ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!
ಬೆಂಗಳೂರು, ನ. 20: ಉಪನ್ಯಾಸಕರಾಗಲು ತಯಾರಿ ನಡೆಸಿರುವ ಆಕಾಂಕ್ಷಿಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಈ ಬಗ್ಗೆ ಮಾತನಾಡಿರುವ ಸ್ವತಃ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ನೇರ ನೇಮಕಾತಿಗೆ ಲಭ್ಯವಿರುವ ಸುಮಾರು ಒಂದು ಸಾವಿರ ಹುದ್ದೆಗಳನ್ನು ತುಂಬಲು ಮುಂದಿನ ಆರು ತಿಂಗಳ ಅವಧಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಗೆ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಸಾಂಕೇತಿಕ ನೇಮಕಾತಿ ಆದೇಶ ವಿತತರಿಸಿ ಮಾತನಾಡಿದ್ದಾರೆ. ಇಷ್ಟರಲ್ಲಿಯೇ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದೂ ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ವಿಷಯಗಳ 1194 ಉಪನ್ಯಾಸಕ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯ್ಕೆ ಮಾಡಿದೆ. ಅವರಲ್ಲಿ 1161 ಮಂದಿ ಈಗಾಗಲೇ ಸ್ಥಳ ನಿಯುಕ್ತಿ ಮಾಡಿಕೊಂಡಿದ್ದಾರೆ.

ಉಪನ್ಯಾಸಕರಿಗೆ ನೇಮಕಾತಿ ಆದೇಶ
1203 ಉಪನ್ಯಾಸಕರ ಆಯ್ಕೆಗೆ 2015ರಿಂದ ಪ್ರಕ್ರಿಯೆ ಶುರುವಾಗಿತ್ತು. ಆದರೆ ಅದು ಅರ್ಜಿ ಕರೆದುದರ ಹೊರತಾಗಿ ಮುಂದೆ ಹೋಗಿರಲಿಲ್ಲ. 2019ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಪ್ರಕ್ರಿಯೆಗೆ ವೇಗ ದೊರಕಿತು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ವೇಗ ದೊರಕಿತು. ಉಪನ್ಯಾಸಕರ ಆಯ್ಕೆ ಪೂರ್ಣಗೊಂಡು ಸ್ಥಳ ನಿಯುಕ್ತಿ ಮಾಡಿ ಇಂದು ಆದೇಶ ನೀಡುತ್ತಿದ್ದೇವೆ. ಈ ಕೆಲಸ ಇನ್ನೂ ಆರು ತಿಂಗಳ ಮೊದಲೇ ನಡೆಯಬೇಕಿತ್ತು.

ನನಗೆ ಹೆಮ್ಮೆಯಾಗುತ್ತದೆ
ಆದರೆ ಕೋವಿಡ್-19 ಪ್ರಸರಣದಿಂದಾಗಿ ಲಾಕ್‍ಡೌನ್ ಹಿನ್ನೆಲೆ ಹಾಗೂ ಶಾಲಾ ಕಾಲೇಜುಗಳು ಪುನರಾರಂಭವಾಗುವುದರ ಅನಿಶ್ಚಿತ ವಾತಾವರಣದ ಹಿನ್ನೆಲೆಯಲ್ಲಿ ಈಗ ಇದಕ್ಕೆ ಮಹೂರ್ತ ನಿಗದಿಯಾಗಿದೆ, ತಾವು ಇಲಾಖೆಯ ಸಚಿವರಾದ ಮಾರನೇ ದಿನವೇ ಈ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಸಚಿವನಾಗಿ ನಾನು ಕೈಗೆತ್ತಿಕೊಂಡ ಮೊದಲ ಕೆಲಸ ಇದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು ಸುರೇಶ್‌ಕುಮಾರ್ ಹೇಳಿದರು.
ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು.

ಖಾಲಿ ಹುದ್ದೆಗಳ ಶೀಘ್ರ ಭರ್ತಿ
ರಾಜ್ಯದಲ್ಲಿ ಇರುವ 1231 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 12, 857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2487 ಹುದ್ದೆಗಳು ಖಾಲಿಯಾಗಿವೆ. ಈ ಖಾಲಿಯಾದ ಹುದ್ದೆಗಳಿಗೆ ಈಗ ನೇಮಕ ಮಾಡಿರುವ 1196 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಇದರ ಹೊರತಾಗಿಯೂ ಉಳಿಯುವ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸರ್ಕಾರ ಕ್ರಿಯಾ ಯೋಜನೆ ರೂಪಿಸುತ್ತಿದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರಿ, ಅನುದಾನಿತ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು 12,22,273 ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.
Recommended Video

ಭ್ರಷ್ಟಾಚಾರಕ್ಕೆ ಎಡೆ ಮಾಡದೇ ನೇಮಕಾತಿ
ನೂತನ ಉಪನ್ಯಾಸಕರಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್‌ಕುಮಾರ್, ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿ ಭ್ರಷ್ಟಾಚಾರಕ್ಕೆ ಎಡೆ ಮಾಡದೇ ನೇಮಕಾತಿ ಆದೇಶಗಳನ್ನು ನೀಡಿದ್ದು, ಮಕ್ಕಳ ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಹೇಳಿದರು.
ಕೋವಿಡ್ ತಂದೊಡ್ಡಿದ ಎಲ್ಲ ಆರ್ಥಿಕ ಸಂಕಷ್ಟದ ಸಮಯದಲ್ಲೂ ನೇಮಕಾತಿ ಆದೇಶಗಳನ್ನು ನೀಡಲಾಗಿದ್ದು ಎಲ್ಲ ಉಪನ್ಯಾಸಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದರು.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪದವಿಪೂರ್ವ ಶಿಕ್ಷಣ ನಿರ್ದೇಶಕಿ ದೀಪಾಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications