ಕುಟುಂಬ ರಾಜಕಾರಣ: 3 ಕಾಂಗ್ರೆಸ್ ನಾಯಕರ ಮಕ್ಕಳಿಗೆ ಮಾತ್ರ ಟಿಕೆಟ್!

Posted By: ವಿಕಾಸ್ ನಂಜಪ್ಪ
Subscribe to Oneindia Kannada
   Karnataka Elections 2018 : ಕುಟುಂಬ ರಾಜಕಾರಣ : ಕೇವಲ 3 ಕಾಂಗ್ರೆಸ್ ನಾಯಕರ ಮಕ್ಕಳಿಗೆ ಟಿಕೆಟ್ |Oneindia Kannada

   ಬೆಂಗಳೂರು, ಏಪ್ರಿಲ್ 12: ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಯಾವುದೇ ಕ್ಷಣದಲ್ಲಾದರೂ ಹೊರ ಬೀಳಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಕಾಂಗ್ರೆಸ್ ನಾಯಕರ ಮಕ್ಕಳು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರೆಲ್ಲರಿಗೂ ಕಾಂಗ್ರೆಸ್ ಹೈಕಮಾಂಡ್ ನಿರಾಸೆ ತಂದಿದೆ.

   ಮೂಲಗಳ ಪ್ರಕಾರ ಕೇವಲ ಮೂವರು ಕಾಂಗ್ರೆಸ್ ನಾಯಕರ ಮಕ್ಕಳಿಗೆ ಮಾತ್ರ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮಕ್ಕಳಿಗೆ ಟಿಕೆಟ್ ನೀಡುವ ಸಂಭವ ಇದೆ. ಇವರಲ್ಲದೆ ಸುಮಾರು 8 ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

   ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ

   ಕಾಂಗ್ರೆಸ್ ನಾಯಕರ ಮಕ್ಕಳು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳನ್ನು ಅಳೆದು ತೂಗಿ ಈ ನಿರ್ಧಾರಕ್ಕೆ ಬರಲಾಗಿದೆಯಂತೆ. ಜತೆಗೆ ಜಾತಿ ರಾಜಕಾರಣವನ್ನೂ ಇಲ್ಲಿ ಲೆಕ್ಕ ಹಾಕಲಾಗಿದೆ.

   Only three children of Congress leaders to get ticket for Karnataka election

   ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಿಂದ ಟಿಕೆಟ್ ಪಡೆಯಲಿದ್ದಾರೆ. ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲಿದ್ದಾರೆ.

   ಕಾಂಗ್ರೆಸ್ಸಿನ ಕುಟುಂಬ ರಾಜಕೀಯದಿಂದ ಟಿಕೆಟ್ ಹಂಚಿಕೆ ಗೊಂದಲ

   ಇದೇ ಶುಕ್ರವಾರ 10 ಗಂಟೆಗೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಸೇರಲಿದ್ದು ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಒತ್ತಲಿದೆ. ಹೀಗಾಗಿ ಶುಕ್ರವಾರವೇ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The Congress’s list of candidates for the Karnataka assembly elections is expected to be announced anytime soon. The children of several leaders have made a beeline for a ticket, but the high command is likely to oblige only three.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ