ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Oneindia Kannada Impact: ರೈತರ ಸಾಲ ವಸೂಲಿ; ಸಿಎಂಗೆ ದೇಶಪಾಂಡೆ ಪತ್ರ

|
Google Oneindia Kannada News

ಬೆಂಗಳೂರು, ಮೇ 25: ಲಾಕ್‌ಡೌನ್ ಜಾರಿಯಲ್ಲಿರುವಾಗಲೇ ರೈತರ ಸಾಲ ವಸೂಲಿ ಕುರಿತು ಸರ್ಕಾರ ಹೊರಡಿಸಿರುವ ಆದೇಶ ಹಿಂದಕ್ಕೆ ಪಡೆಯುವಂತೆ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅವರು ಸಿಎಂಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಶೂನ್ಯ ಬಡ್ಡಿ ದರದ ಸಾಲ ಮರುಪಾವತಿಗೆ, ಸಾಲ ಪಡೆಯಲು ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್‌ನ್ನು ಆಧಾರವಾಗಿಟ್ಟು ಕೊಳ್ಳಬಾರದು. ಹಿಂದಿನ ನಿಯಮಾವಯಂತೆ ಸಾಲ ಮರುಪಾವತಿ ಹಾಗೂ ಸಾಲ ನೀಡಿಕೆಗೆ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಾಲ ವಸೂಲಿ ಸಂದರ್ಭದಲ್ಲಿ ರಾಜ್ಯ ಸಹಕಾರ ಇಲಾಖೆ ರೈತರಿಗೆ ಕೊಟ್ಟಿದ್ದ ಶೂನ್ಯದರ ಸಾಲಕ್ಕೆ ಬಡ್ಡಿ ವಸೂಲಿ, ಪಡಿತರ ಚೀಟಿ ಖಡ್ಡಾಯ ಸೇರಿದಂತೆ ಹಲವು ನಿಯಮಾವಳಿ ತಿದ್ದುಪಡಿ ಮಾಡಿ ಸುತ್ತೋಲೆ ಹೊರಡಿಸಿರುವ ಬಗ್ಗೆ 'ಒನ್‌ಇಂಡಿಯಾ ಕನ್ನಡ' ಸವಿಸ್ತಾರವಾದ ವರದಿ ಪ್ರಕಟಿಸಿತ್ತು. ಜೊತೆಗೆ ಸರ್ಕಾರದ ನೂತನ ನಿಯಮಗಳಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿತ್ತು. ಇದೀಗ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು "ಒನ್‌ಇಂಡಿಯಾ ಕನ್ನಡ'ದ ವರದಿಗೆ ಸ್ಪಂಧಿಸಿ, ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದ್ಯಾವ ನ್ಯಾಯ ಸ್ವಾಮೀ? ಲಾಕ್‌ಡೌನ್‌ ಇದ್ದರೂ ಸಾಲ ವಸೂಲಿಗೆ ನಿಂತ ಸರ್ಕಾರ!ಇದ್ಯಾವ ನ್ಯಾಯ ಸ್ವಾಮೀ? ಲಾಕ್‌ಡೌನ್‌ ಇದ್ದರೂ ಸಾಲ ವಸೂಲಿಗೆ ನಿಂತ ಸರ್ಕಾರ!

ಕೃಷಿ ಭೂಮಿ ಇದ್ದ ಕ್ಷೇತ್ರದಲ್ಲಿ ವಾಸವಾಗಿರದೆ ಇರುವವರಿಂದ ಶೇ. 7ರಷ್ಟು ಬಡ್ಡಿ ವಸೂಲಿ ಮಾಡುವಂತೆ ಹಾಗೂ ಆ ಕ್ಷೇತ್ರದಲ್ಲಿ ವಾಸವಾಗಿರದೇ ಇರುವವರಿಗೆ ಹೊಸ ಸಾಲ ನೀಡದಂತೆ ಸರ್ಕಾರಿ ಆದೇಶ ನೀಡಲಾಗಿದೆ. ತಕ್ಷಣ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಬೇಕೆಂದು ದೇಶಪಾಂಡೆ ಅವರು ಒತ್ತಾಯಿಸಿದ್ದಾರೆ.

Oneindia Impact RV Deshpande Letter To Yediyurappa Demanding Solving Of Farmers Loan Issue

ಕೃಷಿ ಸಾಲವನ್ನು ಕೃಷಿ ಚಟುವಟಿಕೆಗೆ ನೀಡಲಾಗುತ್ತದೆಯೇ ಹೊರತು ಅವರ ಮನೆಯನ್ನು ಆಧಾರವಾಗಿಟ್ಟುಕೊಂಡು ಸಾಲ ನೀಡುವುದಿಲ್ಲ. ಆದರೆ ಹೊಸ ಆದೇಶದಲ್ಲಿ ಸಾಲ ನೀಡುವಾಗ ಸಹಕಾರ ಸಂಘಗಳು ಆಧಾರ್ ಕಾರ್ಡ್ ವಿಳಾಸವನ್ನು ಪರಿಗಣಿಸಿ ಸಾಲ ನೀಡಬೇಕೆಂದು ಆದೇಶಿಸಲಾಗಿದೆ, ಇದು ರೈತರು ಹಾಗೂ ಸಹಕಾರ ಸಂಘಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗುತ್ತದೆ.

ಕೂಡಲೇ ಸರ್ಕಾರ ಇದಕ್ಕೆ ತಿದ್ದುಪಡಿ ತಂದು ಕೃಷಿ ಚಟುವಟಿಕೆ ನಡೆಸುವ ಪ್ರತಿಯೊಬ್ಬರಿಗೂ ಸಾಲ ನೀಡಲು ಸೂಚಿಸಬೇಕಾಗಿ ಮನವಿ ಮಾಡುತ್ತೇನೆ. ಅಲ್ಲದೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವಾಗ ಪಡಿತರ ಚೀಟಿಯಲ್ಲಿನ ವಿಳಾಸ ಹಾಗೂ ಆಧಾರ್ ಕಾರ್ಡ್ ವಿಳಾಸವನ್ನೇ ಸಾಲ ನೀಡಲು, ಸಾಲ ಮರುಪಾತಿಗೆ ಪ್ರಮುಖ ಆಧಾರವನ್ನಾಗಿ ಪರಿಗಣಿಸಬಾರದು. ಇದನ್ನು ಪುನರ್ ಪರಿಶೀಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ಒತ್ತಾಯಿಸಿದ್ದಾರೆ.

English summary
Former minister RV Deshpande has written a letter to CM Yediyurappa demanding amendments to the government order on the loan issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X