ಈರುಳ್ಳಿ ದರ ಏರಿಕೆ ಖಂಡಿಸಿ ಪ್ರತಿಭಟನೆ; ರಫ್ತು ತಕ್ಷಣದಿಂದ ರದ್ದು

ಬೆಂಗಳೂರು, ಸೆಪ್ಟೆಂಬರ್ 29 : ಈರುಳ್ಳಿ ಬೆಲೆ ಏರಿಕೆಯನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಈರುಳ್ಳಿಯ ರಫ್ತನ್ನು ನಿಷೇಧಿಸಿದೆ.

ಭಾನುವಾರ ಕರ್ನಾಟಕ ಮಹಿಳಾ ಕಾಂಗ್ರೆಸ್‌ನ ಕಾರ್ಯಕರ್ತರು ಈರುಳ್ಳಿ ಬೆಲೆ ದಾಖಲೆ ಏರಿಕೆ ಕಂಡಿರುವುದನ್ನು ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಐಎಂಸಿ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Onion Price Hike Mahila Congress Staged The Protest

ಈರುಳ್ಳಿ ರಫ್ತು ನಿಷೇಧ : ಕೇಂದ್ರ ಸರ್ಕಾರ ಭಾನುವಾರ ಈರುಳ್ಳಿ ಬೆಲೆ ರಫ್ತನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ದೇಶದ ವಿವಿಧ ನಗರದಲ್ಲಿ ಈರುಳ್ಳಿ ಬೆಲೆ ಹೆಚ್ಚಳವಾಗುತ್ತಿದ್ದಂತೆ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೀಟ್ ಮಾಡಿದ್ದು, "ಯಾವುದೇ ರಾಜ್ಯ ಸರ್ಕಾರ ಕೇಂದ್ರದಿಂದ ಈರುಳ್ಳಿ ಖರೀದಿ ಮಾಡಲು ಬಯಸಿದರೆ ಎಷ್ಟು ಬೇಕು ಎಂದು ತಿಳಿಸಬೇಕು. ಎಷ್ಟು ಬೇಕಾದರೂ ಪೂರೈಕೆ ಮಾಡಲು ಸಿದ್ಧ" ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ ಹರ್ಯಾಣ ರಾಜ್ಯಕ್ಕೆ ಶನಿವಾರ 10 ಟ್ರಕ್, ಭಾನುವಾರ 5 ಟ್ರಕ್ ಈರುಳ್ಳಿ ಕಳುಹಿಸಿದೆ. ದೆಹಲಿ ಸರ್ಕಾರ 5 ಟ್ರಕ್ ಈರುಳ್ಳಿಗಾಗಿ ಬೇಡಿಕೆ ಇಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+