ಬೆಳಗಾವಿ ಸಂಸದೆ ಮಂಗಳಾರನ್ನು ಮುಂದು ತಂದು ನಿಲ್ಲಿಸಿದ ಸಿಎಂ: ಬಿಜೆಪಿಯಲ್ಲಿ ತಳಮಳ, ಆಪರೇಷನ್‌ 'ಹಸ್ತ'ದ ವಾಸನೆ

ಬೆಂಗಳೂರು, ಜನವರಿ 17: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಗೆ ಮುಂದಿನ ಲೋಕಸಭಾ ಚುನಾವಣೆ ಪ್ರತಿಷ್ಠೆಯಾಗಿದೆ. ಇತ್ತಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನ ಹಲವು ನಾಯಕರಿಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದಾರೆ.

ಹೌದು, ಲೋಕಸಭಾ ಚುನಾವಣೆಯಲ್ಲಿ ಕೆಲವು ಪ್ರಮುಖ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ತಯಾರಿ ನಡೆಸಿದ್ದು, ಸೂಕ್ತ ಅಭ್ಯರ್ಥಿಯನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಸರಣಿ ಸಭೆಗಳನ್ನ ನಡೆಸಿದ್ದಾರೆ. ಇತ್ತ ಕಾಂಗ್ರೆಸ್‌ ಹೈಕಮಾಂಡ್‌ 10 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಸಚಿವರನ್ನ ಕಣಕ್ಕಿಳಿಸುವ ಕುರಿತು ಚಿಂತನೆ ಹಾಕಿಕೊಂಡಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಚಿವರು ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ನಾಯಕರಿಗೆ ಸೂಕ್ತ ಅಭ್ಯರ್ಥಿಯ ಹುಡುಕಾಟವೇ ದೊಡ್ಡ ತಲೆನೋವಾಗಿದೆ.

Operation Hasta: Siddaramaiah Meets Belagavi MP Mangala Suresh Angadi, Sparks Panic in Karnataka BJP

ಈಗಾಗಲೇ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಮಂಗಳ ಅಂಗಡಿಯವರಿಗೆ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗಿದೆ. ಇತ್ತ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನ ಕಣಕ್ಕಿಳಿಸುವ ಮಾಸ್ಟರ್‌ ಪ್ಲಾನ್‌ ಹೈಕಮಾಂಡ್‌ ನಡೆಸಿದ್ದು, ರಾಷ್ಟ್ರ ರಾಜಕಾರಣದ ಬಗ್ಗೆ ಆಸಕ್ತಿ ಇಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ. ಇತ್ತ ಮಕ್ಕಳ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸತೀಶ್‌ ಜಾರಕಿಹೊಳಿ ಅವರು ಪುತ್ರಿ ಪ್ರಿಯಾಂಕ್‌ ಜಾರಕಿಹೊಳಿ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪ್ಲಾನ್‌ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸತೀಶ್‌ ಜಾರಕಿಹೊಳಿ ಮಾತ್ರವಲ್ಲದೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಹ ತಮ್ಮ ಪುತ್ರನನ್ನ ಕಣಕ್ಕಿಳಿಸುವ ಕುರಿತು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

Operation Hasta: Siddaramaiah Meets Belagavi MP Mangala Suresh Angadi, Sparks Panic in Karnataka BJP

ಈ ನಡುವೆ ಬಿಜೆಪಿ ಸಂಸದರಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನ ಕಾಂಗ್ರೆಸ್‌ ಪಡೆಯಲು ಪಣತೊಟ್ಟಿದ್ದು, ಬಿಜೆಪಿ ಹಾಲಿ ಸಂಸದರಾಗಿರುವ ಮಂಗಳ ಅಂಗಡಿ ಅವರನ್ನ ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಪ್ರಯತ್ನಗಳ ನಡೆಯುತ್ತಿವೆ ಎನ್ನಲಾಗಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರದ ಅಭಿವೃದ್ಧಿ ವತಿಯಿಂದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಸಂಗೊಳ್ಳಿ ರಾಯಣ್ಣ ಭೋಜನ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಸಂಸದೆ ಮಂಗಳ ಅಂಗಡಿ ಅವರು ಭಾಗಿಯಾಗಿದ್ಧಾರೆ. ಈ ವೇಳೆ ಸಿದ್ದರಾಮಯ್ಯ ಅವರು ಬೆಳಗಾವಿ ಸಂಸದೆ ಮಂಗಳಾರನ್ನು ಮುಂದು ತಂದು ನಿಲ್ಲಿಸಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸ ಮುಖಗಳಿಂದ ಟಿಕೆಟ್‌ ಗೆ ಬೇಡಿಕೆ ಹೆಚ್ಚಾಗಿದೆ. ಇತ್ತ ಬಿಜೆಪಿ ಹಾಲಿ ಸಂಸದರಾದ ಮಂಗಳ ಅಂಗಡಿ ಅವರನ್ನ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಮಂಗಳ ಅಂಗಡಿ ಅವರನ್ನ ಕಾಂಗ್ರೆಸ್‌ ಪಕ್ಷ ಕರೆತರುವ ಮೂಲಕ ಮುಂದಿನ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ನಿಟ್ಟಿನಲ್ಲಿ ಕೈ ನಾಯಕರು ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+