ಸರ್ಕಾರದಿಂದ ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ, ಏನು? ಎತ್ತ?

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 27: ಬಡವರಿಗೆ ಮನೆ ನೀಡುವ ವಸತಿ ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಮುಂದಾಗಿರುವ ಸುದ್ದಿ ಈಗಾಗಲೇ ತಿಳಿದಿರಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ವಾಸ್ತುಶಾಸ್ತ್ರದ ಪ್ರಕಾರ ಮುಂಬಾಗಿಲು, ಕಿಟಕಿ ಹೇಗಿರಬೇಕು?

ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು, ಐದು ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿರುವ ಬಡವರಿಗೆ ಈ ಯೋಜನೆಯ ಲಾಭ ಸಿಗಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮನೆ ಪಡೆಯಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಇದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಜತೆಗೆ ಸ್ವಂತ ಮನೆ ಇಲ್ಲದ ಮಹಾನಗರದ ಬಡವರಿಗೆ ವರದಾನವಾಗಲಿದೆ. ಕೂಡಲೇ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, 24 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ವಂತ ಮನೆ ಇಲ್ಲದ ಬಡವರಿಗೆ ವಸತಿ

ಸ್ವಂತ ಮನೆ ಇಲ್ಲದ ಬಡವರಿಗೆ ವಸತಿ

ಬೆಂಗಳೂರು ಮಹಾನಗರದಲ್ಲಿ ಸ್ವಂತ ಮನೆ ಇಲ್ಲದ ಬಡವರಿಗೆ ವಸತಿ ಭಾಗ್ಯ ಕಲ್ಪಿಸುವ ಉದ್ದೇಶದಿಂದ ಒಂದು ಲಕ್ಷ ವಸತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿಯೇ ಘೋಷಣೆ ಮಾಡಿದ್ದರು.

ಈ ಯೋಜನೆಗೆ ಸೆಪ್ಟೆಂಬರ್ 29ರಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕಳೆದ 10ರಂದು ಅಧಿಕೃತ ಆದೇಶವೂ ಹೊರ ಬಿದ್ದಿದೆ. ಯೋಜನೆಯನ್ನು ತ್ವರಿತವಾಗಿ ಜಾರಿಗೆ ತರಲು ರಾಜೀವ್‍ಗಾಂಧಿ ವಸತಿ ನಿಗಮ ಕಾರ್ಯೋನ್ಮುಖವಾಗಿದೆ.

ಮಹತ್ವಾಕಾಂಕ್ಷೆಯ ಯೋಜನೆ

ಮಹತ್ವಾಕಾಂಕ್ಷೆಯ ಯೋಜನೆ

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಜತೆಗೆ ಸ್ವಂತ ಮನೆ ಇಲ್ಲದ ಮಹಾನಗರದ ಬಡವರಿಗೆ ವರದಾನವಾಗಲಿದೆ. ಕೂಡಲೇ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, 24 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

1,100 ಎಕರೆ ಜಮೀನಿನ ಅಗತ್ಯವಿದೆ

1,100 ಎಕರೆ ಜಮೀನಿನ ಅಗತ್ಯವಿದೆ

ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ 1,100 ಎಕರೆ ಜಮೀನಿನ ಅಗತ್ಯವಿದೆ. ಇದಕ್ಕಾಗಿ ವಿವಿಧೆಡೆಗಳಲ್ಲಿ ಜಾಗ ಗುರುತಿಸಲಾಗಿದೆ. ನಗರದಲ್ಲಿ ಈಗಾಗಲೇ ಒತ್ತುವರಿ ತೆರವು ಮಾಡಿ ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಅಲ್ಲಿ ಬಡವರಿಗಾಗಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ರಾಜೀವ್‍ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ

ರಾಜೀವ್‍ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ

ನೆಲಮಹಡಿ ಸೇರಿದಂತೆ ಮೂರು ಅಂತಸ್ತಿನಲ್ಲಿ (ಜಿ+3) ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಅಗತ್ಯವಾದ ಭೂಮಿಯನ್ನು ರಾಜೀವ್‍ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂದಿನ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

430 ಎಕರೆ ಜಾಗವನ್ನು ಗುರುತಿಸಲಾಗಿದೆ

430 ಎಕರೆ ಜಾಗವನ್ನು ಗುರುತಿಸಲಾಗಿದೆ

ಈಗಾಗಲೇ 430 ಎಕರೆ ಜಾಗವನ್ನು ಗುರುತಿಸಿದ್ದು, ನಿಗಮದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ಐದಕ್ಕಿಂತ ಹೆಚ್ಚು ವರ್ಷದಿಂದ ವಾಸ ಮಾಡುತ್ತಿರುವ ಹಾಗೂ ವಸತಿ ರಹಿತರಾಗಿರುವ, ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳವರು (ಬಿಪಿಎಲ್) ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

ಆನ್‍ಲೈನ್ ಮೂಲಕ ಅರ್ಜಿ ಸ್ವೀಕಾರ

ಆನ್‍ಲೈನ್ ಮೂಲಕ ಅರ್ಜಿ ಸ್ವೀಕಾರ

ಫಲಾನುಭವಿಗಳಿಂದ ನವೆಂಬರ್ 15ರಿಂದ ಆನ್‍ಲೈನ್ ಮೂಲಕ ಅರ್ಜಿ ಸ್ವೀಕಾರ ಮಾಡಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಶೇ.80ರಷ್ಟು ಮಂದಿಗೆ ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ವ್ಯಾಪ್ತಿಯಲ್ಲಿರುವ (ಬಿಎಂಆರ್‍ಡಿಎ) ಶೇ. 20ರಷ್ಟು ಮಂದಿ ಯೋಜನೆಯ ಲಾಭ ಪಡೆದುಕೊಳ್ಳಬಹುದು.

ಒಂದು ಮನೆಗೆ 5.50 ಲಕ್ಷ ರೂ. ವೆಚ್ಚವಾಗಲಿದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದವರಿಗೆ ಒಂದು ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 50 ಸಾವಿರ ರೂ. ನಿಗದಿಯಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The state cabinet on Thursday approved a proposal for building one lakh houses for the weaker sections in the city on government lands, which were cleared of encroachments in recent years.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ