ಕೆಪಿಸಿಎಲ್‌ನಲ್ಲಿ 359 ಹುದ್ದೆಗಳು ಖಾಲಿ ಇವೆ
ಬೆಂಗಳೂರು, ಡಿ.2 : ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅರ್ಹ ಅಭ್ಯರ್ಥಿಗಳಿಂದ ಹೈದರಾಬಾದ್-ಕರ್ನಾಟಕ, ಇತರ ಪ್ರದೇಶಗಳ ಅಭ್ಯರ್ಥಿಗಳಿಂದ 359 ಹುದ್ದೆಗಳ ಭರ್ತಿಯಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 22.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ, ಖುದ್ದಾಗಿ ಅಥವ ಕೋರಿಯರ್ ಮೂಲಕ ಅರ್ಜಿಯನ್ನು ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ - 1ರ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ. ಡಿಸೆಂಬರ್ 22ರ ಸಂಜೆ 5ಗಂಟೆಯವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. [ಇಂಗ್ಲಿಶ್ ನಲ್ಲಿ ಓದಿ]
ಖಾಲಿ ಇರುವ ಹುದ್ದೆಗಳು : ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 37, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) 76, ಅಸಿಸ್ಟೆಂಟ್ ಇಂಜಿನಿಯರ್ (ಮೆಕಾನಿಕಲ್) 63, ಅಸಿಸ್ಟೆಂಟ್ ಇಂಜಿನಿಯರ್ (ಇನ್‌ಸ್ಟ್ರುಮೆಂಟೇಷನ್) 21, ಅಸಿಸ್ಟೆಂಟ್ ಇಂಜಿನಿಯರ್ (ಸಿಸ್ಟಮ್) 8, ಜೂನಿಯರ್ ಇಂಜಿನಿಯರ್ (ಸಿವಿಲ್) 9, ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) 34, ಜೂನಿಯರ್ ಇಂಜಿನಿಯರ್ (ಮೆಕಾನಿಕಲ್) 45, ಕೆಮಿಸ್ಟ್ 27, ಕೆಮಿಕಲ್ ಸೂಪರ್ ವೈಸರ್ 39 ಸೇರಿ ಒಟ್ಟು 359 ಹುದ್ದೆಗಳು ಖಾಲಿ ಇವೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ಮಾಹಿತಿಗಳನ್ನು http://karnatakapower.com/recruit.asp ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.












Click it and Unblock the Notifications