ನೂರರ ಗಡಿಯತ್ತ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಕೇಳ್ಳೇಬೇಡಿ
Recommended Video
ಬೆಂಗಳೂರು, ನವೆಂಬರ್ 7: ಈರುಳ್ಳಿ ಬೆಲೆ 65 ರೂಗೆ ಬಂದು ತಲುಪಿದೆ. ಇನ್ನೂ ಒಂದು ವಾರದಲ್ಲಿ 100ರೂ ಗಡಿ ದಾಟಲಿದೆ.
ರಾಜ್ಯದಲ್ಲಿ ಭಾರಿ ಮಳೆಗೆ ಈರುಳ್ಳಿ , ಬೆಳ್ಳುಳ್ಳಿ ಬೆಲೆ ನೆಲಕಚ್ಚಿ ರೈತರು ಸಂಕಷ್ಟದಲ್ಲಿದ್ದರೂ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಆದರೂ ಬೆಂಗಳೂರಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ.
ಒಂದು ತಿಂಗಳ ಹಿಂದಷ್ಟೇ ಈರುಳ್ಳಿ ಬೆಲೆ 80ರವರೆಗೂ ತಲುಪಿತ್ತು, ಬಳಿಕ ಕೇಂದ್ರ ಸರ್ಕಾರವು ವಿದೇಶ ರಫ್ತು ಕಡಿಮೆ ಮಾಡಿದ ಬಳಿಕ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡಿತ್ತು.
ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದಂತೆ ಎಚ್ಚರಗೊಂಡ ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯಲು, ಅಕ್ರಮ ದಾಸ್ತಾನು ಮಾಡದಂತೆ ಹಲವು ಬಿಗಿ ಕ್ರಮ ಕೈಗೊಂಡಿದೆ.
ರಾಷ್ಟ್ರ ರಾಜಧಾನಿಯಲ್ಲಿಈರುಳ್ಳಿ ಬೆಲೆ ಕೆಜಿಗೆ 80 ರೂಪಾಯಿ ತಲುಪುತ್ತಿದ್ದಂತೆಯೇ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಬುಧವಾರ ದೇಶಾದ್ಯಂತ ಬೆಲೆ ಮತ್ತು ಪೂರೈಕೆ ಲಭ್ಯತೆಯನ್ನು ಪರಿಶೀಲಿಸಿದ್ದಾರೆ.
ಕಾರ್ಯದರ್ಶಿ ಗ್ರಾಹಕ ವ್ಯವಹಾರಗಳ ಅವಿನಾಶ್ ಕೆ ಶ್ರೀವಾಸ್ತವ ಮತ್ತು ಆಹಾರ ಇಲಾಖೆ ಕಾರ್ಯದರ್ಶಿ ರವಿ ಕಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಬೆಲೆ ಏರಿಕೆಯನ್ನು ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳ ಜೊತೆಗೆ ಬೆಲೆಗಳ ಹೆಚ್ಚಳಕ್ಕೆ ಕಾರಣಗಳನ್ನು ಹುಡುಕಿದೆ.

ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯ
ಇತ್ತೀಚೆಗೆ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಈರುಳ್ಳಿ ಬೆಲೆ ಬೆಂಗಳೂರಿನಲ್ಲಿ ಮತ್ತೆ ಗಗನಕ್ಕೇರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆ.ಜಿ. ಈರುಳ್ಳಿ 65 ರೂ.ಕ್ಕಿಂತಲೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಎಲ್ಲೆಲ್ಲಿ ಬೆಳೆಗಳಿಗೆ ಹಾನಿ
ದಕ್ಷಿಣ ಭಾರತದ ರಾಜ್ಯಗಳು, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿವೆ. ಕಳೆದ ವರ್ಷವೂ ಅರ್ಧದಷ್ಟು ಮಾತ್ರ ಬೆಳೆ ಬಂದಿತ್ತು.ಈ ಬಾರಿಯೂ ಕೊಯ್ಲಿಗೆ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿಯೂ ಮಳೆಗೆ ಕೊಳೆತು ಹೋಗಿದೆ. ಇದರಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆ ಪ್ರಮಾಣ ಕಡಿಮೆಯಾಗಿದ್ದು, ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬೆಳೆ ಕೊಳೆತಿದ್ದರಿಂದ ರೈತರಿಗೆ ಸಂಕಟ
ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ದೇಶಕ್ಕೆ ಅಗತ್ಯವಿರುವ ಶೇ.50ರಷ್ಟು ಬೆಳ್ಳುಳ್ಳಿ, ಈರುಳ್ಳಿ ಬೆಳೆಯಲಾಗುತ್ತದೆ. ಆದರೆ, ಮಳೆಗೆ ಈರುಳ್ಳಿ, ಬೆಳ್ಳುಳ್ಳಿ ಜಮೀನಿನಲ್ಲೇ ಕೊಳೆತು ಹೋಗಿದೆ. ಬೆಲೆ ಏರಿಕೆಯಿದ್ದರೂ ಬೆಳೆದ ರೈತರಿಗೆ ಮಾತ್ರ ಲಾಭ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಬೆಳ್ಳುಳ್ಳಿಗೂ ಇದೇ ಪರಿಸ್ಥಿತಿ
ಈರುಳ್ಳಿಯ ಪರಿಸ್ಥಿತಿ ಬೆಳ್ಳುಳ್ಳಿಗೂ ಬಂದಿದೆ. ತಿಂಗಳ ಹಿಂದಷ್ಟೇ ಕೆ.ಜಿಗೆ 100 ರಿಂದ 120 ರೂ. ಆಸುಪಾಸಿನಲ್ಲಿದ್ದ ಬೆಳ್ಳುಳ್ಳಿ ಬೆಲೆಯು ನೆರೆ, ಪ್ರವಾಹದಿಂದ ಹಾನಿಯ ಹಿನ್ನೆಲೆ ದುಪ್ಪಟ್ಟಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿಗೆ 200ರೂ.ನಿಂದ 220 ರೂ.ವರೆಗೆ ಮಾರಾಟವಾಗುತ್ತಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications