ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೇ ಕಂತಿನಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ: ಕುಮಾರಸ್ವಾಮಿ

|
Google Oneindia Kannada News

Recommended Video

ರೈತರ ಸಾಲಮನ್ನಾ ಕುರಿತಂತೆ ಸಾಕಷ್ಟು ಟೀಕೆ, ಟಿಪ್ಪಣಿಗಳಿಗೆ ತೆರೆ | Oneindia Kannada

ಬೆಂಗಳೂರು, ಜೂನ್ 12: ರೈತರ ಸಾಲಮನ್ನಾ ಕುರಿತಂತೆ ಸಾಕಷ್ಟು ಟೀಕೆ, ಟಿಪ್ಪಣಿಗಳಿಗೆ ತೆರೆ ಬಿದ್ದಿದೆ. ಒಂದೇ ಕಂತಿನಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿರುವ ರೈತರ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌ಡಿಕುಮಾರಸ್ವಾಮಿ ಮಹತ್ವದ ಆದೇಶ ನೀಡಿದ್ದಾರೆ.

ಮೊದಲನೇ ಕಂತಿನಲ್ಲಿ ಹಲವು ರೈತರ ಸಾಲವನ್ನು ಮನ್ನಾ ಮಾಡಲಾಗಿತ್ತು. ಆದರೆ ಬಹುತೇಕ ರೈತರ ಸಾಲಮನ್ನಾವಾಗಿರಲಿಲ್ಲ. ಈಗ ಉಳಿದವರ ಸಂಪೂರ್ಣ ಸಾಲವನ್ನು ಒಂದೇ ಕಂತಿನಲ್ಲಿ ಅವರ ಖಾತೆಗೆ ಬಿಡುಗಡೆಯಾಗಬೇಕು ಎಂದು ಕುಮಾರಸ್ವಾಮಿ ಆದೇಶ ಹೊರಡಿಸುವ ಮೂಲಕ ರೈತರ ಗೊಂದಲ ನಿವಾರಣೆ ಮಾಡಿದ್ದಾರೆ.

One time loan relief to farmers from the commercial banks

ಈಗ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ರಾಜ್ಯದಲ್ಲಿ ಬೆಳೆ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾಗಿರುವ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಕುಮಾರಸ್ವಾಮಿ ಆದೇಶ ನೀಡಿದ್ದಾರೆ.

ಸಾಲಮನ್ನಾ ಯೋಜನೆಯಲ್ಲಿ ಸುಸ್ತಿ ಬೆಳೆ ಸಾಲ 2 ಲಕ್ಷ ರೂ ಮೀರದಂತೆ ರೈತರು ಸಾಲಮನ್ನಾಗೆ ಅರ್ಹರಾಗಿರುತ್ತಾರೆ. ಎನ್‌ಪಿಎ ಲೋನ್ ಹಾಗೂ 2018ರ ಜನವರಿ 1ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

English summary
Chief minister HD Kumaraswamy issued order and send notice to the Commercial banks to give one time loan relief to the farmers in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X