರಿತ ವಿದೇಶಿ ಮಾಧ್ಯಮಗಳು ಕೋವಿಡ್ ಪರಿಣಾಮಕಾರಿ ನಿರ್ವಹಣೆ ಅಸಾಧ್ಯ; ಭಾರತದಲ್ಲಿ ಲಕ್ಷಾಂತರ ಸಾವು ಸಂಭವಿಸಬಹುದು, ದಾರಿ ದಾರಿಯಲ್ಲಿ ಹೆಣ ನೋಡುವ ಪರಿಸ್ಥಿತಿ ಬರಬಹುದು ಎಂದು ಬಿತ್ತರಿಸಿದ್ದರು. ಆದರೆ, ಮುಂದುವರಿದ ದೇಶಗಳು, ಶ್ರೀಮಂತ, ಅರಿವು ಜ್ಞಾನ ಇದ್ದ ದೇಶಕ್ಕಿಂತ ಮಿಗಿಲಾಗಿ ನಿರ್ವಹಣೆ ಮಾಡಿದ್ದು, ಅದು ಅತ್ಯಂತ ಹೆಮ್ಮೆಯ ವಿಚಾರ ಎಂದರು.
2ನೇ ಅಲೆ ಅತ್ಯಂತ ಅಪಾಯಕಾರಿ ಪ್ರಭೇದವಾಗಿತ್ತು. ಅದನ್ನು ಸಮರ್ಥವಾಗಿ ಎದುರಿಸಿ ನಿರ್ವಹಿಸಿದ್ದೇವೆ. ಕೋವಿಡ್ ನಿರ್ವಹಣೆಗೆ ದೇಶದಲ್ಲಿ ತಜ್ಞರ ಸಮಿತಿ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಿತಿ ಕಾರ್ಯ ನಿರ್ವಹಿಸಿತು. ಲಸಿಕೆ ತಯಾರಿಸಲು ಪ್ರಧಾನಿಯವರು ಸಂಶೋಧಕರು, ಸಂಸ್ಥೆಗಳ ಜೊತೆ ಮಾತುಕತೆ ನಡೆಸಿದರು. ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು. ಜನಜೀವನ ಅಸ್ತವ್ಯಸ್ಥ ಆಗದಂತೆ 80 ಕೋಟಿ ಕುಟುಂಬಗಳಿಗೆ ಆಹಾರಧಾನ್ಯಗಳನ್ನು ಸುಮಾರು 3 ವರ್ಷ ಕಾಲ ಕೊಟ್ಟರು. ಒಟ್ಟು 10 ಕೆಜಿಯನ್ನು ಪ್ರತಿ ಕುಟುಂಬಕ್ಕೆ ನೀಡಿದ್ದೇವೆ. ಅದನ್ನು ಬಿಜೆಪಿ ಸರಕಾರ ಮಾಡಿದೆ. ಬೇರೆಯವರು ಅಲ್ಲ ಎಂದರು.
ಪೋಲಿಯೋ ಲಸಿಕೆ ಭಾರತಕ್ಕೆ ಬರಲು 23 ವರ್ಷ, ಹೆಪಟೈಟಿಸ್ ಬಿ ಲಸಿಕೆ ಲಭಿಸಲು 20 ವರ್ಷ, ಟೆಟನಸ್ ಔಷಧಿ ಸಿಗಲು ಹಲವಾರು ವರ್ಷ ಬೇಕಾಯಿತು. ಆದರೆ, ಕೋವಿಡ್‍ಗೆ ತ್ವರಿತವಾಗಿ ದೇಶೀಯ 2 ಲಸಿಕೆ ಕಂಡುಹಿಡಿದು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ. ಇದೆಲ್ಲದರ ನಡುವೆ ಕಾಂಗ್ರೆಸ್‍ನ ನಡೆ ದೇಶಕ್ಕೆ ಮಾಡಿದ ದ್ರೋಹ. ಎಲ್ಲ ದೇಶಗಳ ಪ್ರಶಂಸೆ ಬಂದರೂ ಹಳೆಯ ಪಕ್ಷವಾದ ಕಾಂಗ್ರೆಸ್ ಮಾತ್ರ ತದ್ವಿರುದ್ಧವಾಗಿ ನಡೆದುಕೊಂಡದ್ದು, ಮೇಕ್ ಇನ್ ಇಂಡಿಯಾ, ಲಸಿಕೆಗೆ ಟೀಕೆ ಮಾಡಿದ್ದಾರೆ. ಇದು ಅತ್ಯಂತ ಖೇದಕರ ಎಂದು ಹೇಳಿದರು.












Click it and Unblock the Notifications