ಒಬ್ಬರಿಗೆ ಒಂದು ಹುದ್ದೆ ರಾಹುಲ್ ಸೂಚನೆ, ಡಿಕೆಶಿಗೆ ನಿರಾಸೆ!
Recommended Video

ಬೆಂಗಳೂರು, ಜೂನ್ 05 : 'ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸೂಕ್ತ ಅವಕಾಶ ಸಿಗಬೇಕು. ಒಬ್ಬರಿಗೆ ಒಂದು ಹುದ್ದೆ ಮಾತ್ರ ನೀಡಬೇಕು' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದರು.
ಮಂಗಳವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದರು. ಸಂಪುಟ ರಚನೆ, ಯಾರಿಗೆ ಯಾವ ಖಾತೆ? ಎಂದು ರಾಜ್ಯದ ನಾಯಕರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಸೂಚನೆಗಳನ್ನು ಅವರು ನೀಡಿದ್ದಾರೆ.
'ಪಕ್ಷ ಅಧಿಕಾರದಲ್ಲಿ ಇರುವಾಗ ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅವಕಾಶ ಸಿಗಬೇಕು. ಆದ್ದರಿಂದ, ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವನ್ನು ನಾವು ಪಾಲಿಸಬೇಕು' ಎಂದು ರಾಹುಲ್ ಗಾಂಧಿ ಸೂಚನೆ ಕೊಟ್ಟಿದ್ದಾರೆ.

ಡಿಕೆಶಿಗೆ ನಿರಾಸೆ : ರಾಹುಲ್ ಗಾಂಧಿ ಅವರ ಸೂಚನೆಯಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಸೆ ಉಂಟಾಗುವ ಸಾಧ್ಯತೆ ಇದೆ. ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.
ಆದರೆ, ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಒಂದೇ ಹುದ್ದೆ ಸಿಗುವ ಸಾಧ್ಯತೆ ಇದೆ. ಅವರಿಗೆ ಸಚಿವ ಸ್ಥಾನ ಅಥವ ಕೆಪಿಸಿಸಿ ಅಧ್ಯಕ್ಷ ಸ್ಥಾನ ಒಂದು ಸಿಗುವ ಸಾಧ್ಯತೆ ಇದೆ.












Click it and Unblock the Notifications