ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಟಿಇ ಸೀಟು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

|
Google Oneindia Kannada News

ಬೆಂಗಳೂರು, ನ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿನ ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆರ್‌ಟಿಇ ಅಡಿ ಮಕ್ಕಳ ದಾಖಲಾತಿಗೆ ವೇಳಾಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ.

ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ ಶೇ 25ರಷ್ಟು ಮೀಸಲಾತಿ ಕೋಟಾದ ಅಡಿಯಲ್ಲಿ ಮಕ್ಕಳ ದಾಖಲಾತಿಗೆ ನಿಗದಿ ಪಡಿಸಿರುವ ವೇಳಾಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದ್ದು, ಡಿ.10ರಂದು ಶಾಲೆಗಳ ಅಂತಿಮ ಪಟ್ಟಿ ಬಿಡುಗಡೆಯಾಗಲಿವೆ. [ಅಲ್ಪಸಂಖ್ಯಾತ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಸೀಟು]

RTE

2015-16ನೇ ಸಾಲಿಗೆ ಒಂದನೇ ಅಥವಾ ಪೂರ್ವ ಪ್ರಾಥಮಿಕ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ನಿಗದಿ ಪಡಿಸಿರುವ ಅರ್ಜಿ ನಮೂನೆ, ಚೆಕ್‌ ಲಿಸ್ಟ್‌ ಹಾಗೂ ಸಲ್ಲಿಸಬೇಕಾದ ದಾಖಲೆಗಳ ನಮೂನೆಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ www. schooleducation.kar.nic.in ಪ್ರಕಟಿಸಲಾಗುತ್ತದೆ.

ಜ.12ರಂದು ಅನುದಾನ ರಹಿತ ಶಾಲೆಗಳಲ್ಲಿ ಲಭ್ಯವಿರುವ ಶೇ 25ರಷ್ಟು ಸೀಟುಗಳ ಪ್ರಕಟಣೆ ಹೊರಬೀಳಲಿದೆ. ಜ.13 ಮತ್ತು 14ರಂದು ಪೋಷಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಫೆ.19ರಂದು ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಶಿಕ್ಷಣ ಇಲಾಖೆ ವೇಳಾಪಟ್ಟಿ
* ಡಿ.10 ಶಾಲೆಗಳ ಪಟ್ಟಿ ಬಿಡುಗಡೆ
* ಜ.12 ಅನುದಾನ ರಹಿತ ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಪ್ರಕಟಣೆ
* ಜ.13, 14 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ
* ಜ.16ರಿಂದ ಫೆ.16 ತನಕ ದಾಖಲೆಗಳ ಪರಿಶೀಲನೆ
* ಫೆ.19 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
* ಫೆ.20 ರಿಂದ 23 ಆಕ್ಷೇಪಣೆ ಸಲ್ಲಿಸಲು ಅವಕಾಶ
* ಫೆ.24 ಆನ್‌ಲೈನ್ ಮೂಲಕ ಆಯ್ಕೆಯಾದ ಮಕ್ಕಳ ಪಟ್ಟಿ ಪ್ರಕಟ
* ಫೆ.28ರಿಂದ ಮಾ.4 ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆ
* ಮಾ.7 ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
* ಮಾ.10 ಶಾಲೆಗಳಲ್ಲಿ ದಾಖಲಾತಿ ಆರಂಭ

English summary
Karnataka Education Department released the time table for applying seats under Right to Education Act (RTE). Parents will apply for RTE seat through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X