ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳು ಮಾತ್ರ ಸ್ಪರ್ಧೆ, ಯಾಕೆ?

|
Google Oneindia Kannada News

ಬೆಂಗಳೂರು, ಮಾ. 16: ಆರು ತಿಂಗಳುಗಳಲ್ಲಿ ಮತ್ತೊಂದು ಉಪ ಚುನಾವಣೆ ರಾಜ್ಯದ ರಾಜಕೀಯ ಪಕ್ಷಗಳಿಗೆ ಎದುರಾಗಿದೆ. ಇದೇ ಸಂದರ್ಭದಲ್ಲಿ ಚುನಾವಣೆಯಲ್ಲಿ ಗೆಲವು ಸಾಧಿಸುವ ವಿಶ್ವಾಸವನ್ನು ಎರಡೂ ಪಕ್ಷಗಳ ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ಕುತೂಹಲ ಮೂಡಿಸಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಎರಡು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮಾತ್ರ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಮತ್ತೊಂದು ಕುತೂಹಲಕಾರಿ ವಿಚಾರ.

ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಅದೇ ರೀತಿ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರು ಅಕಾಲಿಕ ನಿಧನಕ್ಕೆ ತುತ್ತಾಗಿದ್ದರಿಂದ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

Only Congress and BJP candidates are contesting in by election

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

ಪ್ರತಾಪಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಬಂದಿದೆ. ಈ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ರಾಜ್ಯ ಬಿಜೆಪಿ ಸರ್ಕಾರ ಅಥವಾ ಕೇಂದ್ರದಲ್ಲಿನ ಮೋದಿ ನೇತೃತ್ವದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಆದರೆ ತಮ್ಮ ವರ್ಚಸ್ಸು ಕಡಿಮೆಯಾಗಿಲ್ಲ ಎಂಬುದನ್ನು ಸಾಬೀತು ಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿಯಿದೆ. ಹೀಗಾಗಿ ಉಪ ಸಮರ ರಂಗೇರಲಿದೆ.

Only Congress and BJP candidates are contesting in by election

Recommended Video

ಸಿಡಿ ಪ್ರಕರಣದ ಕಿಂಗ್‌ಪಿನ್‌ ಜೊತೆ ಡಿಕೆಶಿ ಇರುವ ಫೋಟೋ ಶೇರ್‌ ಮಾಡಿದ ಬಿಜೆಪಿ! | Oneindia Kannada

ಜೆಡಿಎಸ್ ಈಗಾಗಲೇ ಉಪ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಸ್ಷಷ್ಟಪಡಿಸಿದೆ. ಹೀಗಾಗಿ ಎರಡು ರಾಜಕೀಯ ಪಕ್ಷಗಳ ಮಧ್ಯೆ ನೇರ ಹಣಾಹಣಿ ಏರ್ಪಡಲಿದೆ.

English summary
Central Election Commission announces by-election for three constituencies. Only Congress and BJP candidates are contesting in by election Read more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X