ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?
ಬೆಂಗಳೂರು, ಜೂ. 25 : ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಅಕ್ರಮ-ಸಕ್ರಮದ ಭಾಗ್ಯ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಕಂದಾಯ ಭೂಮಿಯಲ್ಲಿನ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಿದ್ದಲ್ಲಿ, ಅವುಗಳನ್ನು ಸಕ್ರಮ ಮಾಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 18 ಕಿ.ಮೀ, ಇತರ ಪಾಲಿಕೆಗಳಲ್ಲಿ 10 ಕಿ.ಮೀ., ನಗರ ಸಭೆ ವ್ಯಾಪ್ತಿಯಲ್ಲಿ 5 ಕಿ.ಮೀ ಮತ್ತು ಪುರಸಭೆ ವ್ಯಾಪ್ತಿಯ 3 ಕಿ.ಮೀ.ನಲ್ಲಿ ಇದು ಜಾರಿಗೆ ಬರೆಲಿದೆ. [ಕರ್ನಾಟಕ : ಅಕ್ರಮ-ಸಕ್ರಮ, ನಿಮಗಿದು ತಿಳಿದಿರಲಿ]

ಬಿಬಿಎಂಪಿ ವ್ಯಾಪ್ತಿ : ಬೆಂಗಳೂರು ನಗರದ 18 ಕಿ.ಮೀ. ವ್ಯಾಪ್ತಿಯೊಳಗೆ 20*30 ಅಡಿ ನಿವೇಶನದಲ್ಲಿ ಮನೆ ನಿರ್ಮಿಸಿದ್ದಲ್ಲಿ ದಂಡ ಪಾವತಿಸಿ ಸಕ್ರಮ ಮಾಡಿಕೊಳ್ಳಬಹುದು. ಮಾರ್ಗಸೂಚಿ ದರದ ಅನ್ವಯ ಸಾಮಾನ್ಯ ವರ್ಗದವರಿಗೆ ಶೇ 20, ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ವಿಕಲ ಚೇತನರಿಗೆ ಶೇ 10 ರಷ್ಟು ದಂಡ ವಿಧಿಸಲಾಗುತ್ತದೆ. [ಅಕ್ರಮ-ಸಕ್ರಮ ವಿಧೇಯಕ, ರಾಜ್ಯಪಾಲರ ಒಪ್ಪಿಗೆ]
ಇತರ ಮಹಾನಗರ ಪಾಲಿಕೆಗಳು : ಬಿಬಿಎಂಪಿ ಹೊರತುಪಡಿಸಿ ಉಳಿದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ಕಿ.ಮೀ. ವ್ಯಾಪ್ತಿಯೊಳಗೆ ಈ ಯೋಜನೆ ಜಾರಿಗೆ ಬರಲಿದೆ. ಮಾರ್ಗಸೂಚಿ ದರದ ಅನ್ವಯ ಸಾಮಾನ್ಯ ವರ್ಗದವರು ಶೇ 15, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ವಿಕಲ ಚೇತನರು ಶೇ 7.5 ರಷ್ಟು ದಂಡ ಪಾವತಿಸಿ ಸಕ್ರಮ ಮಾಡಿಕೊಳ್ಳಬಹುದು.
ನಗರ ಸಭೆಯಲ್ಲಿ ಸಕ್ರಮ ಹೇಗೆ? : ನಗರ ಸಭೆ ವ್ಯಾಪ್ತಿಯಲ್ಲಿ 5 ಕಿ.ಮೀ.ವ್ಯಾಪ್ತಿಯೊಳಗೆ 20*30 ಅಡಿ ಮೀರದ ನಿವೇಶನದಲ್ಲಿ ಮನೆ ನಿರ್ಮಿಸಿದ್ದಲ್ಲಿ ಸಾಮಾನ್ಯ ವರ್ಗದವರು ಶೇ 10, ಪ.ಜಾ/ಪ.ಪ/ವಿಕಲ ಚೇತನರು ಶೇ 5ರಷ್ಟು ದಂಡ ಪಾವತಿ ಮಾಡಬೇಕು.
ಪುರಸಭೆ,ಪಟ್ಟಣ ಪಂಚಾಯಿತಿ : ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ 3 ಕಿ.ಮೀ.ವ್ಯಾಪ್ತಿಯೊಳಗೆ ನಿರ್ಮಿಸಿದ ಮನೆಗಳನ್ನು ಸಾಮಾನ್ಯ ವರ್ಗದವರು ಶೇ 10, ಪ.ಜಾ/ಪ.ಪಂ/ವಿಕಲ ಚೇತನರು ಶೇ 5ರಷ್ಟು ದಂಡ ಪಾವತಿ ಮಾಡಿ ಸಕ್ರಮ ಮಾಡಿಕೊಳ್ಳಬಹುದು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications