ಮತ್ತೆ ಬಂತು ಕೊರೊನಾ: ಕರ್ನಾಟಕದಲ್ಲಿ ವ್ಯಕ್ತಿ ಸಾವು
ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಆವರಿಸಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಮಾರ್ಗಸೂಚಿ ಪ್ರಕಟಿಸಿದ್ದು, ರಾಜ್ಯದಲ್ಲಿ ಕೊರೋನಾ ಉಪತಳಿಯ ಆತಂಕದ ನಡುವೆ ನಿನ್ನೆ ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಸುದ್ದಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಐದು ಜನರ ಸಾವು ಆಗಿದೆ. ಹಾರ್ಟ್, ಕ್ಯಾನ್ಸರ್ ಸಮಸ್ಯೆ ಇದ್ದವರಿಗೆ ಕೋವಿಡ್ ಆದಾಗ ಸಾವು ಆಗಿದೆ. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಟಿಬಿ ಕಾಯಿಲೆ ಕೂಡಾ ಇತ್ತು, ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ. ಮಲ್ಲಿಗೆ ಆಸ್ಪತ್ರೆಯಲ್ಲಿ ಚಾಮರಾಜಪೇಟೆಯ ವ್ಯಕ್ತಿ ಸಾವಾಗಿದೆ ಎಂದು ಹೇಳಿದರು.

ವೆಂಟಿಲೇಟರ್ ನಿರ್ವಹಣೆಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಐಸಿಎಂಆರ್ ಫೋರ್ಟಲ್ ಡೇಟಾ ಮಾಹಿತಿ ಸಿಗುತ್ತಿಲ್ಲ, ಪೋರ್ಟಲ್ ಸರಿಪಡಿಸಲು ಮನವಿ ಮಾಡಿದ್ದೇವೆ. ಕಡ್ಡಾಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ, ಅಂತರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ಏನು ಕ್ರಮ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದೆ. ಆದರೆ ಅದರ ಬಗ್ಗೆ ಯಾವುದೇ ನಿಬಂಧನೆಗಳು ಇಲ್ಲ ಎಂದಿದ್ದಾರೆ.
ಗಡಿ ಭಾಗದಲ್ಲಿ ನಿಬಂಧನೆಗಳ ಬಗ್ಗೆ ಕೇಂದ್ರ ಸೂಚನೆ ನೀಡಿಲ್ಲ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಲಿ, ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. JN.1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.
ಕೋವಿಡ್ ಟೆಸ್ಟಿಂಗ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಮುಂಬರುವ ಶನಿವಾರದ ವೇಳೆಗೆ ಪ್ರತಿ ನಿತ್ಯ 5 ಸಾವಿರ ಪ್ರಕರಣಗಳ ಟೆಸ್ಟಿಂಗ್ ನಡೆಸುವಂತಾಗಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿ ಕೋವಿಡ್ ಕುರಿತು ನಿಗಾ ಇಡುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಇನ್ಫೆಕ್ಷನ್ ಗಳಿಗೆ ಒಳಗಾದವರುನ್ನ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಒಳಪಡಿಸಲು ಸೂಚನೆ ನೀಡಲಾಗಿದೆ. ಆಕ್ಸಿಜನ್, ವೆಂಟಲೇಟರ್, ಐಸಿಯು ಬೆಡ್ ಗಳನ್ನ ಸನ್ನದ್ದ ಸ್ಥತಿಯಲ್ಲಿರಿಸಿಕೊಂಡು ಮುಂಜಾಗೃತವಾಗಿ ಸಜ್ಜಾಗಿರಬೇಕು.
ವೈರಲ್ ಟ್ರಾನ್ಸಪೋರ್ಟ್ ಮಿಡಿಯಾ ಸಪ್ಲೆ ಮಾಡೋದಕ್ಕೆ ಕೇಳಲಾಗಿದೆ. ಹೊರ ರಾಜ್ಯಗಳಿಂದ ಬಂದವರಲ್ಲಿ ಕೋವಿಡ್ ಲಕ್ಷಣಗಳಿದ್ದವರನ್ನ ಕಡ್ಡಾಯವಾಗಿ ಟೆಸ್ಟಿಂಗ್ ಒಳಪಡಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ. ಸದ್ಯಕ್ಕೆ ಗಡಿ ಬಂದ್ ಮಾಡುವ ಪರಿಸ್ಥಿತಿ ಇಲ್ಲ. ರಾಜ್ಯಾದ್ಯಂತ ಅಗತ್ಯ ಆರ್.ಟಿ.ಪಿ.ಸಿ.ಆರ್ ಟೆಸ್ಟಿಂಗ್ ಕಿಟ್ ಸರಬರಾಜಿಗೆ ಸೂಚನೆ ನೀಡಲಾಗಿದೆ ಎಂದರು.












Click it and Unblock the Notifications