Dk Shivakumar: ʻಡಿಕೆಶಿಗೆ ಸಿಎಂ ಹುದ್ದೆ ಕಿತ್ತುಕೊಳ್ಳುವುದೇ ಉಳಿದಿರುವ ಆಯ್ಕೆʼ
Dk Shivakumar: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಭಾರೀ ಚರ್ಚೆಗಳು ನಡೆದಿವೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿದೆ. ಇದರ ನಡುವೆ ರಾಜ್ಯ ಸರ್ಕಾರದ ಘಟಾನುಘಟಿ ನಾಯಕರು, ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ಭಾರೀ ದೊಡ್ಡ ಮಟ್ಟದ ಸರ್ಕಸ್‌ಗಳು ನಡೆದಿದ್ದವು. ಆದರೆ, ಈ ಪೈಪೋಟಿಯಲ್ಲಿ ಸಿದ್ದರಾಮಯ್ಯ ಅವರು ಗೆದ್ದಿದ್ದರು. ಇದಾದ ಮೇಲೆ ಅಧಿಕಾರ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆದಿವೆ.
ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ಬಿಜೆಪಿ ಸಹ ಡಿ.ಕೆ ಶಿವಕುಮಾರ್ ಅವರ ಕಾಲೆಳೆದಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ತಿಂಗಳ ಕಲೆಕ್ಷನ್ ಚೆನ್ನಾಗಿ ಮಾಡಿಕೊಟ್ಟ ಸಿದ್ದರಾಮಯ್ಯ ಅವರು ಸಿಎಂ ಗದ್ದುಗೆಯಲ್ಲಿ ಮುಂದುವರಿಯಲು ತಯಾರಿ ನಡೆಸಿದ್ದಾರೆ. ತಾವೇ ಪೂರ್ಣವಧಿ ಸಿಎಂ, ತಮ್ಮ ನೇತೃತ್ವದಲ್ಲಿಯೇ ಮುಂದಿನ ಚುನಾವಣೆಯೂ ನಡೆಯುತ್ತದೆ ಎಂದು ಆಪ್ತ ಸಚಿವರ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದೆ.

ಡಿ.ಕೆ ಶಿವಕುಮಾರ್ ಹೇಳಿಕೆ ಕೋಟ್ ಮಾಡಿ ವ್ಯಂಗ್ಯ: ಇನ್ನು ಬಿಜೆಪಿಯು ಈ ಹಿಂದೆ ಡಿ.ಕೆ ಶಿವಕುಮಾರ್ ಅವರು ಹೇಳಿದ್ದ ಕೋಟ್ ಅನ್ನೇ ಉಲ್ಲೇಖ ಮಾಡಿ ಡಿ.ಕೆ ಶಿವಕುಮಾರ್ ಅವರ ಕಾಲೆಳೆದಿದೆ. ಕೆಲವು ದಿನಗಳ ಹಿಂದೆ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಬೇಕಾದರೆ ಒದ್ದು ಕಿತ್ಕೋಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ಹೇಳಿಕೆಯನ್ನು ಉಲ್ಲೇಖ ಮಾಡಿ ಕಾಲೆಳೆಯಲಾಗಿದೆ.
ಸಿಎಂ ಹುದ್ದೆಯ ಕನಸನ್ನು ಕಾಣುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಈಗ ಅದೊಂದು ತಿರುಕನ ಕನಸಿನಂತಾಗಿದೆ. ಡಿಕೆಶಿ ಅವರ ತಾಯಿ ತಮ್ಮ ಮಗನ ಕುರಿತಾಗಿ ಅಂದು ಹೇಳಿದ ಭವಿಷ್ಯ ನಿಜವಾಗುತ್ತಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ ಡಿಕೆಶಿಗೆ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರ ಮೂಲಕ ಮತ್ತೊಂದು ಚೆಕ್‌ಮೇಟ್ ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಗೂ ಸಹ ಡೈನಾಮೇಟ್ ಇಟ್ಟು ಡಿಕೆಶಿಯನ್ನು ನಿರಾಶ್ರಿತರನ್ನಾಗಿ ಮಾಡಲು ತಯಾರಿ ನಡೆಸಿದ್ದಾರೆ ಎಂದು ವ್ಯಂಗ್ಯವಾಡಿದೆ.

ವಲಸಿಗರ ಹಾವಳಿಯಿಂದ ಪಕ್ಷದಲ್ಲಿ ದಿನೇ ದಿನೇ ಮೂಲೆಗುಂಪು ಆಗುತ್ತಿರುವ ಡಿಕೆಶಿಗೆ ಸಿಎಂ ಹುದ್ದೆಯನ್ನು "ಕಿತ್ತು ಪಡೆದುಕೊಳ್ಳುವುದೇ" ಈಗ ಉಳಿದಿರುವ ಏಕೈಕ ದಾರಿಯಾಗಿದೆ ಎಂದು ಬಿಜೆಪಿ ಹೇಳಿದೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಆದರೆ, ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನವೂ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. ಈಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರು ನೀಡಿರುವ ಹೇಳಿಕೆ ಇನ್ನಷ್ಟು ಗೊಂದಲಕ್ಕೆ ಕಾರಣವಾಗಿದೆ.












Click it and Unblock the Notifications