• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಪರೇಷನ್ ಕಮಲ : ಮುಂಬೈನಲ್ಲಿದ್ದಾರೆ ಅತೃಪ್ತ ಕಾಂಗ್ರೆಸ್ ಶಾಸಕರು

|

ಬೆಂಗಳೂರು, ಫೆಬ್ರವರಿ 06 : ರಾಜ್ಯದಲ್ಲಿ ಆಪರೇಷನ್ ಕಮಲ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ನ ಕೆಲವು ಅತೃಪ್ತ ಶಾಸಕರು ಮುಂಬೈನಲ್ಲಿದ್ದಾರೆ ಎಂಬ ಮಾಹಿತಿ ಇದೆ. ಬಜೆಟ್ ಅಧಿವೇಶನಕ್ಕೆ ಹಾಜರಾಗಬೇಕು ಎಂದು ಕಾಂಗ್ರೆಸ್ ಎಲ್ಲಾ ಶಾಶಕರಿಗೆ ವಿಪ್ ಜಾರಿ ಮಾಡಿದೆ.

ವಿಧಾನ ಮಂಡಲದ ಬಜೆಟ್ ಅಧಿವೇಶನ ಬುಧವಾರ ಆರಂಭವಾಗಿದೆ. ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಆದರೆ, ಕಾಂಗ್ರೆಸ್‌ನ 8, ಜೆಡಿಎಸ್‌ನ ಒಬ್ಬರು ಶಾಸಕರು ಇಂದು ಸದನಕ್ಕೆ ಗೈರಾಗಿದ್ದರು.

ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ‌ ಇದ್ದಾರೆ:ಯುಟಿ ಖಾದರ್

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮೊದಲು ಗುರುವಾರ ಸದನದಲ್ಲಿ ಏನಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಅತೃಪ್ತ ಶಾಸಕ ಜಾಧವ್ ಒಲಿಸಿಕೊಳ್ಳಲು ಕೆಪಿಸಿಸಿ ಕಸರತ್ತು

ಸದನಕ್ಕೆ ಗೈರಾಗಿರುವ ಶಾಸಕರು ಮುಂಬೈನಲ್ಲಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಎಷ್ಟು ಜನ ಶಾಸಕರು ಇದ್ದಾರೆ ಎಂಬ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಎಲ್ಲಾ ಶಾಸಕರು ಗುರುವಾರ ಒಟ್ಟಾಗಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ....

ಅಧಿವೇಶನಕ್ಕೆ ಆರು 'ಕೈ' ಶಾಸಕರು ಗೈರು? ಬಿಜೆಪಿಯ ಭಾರಿ ರಣತಂತ್ರ

9 ಶಾಸಕರು ಗೈರು

9 ಶಾಸಕರು ಗೈರು

ಬುಧವಾರ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್‌ನ 8, ಜೆಡಿಎಸ್‌ನ ಒಬ್ಬರು ಶಾಸಕರು ಗೈರಾಗಿದ್ದಾರು. ಕಾಂಗ್ರೆಸ್‌ನಲ್ಲಿ ಗೈರಾರದವ ಪೈಕಿ ಎಲ್ಲರೂ ಅತೃಪ್ತರ ಬಣದಲ್ಲಿ ಗುರುತಿಸಿಕೊಂಡ ಶಾಸಕರು. ಶಾಸಕರಾದ ರಮೇಶ್ ಜಾರಕಿಹೊಳಿ (ಗೋಕಾಕ್), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮಾಂತರ), ಮಹೇಶ್ ಕುಮಟಳ್ಳಿ (ಅಥಣಿ), ಡಾ.ಕೆ.ಸುಧಾಕರ್ (ಚಿಕ್ಕಬಳ್ಳಾಪುರ), ಬಿ.ಸಿ.ಪಾಟೀಲ್ (ಹಿರೆಕೇರೂರು). ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮುಳಬಾಗಿಲು ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಶಾಸಕ ಆರ್.ಶಂಕರ್ ಸಹ ಗೈರಾಗಿದ್ದರು.

ಎಲ್ಲರೂ ಗುರುವಾರ ಬರ್ತಾರೆ

ಎಲ್ಲರೂ ಗುರುವಾರ ಬರ್ತಾರೆ

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು, 'ಯಾವ ಶಾಸಕರು ರಾಜೀನಾಮೆ ಕೊಡುವುದಿಲ್ಲ. ಗುರುವಾರ ಸದನಕ್ಕೆ ಎಲ್ಲರೂ ಆಗಮಿಸುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಸರ್ಕಾರದ ಬಲ 114

ಮೈತ್ರಿ ಸರ್ಕಾರದ ಬಲ 114

224 ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ 117 ಸದಸ್ಯರ ಬಲವನ್ನು ಹೊಂದಿದೆ. ಇವುಗಳಲ್ಲಿ ಕೆಪಿಜೆಪಿ, ಬಿಎಸ್‌ಪಿ ಮತ್ತು ಪಕ್ಷೇತರ ಶಾಸಕ ಎಚ್.ನಾಗೇಶ್ ಸೇರಿದ್ದಾರೆ. ಆದರೆ, ಕೆಪಿಜೆಪಿಯ ಆರ್.ಶಂಕರ್ ಮತ್ತು ಎಚ್.ನಾಗೇಶ್ ತಮ್ಮ ಬೆಂಬಲ ವಾಪಸ್ ಕೊಡುವುದಾಗಿ ಹಿಂದೆ ಹೇಳಿದ್ದರು. ಆದರೆ, ಅವರಿನ್ನೂ ರಾಜ್ಯಪಾಲರನ್ನು ಭೇಟಿಯಾಗಿ ಪತ್ರವನ್ನು ನೀಡಿಲ್ಲ. ಬಿಜೆಪಿಯ ಬಲ 104.

ಗುರುವಾರ ರಾಜೀನಾಮೆ?

ಗುರುವಾರ ರಾಜೀನಾಮೆ?

ಅತೃಪ್ತ ಶಾಸಕರು ಗುರುವಾರ ರಾಜೀನಾಮೆ ನೀಡಲಿದ್ದಾರೆಯೇ? ಎಂಬ ಸುದ್ದಿ ಹಬ್ಬಿದೆ. ಬುಧವಾರ ರಾತ್ರಿ ಮುಂಬೈನಿಂದ ಎಲ್ಲರೂ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಗುರುವಾರ ಸ್ಪೀಕರ್ ರಮೇಶ್ ಕುಮಾರ್ ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
As a part of the operation kamala number of Karnataka Congress MLA's in Mumbai. While the exact figure could not be confirmed. 9 MLA's including two independents may in Mumbai hotel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more