ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್, ಬೇರೆ ಯಾರೂ ಅಲ್ಲ: ಸಿಎಂ
ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬೇರೆ ಯಾರೂ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1925ರಲ್ಲೇ ಆರ್‌ಎಸ್‌ಎಸ್ ಸ್ಥಾಪನೆಯಾಗಿತ್ತು. ಆಗ ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿತ್ತು. ಕೆ.ಬಿ.ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರ್.ಎಸ್.ಎಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ ಎಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಸಾವರ್ಕರ್ ಮತ್ತು ಹಿಂದೂ ಮಹಾಸಭಾದ ಅಧ್ಯಕ್ಷ ಗೋಲ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು, ಚತುರ್ವರ್ಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ ಎಂದಿದ್ದಾರೆ. ಬಿಜೆಪಿಯವರು ನೆಹರೂ ಅವರನ್ನ ಟೀಕಿಸುತ್ತಾರೆ. ಆದರೆ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರಬೋಸ್ ಸೇರಿ ಅನೇಕರ ಜೊತೆಗೂಡಿ ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ, ಅದು ಅವರ ಹೋರಾಟದ ಫಲ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದು ಬಿಜೆಪಿಯವರ ಢೋಂಗಿತನ ಎಂದಿದ್ದಾರೆ.

ಇಂದಿರಾ ಗಾಂಧಿಯವರು ದೇಶಕ್ಕಾಗಿ ಹುತಾತ್ಮರಾದರು. ಆದರೆ ಅವರ ಆದರ್ಶಗಳು ನಮ್ಮೊಂದಿಗೆ ಇವೆ. ಅವುಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಬಾಂಗ್ಲಾದೇಶದ ವಿಮೋಚನಾ ಸಂದರ್ಭದಲ್ಲಿ ವಾಜಪೇಯಿಯವರು ದುರ್ಗೆಯೆಂದು ಇಂದಿರಾ ಅವರನ್ನು ಕರೆದಿದ್ದರು. ಪಾಕಿಸ್ತಾನವನ್ನು ಸದೆಬಡೆದು ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಈ ಯುದ್ಧದಲ್ಲಿ ಸುಮಾರು 90 ಸಾವಿರ ಪಾಕಿಸ್ತಾನ ಸೈನಿಕರು ಸೆರೆಯಾಗಿದ್ದರು. ಇಂದಿರಾ ಗಾಂಧಿಯವರ ದಿಟ್ಟತನಕ್ಕೆ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತಿತ್ತು ಎಂದು ನೆನೆದಿದ್ದಾರೆ.
ಇಂದಿರಾ ಗಾಂಧಿ ಧೀಮಂತ ನಾಯಕಿ. ದೀರ್ಘ ಕಾಲದವರೆಗೆ ದೇಶವನ್ನಾಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅವಧಿಯಲ್ಲಿ ಬಡತನ ನಿರ್ಮೂಲನೆಗೊಳಿಸುವ 'ಗರೀಬಿ ಹಠಾವೋ' ಘೋಷಣೆ ಮಾಡಿದ್ದರು. ಭಾರತದಲ್ಲಿ ಅಸಮಾನತೆ ಇದೆ. ಇಂದಿರಾಗಾಂಧಿಯವರ ಕಾಲಘಟ್ಟದಲ್ಲಿ ಬಡವರ ಸಂಖ್ಯೆ ಹೆಚ್ಚಿತ್ತು. ಆದ್ದರಿಂದ ಬಡತನ ಹೋಗಲಾಡಿಸಲು 20 ಅಂಶಗಳ ಕಾರ್ಯಕ್ರಮವನ್ನು ಅವರು ಜಾರಿಗೆ ತಂದರು ಎಂದು ಶ್ಲಾಘಿಸಿದ್ದಾರೆ.
ಬಸವಣ್ಣನ ಹಾದಿಯಲ್ಲಿ ಇಂದಿರಾಗಾಂಧಿ
ನಮ್ಮ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕು ನೀಡಿದೆ. ಜಾತಿ ವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದ್ದು, ಬಹುಸಂಖ್ಯಾತ ಜನರು, ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮೇಲ್ವರ್ಗದ ಹೆಣ್ಣುಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗಿದ್ದರು. ಸಮಸಮಾಜ ಪರಿಕಲ್ಪನೆಗೆ ಜೀವತುಂಬಿದ್ದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು. ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣವರ ಫೋಟೋವನ್ನು ಅಳವಡಿಸಲು ಆದೇಶ ನೀಡಿದೆ. ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆಯುವ ಪ್ರಯತ್ನವನ್ನು ಮಾಡಿದ್ದರು ಎಂದಿದ್ದಾರೆ.
ವಲ್ಲಭಭಾಯಿ ಪಟೇಲರು ದೇಶದ ಉಪ ಪ್ರಧಾನಿಗಳಾಗಿದ್ದರು. ಅಲ್ಲದೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಅಗ್ರಗಣ್ಯರು. ಸ್ವಾತಂತ್ರ್ಯ ಗಳಿಸಿದಾಗ ದೇಶದಲ್ಲಿ 562 ಸಂಸ್ಥಾನಗಳನ್ನು ಭಾರತಕ್ಕೆ ಸೇರಿಸಲು ಆಗ ಗೃಹ ಸಚಿವರಾಗಿದ್ದ ಪಟೇಲರ ಪ್ರಯತ್ನವೇ ಕಾರಣ. ಅದಕ್ಕಾಗಿಯೇ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯುತ್ತೇವೆ. ಅವರ 150ನೇ ಜನ್ಮದಿನದಂದು ಗೌರವದಿಂದ ಸ್ಮರಿಸುತ್ತೇನೆ ಎಂದು ಸಿದ್ದರಾಮಯ್ಯ ನೆನೆದಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications