Get Updates
Get notified of breaking news, exclusive insights, and must-see stories!

ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್‌; ಬಿಜೆಪಿ ಶಾಸಕನ ಸೆಳೆಯಲು ಡಿಕೆಶಿ ಯತ್ನ - ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಆಗಿದ್ದೇನು?

ಬೆಂಗಳೂರು, ಏಪ್ರಿಲ್‌ 23: ‌ಲೋಕಸಭಾ ಚುನಾವಣೆಯನ್ನ ಪರಿಷ್ಠೆಯಾಗಿ ತೆಗೆದುಕೊಂಡಿರುವ ಆಡಳಿತರೂಢ ಕಾಂಗ್ರೆಸ್‌ ಹಾಗೂ ಕಮಲ-ದಳ ಮೈತ್ರಿ ನಾಯಕರು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಇತ್ತ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ-ಜೆಡಿಎಸ್‌, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಹಲವು ತಂತ್ರಗಾರಿಕೆಯನ್ನ ನಡೆಸಿತ್ತು, ಇದೀಗ ಕಮಲ ಕಲಿಗಳಿಗೆ ಡಿ ಕೆ ಶಿವಕುಮಾರ್‌ ಬಿಗ್‌ ಶಾಕ್‌ ನೀಡಿದ್ದಾರೆ.

ಹೌದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಕಮಲ-ದಳ ನಾಯಕರು ಸಜ್ಜಾಗಿದ್ರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಅಸಮಾಧಾನಿತ ನಾಯಕರನ್ನ ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಕೊಟ್ಟ ಟಾರ್ಗೆಟ್‌ ಗೆ ಕೈ ನಾಯಕರು ಬಿಗ್‌ ಪ್ಲಾನ್‌ ನಡೆಸಿದ್ದಾರೆ. ಅಲ್ಲದೇ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸುತ್ತಿರುವ ಹೊತ್ತಲಿ ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಬಿಗ್‌ ಶಾಕ್‌ ನೀಡಿದ್ದಾರೆ.

Operation Hasta BJP Mlc KP Nanjundi joins Congress on April 24th

ಕಾಂಗ್ರೆಸ್‌ ನಾಯಕರ ಜೊತೆಗೆ ಈಗಾಗಲೇ ಬಿಜೆಪಿ ಹಲವು ನಾಯಕರು ಸಂಪರ್ಕದಲ್ಲಿದ್ದು, ಕಳೆದ ಒಂದು ವಾರದಿಂದ ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ಅವರು ಡಿ ಕೆ ಶಿವಕುಮಾರ್‌ ಅವರ ಜೊತೆಗೆ ಸಂಪರ್ಕದಲ್ಲಿದ್ದು, ಸೋಮವಾರ ಎಐಸಿಸಿ ಮಲ್ಲಿಕಾರ್ಜುನ್‌ ಖರ್ಗೆ ಅವರ ಸದಾಶಿವನಗರ ನಿವಾಸದಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಕೆ.ಪಿ ನಂಜುಂಡಿ ಚರ್ಚೆ ನಡೆಸಿದ್ದು, ಈ ವೇಳೆ ಕಾಂಗ್ರೆಸ್‌ ಪಕ್ಷವನ್ನ ಕರೆತರುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.

ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ. ಇನ್ನೂ ಪಕ್ಷ ಸೇರ್ಪಡೆ ಹಾಗೂ ಬಿಜೆಪಿಯಿಂದ ಆಗಿರುವ ಅನ್ಯಾಯದ ಕುರಿತು ಮಲ್ಲಿಕಾರ್ಜುನ್‌ ಖರ್ಗೆ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ಅವರು ಬಿಜೆಪಿಯಿಂದ ವಿಶ್ವಕರ್ಮ ಸಮುದಾಯಕ್ಕೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ವೇಳೆ ಪ್ರಾತಿನಿಧ್ಯ ನೀಡಿಲ್ಲ. ಜತೆಗೆ ಹಿಂದುಳಿದ ವರ್ಗಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ವೇಳೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಗೆ ಆಹ್ವಾನಿಸಿದ್ದರು ಎಂದು ಮಾಹಿತಿ ತಿಳಿದು ಬಂದಿದ್ದು, ಅಂತಿಮವಾಗಿ ನಾಳೆ (ಬುಧವಾರ) ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

Operation Hasta BJP Mlc KP Nanjundi joins Congress on April 24th

ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ

ವಿಧಾನಸಭೆಯಿಂದ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ಬಿಜೆಪಿ ನಾಯಕ ಕೆ.ಪಿ. ನಂಜುಂಡಿ ಅವರ ಪರಿಷತ್‌ ಸದಸ್ಯತ್ವ ಅವಧಿ ಜೂನ್‌ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನ ಭೇಟಿ ಮಾಡುವ ಮೂಲಕ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಅವರು ವಿಶ್ವಕರ್ಮ ಸಮುದಾಯದ ಪ್ರಬಲ ನಾಯಕರು ಆಗಿದ್ದರು. ಬಿಜೆಪಿ ನಾಯಕರಿಂದ ಅಸಮಾಧಾನಗೊಂಡಿರುವ ಕೆ.ಪಿ.ನಂಜುಂಡಿ ಅವರು ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ ಮಂಗಳವಾರ ಭೇಟಿ ಮಾಡಿ, ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ಕೆ.ಪಿ.ನಂಜುಂಡಿ ಅವರು ಮಾತನಾಡಿ, ನಾನು ಇಂದು ಸ್ವಯಂ ಪ್ರೇರಣೆಯಿಂದ ರಾಜ್ಯ ವಿಧಾನ ಪರಿಷತ್ ಗೆ ರಾಜೀನಾಮೆ ನೀಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಹೇಳಿದರು. ನಾನು ಮೂಲತಃ ರಾಜಕಾರಣಿ ಅಲ್ಲಾ ಸಮಾಜಕ್ಕೆ ಏನನ್ನಾದರೂ ಮಾಡಬೇಕು ಎನ್ನುವ ಕಾರಣಕ್ಕಾಗಿ ರಾಜಕೀಯಕ್ಕೆ ಬಂದೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಏನ್ನನ್ನಾದರು ಕೊಡಬೇಕು ಅನ್ನು ಕಾರಣದಿಂದ ಬಂದೆ. ಇನ್ನು ವಿಶ್ವಕರ್ಮ ಸಮಾಜಕ್ಕೆ ಏನಾದರೂ ಸಿಗಬಹುದು ಎನ್ನುವ ಭರವಸೆ ಹುಸಿಯಾಯಿತು ಎಂದು ಹೇಳೀದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+