• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆನ್‌ಲೈನ್‌ ತರಗತಿ ಕುರಿತು ಸುರೇಶ್ ಕುಮಾರ್ ಮಹತ್ವದ ಸೂಚನೆ!

|

ಬೆಂಗಳೂರು, ಅ. 21: ರಾಜ್ಯ ಶಿಕ್ಷಣ ಇಲಾಖೆಯ ಮಹಾತ್ವಾಕಾಂಕ್ಷಿ ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದೆ. ವಿದ್ಯಾಗಮದಿಂದ ಕೊರೊನಾ ವೈರಸ್‌ ಹರಡುವುದು ಹೆಚ್ಚಾಗುತ್ತದೆ ಎಂದು ಆರೋಪಿಸಿ ಒತ್ತಡ ಹಾಕಿದ್ದರಿಂದ ಸರ್ಕಾರ ತಾತ್ಕಾಲಿಕವಾಗಿ ಕಾರ್ಯಕ್ರಮ ಸ್ಥಗಿತಗೊಳಿಸಿದೆ. ಇದೀಗ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಗಮ ಸ್ಥಗಿತಗೊಂಡಿರುವ ಬೆನ್ನಲ್ಲಿಯೇ ಖಾಸಗಿ ಶಾಲೆಗಳಲ್ಲಿ ಆನ್‌ಲೈನ್ ತರಗತಿಗಳು ಭರ್ಜರಿಯಾಗಿ ಮುಂದುವರೆದಿವೆ.

ಆದರೆ ಆನ್‌ಲೈನ್ ತರಗತಿಗಳಿಂದ ಮಕ್ಕಳ ಆರೋಗ್ಯ ಮೇಲೆ ಆಗುತ್ತಿರುವ ಪರಿಣಾಮ ನಿಧಾನವಾಗಿ ಹೆಚ್ಚಾಗುತ್ತಿದೆ. ಇದು ಶಿಕ್ಷಣ ಇಲಾಖೆಯ ಗಮನಕ್ಕೂ ಬಂದಿದೆ. ಹೀಗಾಗಿ ಆನ್‌ಲೈನ್ ಶಿಕ್ಷಣದ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಹತ್ವದ ಆದೇಶ ಮಾಡಿದ್ದಾರೆ.

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ

ವಿದ್ಯಾಗಮ ಕಾರ್ಯಕ್ರಮದಿಂದ ರಾಜ್ಯದಲ್ಲಿ ಸರ್ಕಾರಿ ಮಕ್ಕಳ ವಿದ್ಯಾಭ್ಯಾಸ ಸುಸೂತ್ರವಾಗಿ ನಡೆದಿತ್ತು. ಆದರೆ ಅದರಿಂದಾಗಿಯೇ ಕೊರೊನಾ ವೈರಸ್ ಹರಡುತ್ತಿದೆ ಎಂದು ಆರೋಪಿಸಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದರಿಂದ, ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ವಿದ್ಯಾಗಮ ಇದೀಗ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

ಖಾಸಗಿ ಶಾಲೆಗಳ ಆನ್‌ಲೈನ್‌ ತರಗತಿಗಳು

ಖಾಸಗಿ ಶಾಲೆಗಳ ಆನ್‌ಲೈನ್‌ ತರಗತಿಗಳು

ವಿದ್ಯಾಗಮ ಸ್ಥಗಿತವಾಗಿದ್ದರೂ, ಖಾಸಗಿ ಶಾಲಾ ಮಕ್ಕಳ ವಿದ್ಯಾಭ್ಯಾಸ ಸುಸೂತ್ರವಾಗಿ ನಡೆಯುತ್ತಿದೆ ಎಂಬ ಸಮಾಧಾನವಿತ್ತು. ಆದರೆ ವಿದ್ಯಾಗಮ ಕಾರ್ಯಕ್ರಮಕ್ಕಿಂತ ದೊಡ್ಡ ಸಮಸ್ಯೆ ಇದೀಗ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ತರಗತಿಗಳಿಂದ ಶುರುವಾಗಿದೆ. ಮಕ್ಕಳ ಆರೋಗ್ಯದ ಮೇಲೆ ಆನ್‌ಲೈನ್‌ ತರಗತಿಗಳು ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಅಂಶ ಇದೀಗ ಪಾಲಕರಿಂದಲೇ ಬಹಿರಂಗವಾಗಿದೆ.

ಮಕ್ಕಳ ಆರೋಗ್ಯದ ಮೇಲೆ ದುಷ್ಟಪರಿಣಾಮ

ಮಕ್ಕಳ ಆರೋಗ್ಯದ ಮೇಲೆ ದುಷ್ಟಪರಿಣಾಮ

ಮಕ್ಕಳ ಮೇಲೆ ಆನ್‌ಲೈನ್ ತರಗತಿಗಳು ತೀವ್ರ ಪರಿಣಾಮವನ್ನುಂಟು ಮಾಡಿವೆ. ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಆನ್‌ಲೈನ್ ಶಿಕ್ಷಣ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ವರದಿಯಾಗಿವೆ. ಹೀಗಾಗಿ ಈ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಹತ್ವದ ಆದೇಶ ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮಹತ್ವದ ಸೂಚನೆ ಕೊಟ್ಟಿದ್ದಾರೆ.

  ಇದನ್ನು ಬಳಸಿ corona ಇಂದ ದೂರ ಇರಿ | Oneindia Kannada
  ಶಿಕ್ಷಣ ಸಚಿವರ ಮಹತ್ವದ ಆದೇಶ

  ಶಿಕ್ಷಣ ಸಚಿವರ ಮಹತ್ವದ ಆದೇಶ

  ರಾಜ್ಯದಲ್ಲಿ ನಡೆಯುತ್ತಿರುವ ಆನ್‌ಲೈನ್‌ ಶಿಕ್ಷಣದಿಂದ ವಿದ್ಯಾರ್ಥಿಗಳ ಕಣ್ಣಿಗೆ ಹೆಚ್ಚಾಗಿ ತೊಂದರೆ ಆಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುತ್ತದೆ. ಆನ್‌ಲೈನ್ ಶಿಕ್ಷಣ ಮಾರ್ಗದರ್ಶಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ಧಪಡಿಸಲಾಗಿದೆ. ಸದರಿ ಮಾರ್ಗದರ್ಶಿ ಹಾಗೂ ವರದಿ ಆಧಾರದ ಮೇರೆಗೆ ರಾಜ್ಯದ ಎಲ್ಲಾ ಶಾಲೆಗಳು ಆನ್‌ಲೈನ್‌ ಶಿಕ್ಷಣ ನಡೆಸುವಂತೆ ವಿವರವಾದ ಸುತ್ತೋಲೆಯನ್ನು ಇಂದೇ ಹೊರಡಿಸಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಇಲಾಖಾ ಆಯುಕ್ತರಿಗೆ ಸೂಚಿಸಿದ್ದಾರೆ.

  English summary
  There are reports in the media that online education in the state is causing much trouble to the eyes of the students. The online education guide is prepared based on the reports and suggestions given by experts. The Minister of Education, S Nair, said today that all schools in the state should issue a detailed circular based on this guidance and report. Know more,
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X