ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

|
Google Oneindia Kannada News

ಬೆಂಗಳೂರು, ನ. 20: ಉಪನ್ಯಾಸಕರಾಗಲು ತಯಾರಿ ನಡೆಸಿರುವ ಆಕಾಂಕ್ಷಿಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಈ ಬಗ್ಗೆ ಮಾತನಾಡಿರುವ ಸ್ವತಃ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಪದವಿಪೂರ್ವ ಶಿಕ್ಷಣ‌ ಇಲಾಖೆಯಲ್ಲಿ ನೇರ‌ ನೇಮಕಾತಿಗೆ ಲಭ್ಯವಿರುವ ಸುಮಾರು ಒಂದು ಸಾವಿರ ಹುದ್ದೆಗಳನ್ನು ತುಂಬಲು‌ ಮುಂದಿನ ಆರು ತಿಂಗಳ‌ ಅವಧಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪದವಿಪೂರ್ವ ಶಿಕ್ಷಣ‌ ಇಲಾಖೆಗೆ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಸಾಂಕೇತಿಕ ನೇಮಕಾತಿ ಆದೇಶ ವಿತತರಿಸಿ ಮಾತನಾಡಿದ್ದಾರೆ. ಇಷ್ಟರಲ್ಲಿಯೇ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದೂ ತಿಳಿಸಿದ್ದಾರೆ.

ಉಪನ್ಯಾಸಕ ಅಭ್ಯರ್ಥಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್ ಕೊಟ್ಟ ಸುರೇಶ್ ಕುಮಾರ್!ಉಪನ್ಯಾಸಕ ಅಭ್ಯರ್ಥಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್ ಕೊಟ್ಟ ಸುರೇಶ್ ಕುಮಾರ್!

ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ವಿಷಯಗಳ 1194 ಉಪನ್ಯಾಸಕ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯ್ಕೆ ಮಾಡಿದೆ. ಅವರಲ್ಲಿ 1161 ಮಂದಿ ಈಗಾಗಲೇ ಸ್ಥಳ ನಿಯುಕ್ತಿ ಮಾಡಿಕೊಂಡಿದ್ದಾರೆ.

ಉಪನ್ಯಾಸಕರಿಗೆ ನೇಮಕಾತಿ ಆದೇಶ

ಉಪನ್ಯಾಸಕರಿಗೆ ನೇಮಕಾತಿ ಆದೇಶ

1203 ಉಪನ್ಯಾಸಕರ ಆಯ್ಕೆಗೆ 2015ರಿಂದ ಪ್ರಕ್ರಿಯೆ ಶುರುವಾಗಿತ್ತು. ಆದರೆ ಅದು ಅರ್ಜಿ ಕರೆದುದರ ಹೊರತಾಗಿ ಮುಂದೆ ಹೋಗಿರಲಿಲ್ಲ. 2019ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಪ್ರಕ್ರಿಯೆಗೆ ವೇಗ ದೊರಕಿತು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ವೇಗ ದೊರಕಿತು. ಉಪನ್ಯಾಸಕರ ಆಯ್ಕೆ ಪೂರ್ಣಗೊಂಡು ಸ್ಥಳ ನಿಯುಕ್ತಿ ಮಾಡಿ ಇಂದು ಆದೇಶ ನೀಡುತ್ತಿದ್ದೇವೆ. ಈ ಕೆಲಸ ಇನ್ನೂ ಆರು ತಿಂಗಳ ಮೊದಲೇ ನಡೆಯಬೇಕಿತ್ತು.

ನನಗೆ ಹೆಮ್ಮೆಯಾಗುತ್ತದೆ

ನನಗೆ ಹೆಮ್ಮೆಯಾಗುತ್ತದೆ

ಆದರೆ ಕೋವಿಡ್-19 ಪ್ರಸರಣದಿಂದಾಗಿ ಲಾಕ್‍ಡೌನ್ ಹಿನ್ನೆಲೆ ಹಾಗೂ ಶಾಲಾ ಕಾಲೇಜುಗಳು ಪುನರಾರಂಭವಾಗುವುದರ ಅನಿಶ್ಚಿತ ವಾತಾವರಣದ ಹಿನ್ನೆಲೆಯಲ್ಲಿ ಈಗ ಇದಕ್ಕೆ ಮಹೂರ್ತ ನಿಗದಿಯಾಗಿದೆ, ತಾವು ಇಲಾಖೆಯ ಸಚಿವರಾದ ಮಾರನೇ ದಿನವೇ ಈ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಸಚಿವನಾಗಿ ನಾನು ಕೈಗೆತ್ತಿಕೊಂಡ ಮೊದಲ ಕೆಲಸ ಇದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು‌ ಸುರೇಶ್‌ಕುಮಾರ್‌ ಹೇಳಿದರು.

ಚಂದನವಾಹಿನಿಯಲ್ಲಿ ನ.23 ರಿಂದ 5-7ನೇ ತರಗತಿಗೆ ಸಂವೇದಾ ಪಾಠ: ಶಿಕ್ಷಣ ಸಚಿವ ಸುರೇಶ್ ಕುಮಾರ್ಚಂದನವಾಹಿನಿಯಲ್ಲಿ ನ.23 ರಿಂದ 5-7ನೇ ತರಗತಿಗೆ ಸಂವೇದಾ ಪಾಠ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು.

ಖಾಲಿ ಹುದ್ದೆಗಳ ಶೀಘ್ರ ಭರ್ತಿ

ಖಾಲಿ ಹುದ್ದೆಗಳ ಶೀಘ್ರ ಭರ್ತಿ

ರಾಜ್ಯದಲ್ಲಿ ಇರುವ 1231 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 12, 857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2487 ಹುದ್ದೆಗಳು ಖಾಲಿಯಾಗಿವೆ. ಈ ಖಾಲಿಯಾದ ಹುದ್ದೆಗಳಿಗೆ ಈಗ ನೇಮಕ ಮಾಡಿರುವ 1196 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಇದರ ಹೊರತಾಗಿಯೂ ಉಳಿಯುವ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸರ್ಕಾರ ಕ್ರಿಯಾ ಯೋಜನೆ ರೂಪಿಸುತ್ತಿದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರಿ, ಅನುದಾನಿತ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು 12,22,273 ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.

Recommended Video

26 /11 ಅದೇ ದಿನ ಮತ್ತೊಂದು ದಾಳಿ ಸಾಧ್ಯತೆ | Oneindia Kannada
ಭ್ರಷ್ಟಾಚಾರಕ್ಕೆ ಎಡೆ ಮಾಡದೇ ನೇಮಕಾತಿ

ಭ್ರಷ್ಟಾಚಾರಕ್ಕೆ ಎಡೆ ಮಾಡದೇ ನೇಮಕಾತಿ

ನೂತನ‌ ಉಪನ್ಯಾಸಕರಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್‌ಕುಮಾರ್, ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿ ಭ್ರಷ್ಟಾಚಾರಕ್ಕೆ ಎಡೆ ಮಾಡದೇ ನೇಮಕಾತಿ ಆದೇಶಗಳನ್ನು ನೀಡಿದ್ದು, ಮಕ್ಕಳ ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಹೇಳಿದರು.

ಕೋವಿಡ್ ತಂದೊಡ್ಡಿದ ಎಲ್ಲ ಆರ್ಥಿಕ ಸಂಕಷ್ಟದ ಸಮಯದಲ್ಲೂ ನೇಮಕಾತಿ ಆದೇಶಗಳನ್ನು ನೀಡಲಾಗಿದ್ದು ಎಲ್ಲ ಉಪನ್ಯಾಸಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದರು.

ಶಿಕ್ಷಣ ಇಲಾಖೆಯ ಪ್ರಧಾನ‌ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪದವಿಪೂರ್ವ ಶಿಕ್ಷಣ‌ ನಿರ್ದೇಶಕಿ ದೀಪಾ‌ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು‌ ಉಪಸ್ಥಿತರಿದ್ದರು.

English summary
The Minister of Education Sureshkumar said that in the next six months, action will be taken to recruit one thousand vacancies available for direct recruitment in the Education Department, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X