ಆನ್‌ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಗೊಳಿಸಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶ ರದ್ದು
ಬೆಂಗಳೂರು, ಫೆ.14: ರಾಜ್ಯದಲ್ಲಿ ಎಲ್ಲ ಬಗೆಯ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸಿ ಕರ್ನಾಟಕ ಸರ್ಕಾರವು ಹೊರ ತಂದಿದ್ದ ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.
ತಿದ್ದುಪಡಿ ಸಂವಿಧಾನಬಾಹಿರವೆಂದು ಸಾರಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಆದೇಶಿಸಿದೆ.
ಅಲ್ಲದೆ, ಸದ್ಯಕ್ಕೆ ಸರ್ಕಾರ ಆನ್ ಲೈನ್ ಗೇಮ್ಸ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಮತ್ತಿತರ ಕಂಪನಿಗಳು ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಶೇಷ ವಿಭಾಗೀಯ ಪೀಠ ಸೋಮವಾರ ತೀರ್ಪು ಪ್ರಕಟಿಸಿತು.

120 ಪುಟಗಳ ತೀರ್ಪಿನಲ್ಲಿ ವಿಭಾಗೀಯಪೀಠ, ಅರ್ಜಿಗಳನ್ನು ಪುರಸ್ಕರಿಸಿ 2021ರಲ್ಲಿ ಸರ್ಕಾರ ಪೊಲೀಸ್ ಕಾಯಿದೆಗೆ ಮಾಡಿದ್ದ ಸಂಪೂರ್ಣ ತಿದ್ದುಪಡಿಯನ್ನು ರದ್ದುಪಡಿಸಿಲ್ಲ. ಆದರೆ ಆನ್ ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದ ನಿಯಮಗಳನ್ನು ಸಂವಿಧಾನಬಾಹಿರ ಮತ್ತು ನಿಯಮ ಬದ್ಧವಾಗಿಲ್ಲವೆಂದು ಸಾರಿದೆ.
ಬೆಟ್ಟಿಂಗ್ ಬಾಜಿಗೆ ಸಮ:
ಸರಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ,'' ಎಂದು ವಾದಿಸಿದ್ದರು.
''ಬಾಜಿ ಅಥವಾ ಬೆಟ್ಟಿಂಗ್ ಅನ್ನು ಸರಳ ಭಾಷೆಯಲ್ಲಿ ಹೇಳುವುದಾದರೆ ಒಬ್ಬರಿಂದ ಹಣ ಸಂಗ್ರಹಿಸಿ, ಹಣದ ರೂಪದಲ್ಲಿ ಬಹುಮಾನದ ಮೊತ್ತ ಹಂಚಿಕೆ ಮಾಡುವುದಾಗಿದೆ. ಮುಂದೆ ಹೊರ ಹೊಮ್ಮಬಹುದಾದ ಫಲಿತಾಂಶದ ಬಗ್ಗೆ ತಿಳಿಯದೇ ತಮ್ಮ ಹಣ ಅಥವಾ ಇನ್ಯಾವುದಾದರ ಮೇಲೆ ರಿಸ್ಕ್ ತೆಗೆದುಕೊಳ್ಳುವುದು ಬಾಜಿ ಅಥವಾ ಬೆಟ್ಟಿಂಗ್‌ಗೆ ಸಮನಾಗುತ್ತದೆ. ಗೊತ್ತಿಲ್ಲದ ಫಲಿತಾಂಶವು ಆಯ್ಕೆಯ ಆಟ ಅಥವಾ ಕೌಶಲದ ಆಟವಾಗಿರಬಹುದು,'' ಎಂದು ಹೇಳಿದ್ದರು.
ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಉದಾಹರಿಸಿದ ಎಜಿ ನಾವದಗಿ ಅವರು ''ಭಾರತ ವರ್ಸಸ್ ಪಾಕಿಸ್ತಾನ ಆಟವಾಡುತ್ತಿದ್ದರೆ ಅದು ಕೌಶಲ್ಯದ ಆಟ. ಸದರಿ ಆಟದ ಫಲಿತಾಂಶ ತಿಳಿಯದಿರುವಾಗ ಹಲವರಿಂದ ಬೆಟ್ಟಿಂಗ್ ಹಣವನ್ನು ನಾನು ಸಂಗ್ರಹಿಸುತ್ತೇನೆ. ಅದು ಕೌಶಲ್ಯದ ಆಟವಾಗಿರಬಹುದು,'' ಎಂದು ನಾವದಗಿ ಹೇಳಿದರು.
ಕಾಯಿದೆಯನ್ನು ಪ್ರಶ್ನಿಸಿರುವ ಯಾವುದೇ ಅರ್ಜಿದಾರರ ವಿರುದ್ಧ ದೂರು ದಾಖಲಿಸಲಾಗಿಲ್ಲ ಎಂದ ನಾವದಗಿ ಅವರು ತಡೆಯಾಜ್ಞೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.
ಸರ್ಕಾರಕ್ಕೆ ಅಧಿಕಾರವಿಲ್ಲ:
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ ''ಆನ್ ಲೈನ್ ಗೇಮ್‌ಗಳನ್ನು ನಿಷೇಧಸಲು ಸರ್ಕಾರಕ್ಕೆ ಅಧಿಕಾರವಿಲ್ಲ. ಗೇಮ್ಸ್‌ಗೂ ಸ್ಕಿಲ್ ಗೂ ವ್ಯತ್ಯಾಸವಿದೆ. ಆದರೆ ಸರ್ಕಾರ ತಪ್ಪಾಗಿ ಅರ್ಥಿಸಿಕೊಂಡು ನಿಷೇಧಿಸಿದೆ. ಈ ಕಾನೂನಿನಿಂದ ನಮ್ಮ ರಾಜ್ಯವು ಆದಾಯ, ಉದ್ಯೋಗ ನಷ್ಟ ಅನುಭವಿಸಲಿದೆ. ರಾಜ್ಯ ಸರ್ಕಾರದ ಕಾಯಿದೆಯು 19(1)(g) ಅಡಿ ನಮ್ಮ ಹಕ್ಕುಗಳನ್ನು ಕಸಿಯಲಿದೆ. ಇದು ಸ್ವೇಚ್ಛೆಯಿಂದ ಕೂಡಿದ್ದು, ಅರ್ಥಹೀನವಾಗಿದೆ'' ಎಂದು ವಿರೋಧ ದಾಖಲಿಸಿದರು.
ಈಗಾಗಲೇ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಪರ ಹಿರಿಯ ವಕೀಲರಾದ ಆರ್ಯನ್ ಸುಂದರಂ, ಮುಕುಲ್ ರೋಹಟಗಿ, ಸಜ್ಜನ್ ಪೂವಯ್ಯ , ಡಿಎಲ್ಎನ್ ರಾವ್ ಸೇರಿದಂತೆ ಹಲವರು ಪ್ರಬಲ ವಾದ ಮಂಡಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications