ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಬೆಂಗಳೂರು, ಏ. 7 : ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನಾಂಕ ಮೇ.5, 2015.

ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ ಮತ್ತು ಬೆಳಗಾವಿ ವಿಭಾಗಗಳಲ್ಲಿನ ಸರ್ಕಾರಿ ಪ್ರೌಢಶಾಲೆಗಳು, ಆಂಗ್ಲ ಮಾಧ್ಯಮದ ಆದರ್ಶ ವಿದ್ಯಾಲಯಗಳು ಮತ್ತು ಆರ್.ಎಂ.ಎಸ್‌.ಎ ಅಡಿಯಲ್ಲಿ ಉನ್ನತೀಕರಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್ -2, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ - 1 ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

Online applications

ಸಹ ಶಿಕ್ಷಕರು ಗ್ರೇಡ್ -2 ವೃಂದದ ಭಾಷೆಗಳು ಕಲಾ, ಭೌತ ವಿಜ್ಞಾನ, ಜೀವವಿಜ್ಞಾನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ -1ರಲ್ಲಿ ಖಾಲಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯಾ ವಿಭಾಗೀಯ ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. [ವೆಬ್ ಸೈಟ್ ವಿಳಾಸ]

ಬೆಂಗಳೂರು ವಿಭಾಗದಲ್ಲಿ 534, ಮೈಸೂರು ವಿಭಾಗದಲ್ಲಿ 361, ಬೆಳಗಾವಿ ವಿಭಾಗದಲ್ಲಿ 261, ಕಲಬುರಗಿ ವಿಭಾಗದಲ್ಲಿ 571 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು 13/6/2015 ರಿಂದ 15/6/2015 ವರೆಗೆ ಆಯಾ ವಿಭಾಗೀಯ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುತ್ತದೆ.

ಅರ್ಹ ಅಭ್ಯರ್ಥಿಗಳು www.schooleducation.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಏ.6ರಿಂದ ಮೇ.5ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಶುಲ್ಕಗಳನ್ನು ಪಾವತಿಸಲು ಮೇ.6 ಕೊನೆಯ ದಿನಾಂಕ. ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಲು ಕೊನೆಯ ದಿನಾಂಕ ಮೇ.7,2015.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+