ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚು ಕೊರೊನಾ ಸೋಂಕಿತರಿರುವ ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದು

|
Google Oneindia Kannada News

ಬೆಂಗಳೂರು, ಮಾರ್ಚ್ 07: ಅತಿ ಹೆಚ್ಚು ಕೊರೊನಾ ಸೋಂಕಿತರಿರುವ ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.

ದೇಶದಲ್ಲಿ ಕೊರೊನಾ ಆರ್ಭಟ ದಿನಕಳೆಯುತ್ತಿದ್ದಂತೆಯ ಮತ್ತೆ ಹೆಚ್ಚಾಗತೊಡಗಿದೆ. ದೇಶದ ಅತೀ ಹೆಚ್ಚು ಕೊರೊನಾ ಸೋಂಕಿತರು ಹೊಂದಿರುವ 5 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ.

ಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆ

ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ತಮಿಳುನಾಡು, ಕರ್ನಾಟಕದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ದೇಶದ ಒಟ್ಟಾರೆ ಸೋಂಕಿತರ ಪೈಕಿ ಕೇವಲ 5 ರಾಜ್ಯಗಳಲ್ಲಿ ಶೇ.82ರಷ್ಟು ಸೋಂಕಿತರು ಇದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ.

ಹೊಸ ಕೊರೊನಾ ಸೋಂಕಿತರ ಪೈಕಿ ರಾಜ್ಯಕ್ಕೆ 4ನೇ ಸ್ಥಾನ

ಹೊಸ ಕೊರೊನಾ ಸೋಂಕಿತರ ಪೈಕಿ ರಾಜ್ಯಕ್ಕೆ 4ನೇ ಸ್ಥಾನ

ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ 5 ರಾಜ್ಯಗಳ ಪೈಕಿ ಶನಿವಾರ ಪತ್ತೆಯಾದ 677 ಹೊಸ ಸೋಂಕಿತರ ಪೈಕಿ ಕರ್ನಾಟಕ ರಾಜ್ಯ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಮೊದಲನಂತೆ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಟೆಸ್ಟ್‌ ಟ್ರ್ಯಾಕ್ ಟ್ರೀಟ್ ನಿಯಮ ಪಾಲನೆ

ಟೆಸ್ಟ್‌ ಟ್ರ್ಯಾಕ್ ಟ್ರೀಟ್ ನಿಯಮ ಪಾಲನೆ

ಟೆಸ್ಟ್-ಟ್ರ್ಯಾಕ್-ಟ್ರೀಟ್ ನಿಯಮ ಪಾಲನೆಯನ್ನು ತ್ವರಿತಗತಿಯಲ್ಲಿ ಜಾರಿಗೆ ತರಬೇಕು. ಅಲ್ಲದೆ, ಸಾರಿ ಹಾಗೂ ಐಎಲ್ಐ ಪ್ರಕರಣಗಳನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ.

ದಿನಕ್ಕೆ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ: ಸುಧಾಕರ್ದಿನಕ್ಕೆ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ: ಸುಧಾಕರ್

ಆರೋಗ್ಯ ಸಚಿವ ಡಾ. ಸುಧಾರಕ್ ಹೇಳಿದ್ದೇನು?

ಆರೋಗ್ಯ ಸಚಿವ ಡಾ. ಸುಧಾರಕ್ ಹೇಳಿದ್ದೇನು?

ಈ ನಡುವೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗುವ ಎಲ್ಲಾ ಬೆಳವಣಗೆಗಳು ಕಂಡು ಬರುತ್ತಿವೆ.

ಈ ಬೆಳವಣಿಗೆಗಳು ಕೊರೊನಾ ಎರಡನೇ ಅಲೆ ಆರಂಭವಾಗುವ ಸೂಚನೆಗಳನ್ನು ನೀಡುತ್ತಿದೆ. ಹೀಗಾಗಿ ನಾವು ಈ ಹಿಂದಿನ ಟೆಸ್ಟ್-ಟ್ರ್ಯಾಕ್-ಟ್ರೀಟ್ ಫಾರ್ಮುಲಾವನ್ನು ಪಾಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.ಸಾಂಕ್ರಾಮಿಕ ರೋಗ ಮುಗಿಯಿತೆಂದು ಜನರು ತಿಳಿಯಬಾರದು. ಕೇಂದ್ರ ಆರೋಗ್ಯ ಸಚಿವಾಲಯದ ತಜ್ಞರು ಹಾಗೂ ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಮಾಹಿತಿಯಂತೆ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರಲ್ಲಿ ಕರ್ನಾಟಕ ರಾಜ್ಯ ಕೂಡ ಒಂದಾಗಿದೆ.
ಮಾರ್ಚ್ 8 ರಿಂದ 3000 ಲಸಿಕಾ ಕೇಂದ್ರಗಳಲ್ಲಿ ಕೊರೊನಾ ಲಸಿಕೆ

ಮಾರ್ಚ್ 8 ರಿಂದ 3000 ಲಸಿಕಾ ಕೇಂದ್ರಗಳಲ್ಲಿ ಕೊರೊನಾ ಲಸಿಕೆ

ರಾಜ್ಯದಲ್ಲಿ ಮಾರ್ಚ್ 8 ರಿಂದ ಮೂರು ಸಾವಿರ ಲಸಿಕಾ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದಿನಕ್ಕೆ ಒಂದರಿಂದ ಒಂದೂವರೆ ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಇಟ್ಟುಕೊಂಡಿದ್ದೇವೆ. ನಾವು ಈ ಗುರಿ ತಲುಪಲು ಸಾಧ್ಯವಾದರೆ, 60 ದಿನಗಳಲ್ಲಿ ದೇಶದಲ್ಲೇ ಅತೀ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಹೇಳಿದರು.

ಲಸಿಕೆ ಅಭಿಯಾನವನ್ನು ಎಲ್ಲಾ ಜಿಲ್ಲೆಗಳ ಪ್ರಾಥಮಿಕ ನಗರ, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆರೋಗ್ಯ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.

English summary
Karnataka is one of five states which together constitute 82% of new cases registered across the country on Saturday, even as the state has ramped up the number of vaccination centres to speed up immunisation from Monday. Karnataka stands fourth with 677 new cases on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X