ಕುಮಾರಸ್ವಾಮಿಯನ್ನು ಬಂಧಿಸೋಕೆ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾಕು- ಸಿಎಂ ಸಿದ್ದರಾಮಯ್ಯ

ಬೆಂಗಖೂರು, ಆಗಸ್ಟ್‌ 22: ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂಬ ಕುಮಾರಸ್ವಾಮಿಯವರ ಮಾತು ಹಾಸ್ಯಾಸ್ಪದವಾಗಿದೆ. ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಹೊರತು ನನ್ನದಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ.

One Police Constable Was Enough To Arrest Kumaraswamy Says CM Siddaramaiah

ಎಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೋ ಎಂಬ ಭಯದಲ್ಲಿ ಮಾಧ್ಯಮಗಳನ್ನು ಕರೆದು ಮಾತಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲೀ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಮುಖ್ಯಮಂತ್ರಿ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ತನ್ನ ಬಳಿ 'ಪೆನ್ ಡ್ರೈವ್' ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು ಅವುಗಳನ್ನು ಬಿಡುಗಡೆ ಮಾಡಬೇಕು.

ಮುಡಾ ವಿಚಾರದಲ್ಲಿ ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು, ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು? ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+