ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿವರಗಳು

ಬೆಂಗಳೂರು, ಜನವರಿ 19 : ರಾಜ್ಯ ಚುನಾವಣಾ ಆಯೋಗ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 13 ಮತ್ತು 20ರಂದು ಒಟ್ಟು ಎರಡು ಹಂತದಲ್ಲಿ ಚುನಾವಣೆಗಳು ನಡೆಯಲಿವೆ. ಫೆಬ್ರವರಿ 23ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯದ 26 ಜಿಲ್ಲಾ ಪಂಚಾಯಿತಿಗಳ ಒಟ್ಟು 922 ಕ್ಷೇತ್ರಗಳಿಗೆ ಮತ್ತು 175 ತಾಲೂಕು ಪಂಚಾಯಿತಿಗಳ 3884 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 15 ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. [ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ವೇಳಾಪಟ್ಟಿ]

ವಿಜಯಪುರ, ಬೀದರ್, ರಾಯಚೂರು ಮತ್ತು ಕಲಬುರಗಿ ಜಿಲ್ಲಾ ಪಂಚಾಯಿತಿಗಳ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದ್ದರಿಂದ, ಈ 4 ಜಿಲ್ಲಾ ಪಂಚಾಯಿತಿ ಹೊರತುಪಡಿಸಿ ಉಳಿದ 26 ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ.

ಕೇಂದ್ರ ಚುನಾವಣಾ ಆಯೋಗ ಬೀದರ್, ಹೆಬ್ಬಾಳ ಮತ್ತು ದೇವದುರ್ಗ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ದಿನಾಂಕಗಳನ್ನು ಘೋಷಣೆ ಮಾಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯ ನಡುವೆಯೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಿವೆ..... ಚುನಾವಣೆಯ ವಿವರಗಳು ಚಿತ್ರಗಳಲ್ಲಿ ನೋಡಿ [ಉಪ ಚುನಾವಣೆ ವೇಳಾಪಟ್ಟಿ]

ಎರಡು ಹಂತದಲ್ಲಿ ಚುನಾವಣೆ

ಎರಡು ಹಂತದಲ್ಲಿ ಚುನಾವಣೆ

ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಫೆ.13ರ ಶನಿವಾರ ಮತ್ತು 20ರ ಶನಿವಾರ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಫೆ.23ರ ಮಂಗಳವಾರ ಫಲಿತಾಂಶ ಪ್ರಕಟಗೊಳ್ಳಲಿದೆ.

ಮೊದಲ ಹಂತದ ಮತದಾನ

ಮೊದಲ ಹಂತದ ಮತದಾನ

ಅವಧಿ ಮುಕ್ತಾಯಗೊಳ್ಳದಿರುವ ಕಾರಣ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಹೊರತುಪಡಿಸಿ, 15 ಜಿಲ್ಲೆಗಳ ಉಳಿದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಫೆ.13ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

2ನೇ ಹಂತದ ಮತದಾನ

2ನೇ ಹಂತದ ಮತದಾನ

ವಿಜಯಪುರ, ಬೀದರ್, ರಾಯಚೂರು ಮತ್ತು ಕಲಬುರಗಿ ಜಿಲ್ಲಾ ಪಂಚಾಯಿತಿಗಳನ್ನು ಹೊರತುಪಡಿಸಿ ಉಳಿದ 15 ಜಿಲ್ಲೆಗಳ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಫೆ.20ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೀದರ್ (ತಾ.ಪಂ), ಬಳ್ಳಾರಿ, ಕಲಬುರಗಿ (ತಾ.ಪಂ),ಯಾದಗಿರಿ, ರಾಯಚೂರು (ತಾ.ಪಂ), ಕೊಪ್ಪಳ ಮತ್ತು ವಿಜಯಪುರ (ತಾ.ಪಂ)ಗಳಿಗೆ ಚುನಾವಣೆ ನಡೆಯಲಿದೆ.

ಅಭ್ಯರ್ಥಿಗಳ ವೆಚ್ಚದ ವಿವರ

ಅಭ್ಯರ್ಥಿಗಳ ವೆಚ್ಚದ ವಿವರ

ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 1 ಲಕ್ಷ ರೂ. ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 50 ಸಾವಿರ ವೆಚ್ಚ ನಿಗದಿಪಡಿಸಲಾಗಿದೆ.

ನೋಟಾ ಮತದಾನ ಮಾಡಬಹುದು

ನೋಟಾ ಮತದಾನ ಮಾಡಬಹುದು

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ನೋಟಾ ಮತ ಚಲಾವಣೆ ಮಾಡಲು ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿಯೇ ಅವಕಾಶ ಕಲ್ಪಿಸಲಾಗಿದೆ.

ಮತಗಟ್ಟೆಗಳ ವಿವರ

ಮತಗಟ್ಟೆಗಳ ವಿವರ

52 ಕೆಎಎಸ್ ಮತ್ತು 15 ಐಎಎಸ್ ಅಧಿಕಾರಿಗಳು ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು 30 ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮತದಾನದಕ್ಕಾಗಿ 36,472 ಮತಗಟ್ಟೆಗಳಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಇವುಗಳಲ್ಲಿ 8,980 ಸೂಕ್ಷ್ಮ ಮತ್ತು 7,162 ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+